Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಪರಿಸರ ಸಮತೋಲನಕ್ಕೆ ವೃಕ್ಷ...

ವಾಡಿ | ಪರಿಸರ ಸಮತೋಲನಕ್ಕೆ ವೃಕ್ಷ ಪ್ರೇಮಿಗಳ ಸಂಖ್ಯೆ ಹೆಚ್ಚಬೇಕು : ಶರಣಗೌಡ ಪಾಟೀಲ ಚಾಮನೂರ

ವಾರ್ತಾಭಾರತಿವಾರ್ತಾಭಾರತಿ7 Aug 2026 7:38 PM IST
share
ವಾಡಿ | ಪರಿಸರ ಸಮತೋಲನಕ್ಕೆ ವೃಕ್ಷ ಪ್ರೇಮಿಗಳ ಸಂಖ್ಯೆ ಹೆಚ್ಚಬೇಕು : ಶರಣಗೌಡ ಪಾಟೀಲ ಚಾಮನೂರ

ವಾಡಿ : ಭೂಮಿಯ ಮೇಲಿನ ನೈಸರ್ಗಿಕ ಸಂಪತ್ತನ್ನು ಉಳಿಸಿ, ಪರಿಸರ ಸಮತೋಲನ ಕಾಪಾಡಬೇಕಾದರೆ ವೃಕ್ಷ ಪ್ರೇಮಿಗಳ ಸಂಖ್ಯೆ ಹೆಚ್ಚಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣಗೌಡ ಪಾಟೀಲ ಚಾಮನೂರ ಹೇಳಿದರು.

ಪಟ್ಟಣದ ಶೈಕ್ಷಣಿಕ ಸಂಕೀರ್ಣದಲ್ಲಿ ಬೆಳಗಿನ ಬಳಗದ ವತಿಯಿಂದ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಡು-ಮರಗಳು ಸಮೃದ್ಧವಾಗಿದ್ದಾಗ ಮಾತ್ರ ಉತ್ತಮ ಮಳೆ, ಉತ್ತಮ ಬೆಳೆ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಹಿಂದೆ ಸರ್ಕಾರಿ ಶಾಲೆಗಳಲ್ಲಿ ಪರಿಸರ ಸಂರಕ್ಷಣೆ, ಕೈತೋಟಗಳ ಮಹತ್ವ ಹಾಗೂ ಗಿಡಮರಗಳ ಆರೈಕೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತಿತ್ತು. ಕೃಷಿ, ವನ ಸಂರಕ್ಷಣೆ ಹಾಗೂ ಔಷಧೀಯ ಸಸ್ಯಗಳ ಮಹತ್ವವನ್ನು ಮಕ್ಕಳಿಗೆ ಪರಿಚಯಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಪರಿಸರ ಶಿಕ್ಷಣ ಕಣ್ಮರೆಯಾಗುತ್ತಿರುವುದು ವಿಷಾದನೀಯ. ಶಾಲಾ ಹಂತದಲ್ಲಿಯೇ ಪರಿಸರ ಜಾಗೃತಿ ಮೂಡಿಸಿದಾಗ ಮಾತ್ರ ಮುಂದಿನ ಪೀಳಿಗೆಯಲ್ಲಿ ವೃಕ್ಷ ಪ್ರೇಮ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಯೋಗ ಶಿಕ್ಷಕ ಮಲ್ಲಯ್ಯಸ್ವಾಮಿ ಮಠಪತಿ ಮಾತನಾಡಿ, ಅರಣ್ಯ ಪ್ರದೇಶಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿನ ಮರಗಳ ನಾಶದಿಂದ ಪರಿಸರ ಸಮತೋಲನ ಹದಗೆಡುತ್ತಿದ್ದು, ಅದರ ಪರಿಣಾಮ ಮಾನವ ಹಾಗೂ ಪ್ರಾಣಿ ಸಂಕುಲದ ಮೇಲೂ ಬೀಳುತ್ತಿದೆ. ಪ್ರತಿಯೊಬ್ಬರೂ ವರ್ಷಕ್ಕೊಂದು ಸಸಿ ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ಬಳಗದ ಜಯದೇವ ಜೋಗಿಕಲ್ ಮಠ, ಕಾಶೀನಾಥ ಶಟಗಾರ, ಭೀಮಶಾ ಜಿರೊಳ್ಳಿ, ಮಡಿವಾಳಪ್ಪ ಹೇರೂರ, ಬಸವರಾಜ ಕೇಶ್ವಾರ, ಭೀಮರಾವ ದೊರೆ, ಶ್ರೀನಾಥ ಇರಗೊಂಡ, ಭೀಮಣ್ಣ ಹವಾಲ್ದಾರ್, ಓಂಪ್ರಕಾಶ ಬಡಿಗೇರ, ದಯಾನಂದ ಖಜೂರಿ, ಮುಹಮ್ಮದ್‌ ಅಝೀಝ್‌ ತೇಲಿ, ಈರಣ್ಣ ಯಲಗಟ್ಟಿ, ಗುಂಡಪ್ಪ ಭಂಕೂರ, ಭೀಮಾ ನಾಟೇಕರ ಸೇರಿದಂತೆ ಹಲವರು ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X