Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪ್ರಜ್ವಲ್ ಕೈ ಹಿಡಿದು ಮತಯಾಚನೆ...

ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಪೆನ್ ಡ್ರೈವ್ ವಿಚಾರದಲ್ಲಿ ಮೋದಿಯನ್ನು ಪ್ರಶ್ನೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ2 May 2024 11:56 AM IST
share
ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಪೆನ್ ಡ್ರೈವ್ ವಿಚಾರದಲ್ಲಿ ಮೋದಿಯನ್ನು ಪ್ರಶ್ನೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ, ಮೇ 02:"ಪ್ರಧಾನ ಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪೆನ್ ಡ್ರೈವ್ ವಿಚಾರದಲ್ಲಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ" ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಮಂತ್ರಿಗಳನ್ನು ಯಾಕೆ ಎಳೆದು ತರುತ್ತೀರಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳ ಮುಂದೆ ಡಿಕೆಶಿ ಈ ರೀತಿ ಪ್ರತಿಕ್ರಿಯಿಸಿದರು.

ಪ್ರಜ್ವಲ್ ಬಂಧಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಲಿ ಎಂಬ ಆರ್ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ಅಶೋಕ್ ಅವರು ವಿರೋಧ ಪಕ್ಷದ ನಾಯಕರು. ಬೇರೆ ವಿಚಾರಗಳಲ್ಲಿ ವಾಗ್ದಾಳಿ ಮಾಡುತ್ತಿದ್ದವರು ಈ ಪ್ರಕರಣಗಳಲ್ಲಿ ಯಾಕೆ ಮಾತನಾಡುತ್ತಿಲ್ಲ. ಅವರು ತಮ್ಮ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ಶೋಭಕ್ಕ, ಸಿ.ಟಿ ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಯಾಕೆ ಭೇಟಿ ಮಾಡುತ್ತಿಲ್ಲ. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಬೇಕು ಎಂದು ಹೇಳಿದರು.

ಅಶೋಕ್, ಪ್ರಜ್ವಲ್ ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ ಎಂದಿದ್ದಾರೆ. ಹೌದು, ಅವರು ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ. ಹೀಗಾಗಿ ನಾವು ಪ್ರಶ್ನೆ ಮಾಡುತ್ತಿದ್ದೇವೆ. ಈಗ ನಿಮ್ಮ ಬೆಂಬಲದೊಂದಿಗೆ ಅಭ್ಯರ್ಥಿಯಾಗಿದ್ದಾರಲ್ಲ ನೀವು ಯಾಕೆ ಮೌನವಾಗಿದ್ದೀರಿ?" ಎಂದು ಪ್ರಶ್ನಿಸಿದರು.

ಕಾರ್ತಿಕ್ ಅವರನ್ನು ಮಲೇಷ್ಯಾದಲ್ಲಿ ಇಟ್ಟವರು ಯಾರು? ಎಲ್ಲವೂ ಬ್ರದರ್ಸ್ ಆಟ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, "ಹೀಗಂತ ನಮ್ಮ ಬ್ರದರ್ ಹೇಳಿದ್ದಾರಾ? ಹಾಗಿದ್ದರೆ ಅವರಿಗೆ ಎಲ್ಲಾ ವಿಚಾರ ಗೊತ್ತಿರಬೇಕಲ್ಲ. ಕೇಂದ್ರ ಸರ್ಕಾರಕ್ಕೆ ಹೇಳಿ, ಯಾರು ಯಾರನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಮಾಹಿತಿ ಪಡೆಯಲಿ. ಅವರನ್ನು ವಿದೇಶಕ್ಕೆ ಕಳುಹಿಸಲು ನನಗೆ ತಲೆ ಕೆಟ್ಟಿದೆಯಾ? ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಯಾರನ್ನೋ ತೋಟದಲ್ಲಿ ಬಚ್ಚಿಟ್ಟು ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಅವರಿಗೆ ಆ ಅವಶ್ಯಕತೆ ಇದೆ. ಬಿಜೆಪಿ ನಾಯಕರಿಗೆ ಪೆನ್ ಡ್ರೈವ್ ನೀಡಿರುವುದಾಗಿ ಆ ಹುಡುಗ ಹೇಳಿದ್ದಾನೆ. ಇನ್ನು ವಕೀಲರು ನನಗೆ ಕುಮಾರಣ್ಣ ಹಾಗು ಗೌಡರ ಮೇಲೆ ಅಭಿಮಾನ ಅವರಿಗೆ ಭೇಟಿ ಮಾಡಿ ತಿಳಿಸಿದ್ದೆ ಎಂದಿದ್ದಾರಲ್ಲಾ.ಈ ಪೆನ್ ಡ್ರೈವ್ ಯಾರು ಬಿಟ್ಟಿದ್ದಾರೆ ಎಂಬುದನ್ನು ಮುಂದೆ ಚರ್ಚೆ ಮಾಡೋಣ. ಈಗ ವಿಚಾರ ವಿಷಯಾಂತರ ಮಾಡುವುದು ಬೇಡ" ಎಂದರು.

"ಎರಡನೇ ಹಂತದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು, ಈ ಐದೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕೊಟ್ಟಿರುವ ಕೊಡುಗೆ ಬಗ್ಗೆ ಜನರಿಗೆ ಅರಿವಿದೆ. ಅವರ ಸೋಲಿಗೆ ನಾವೆಲ್ಲಾ ಪಶ್ಚಾತಾಪ ಪಟ್ಟಿದ್ದೇವೆ. ಹೀಗಾಗಿ ಅವರ ಸೇವೆಗೆ ಈ ಭಾಗದ ಜನ ಉಪಕಾರ ಸ್ಮರಣೆ ಮಾಡಲಿದ್ದಾರೆ.ಶೋಷಿತ ವರ್ಗದವರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಕ್ತಿ ತುಂಬಿದಂತೆ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಮಲ್ಲಿಕಾರ್ಜುನ ಖರ್ಗೆ ಅವರು ಶಕ್ತಿ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್, ಸವದಿ, ಮಾಲಿಕಯ್ಯ ಗುತ್ತೇದಾರ್ ಅವರು ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಇವರ ಜತೆಗೆ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ. ಇನ್ನು 93% ನಷ್ಟು ಜನ ನಮ್ಮ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಮಹಿಳೆಯರಿಗೆ, ಕಾರ್ಯಕರ್ತರಿಗೆ ಚೊಂಬು ನೀಡಿದೆ. ಕಾಂಗ್ರೆಸ್ ಪಕ್ಷದ ಯೋಜನೆಗಳಿಂದ ಬದುಕು ಸಾಗಿಸಲು ನೆರವಾಗಿದೆ ಎಂದು ಮನವರಿಕೆಯಾಗಿದೆ. ಹೀಗಾಗಿ ಈ ಭಾಗದಲ್ಲಿ ಜನ ಬಹಳ ಉತ್ಸಾಹದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ." ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X