Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ...

ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಿಕ್ಕಿದ್ದೇನು?

ವಾರ್ತಾಭಾರತಿವಾರ್ತಾಭಾರತಿ6 March 2026 9:01 PM IST
share
ರಾಜ್ಯ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಸಿಕ್ಕಿದ್ದೇನು?

ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿಗೆ ಐತಿಹಾಸಿಕ ಬಜೆಟ್ ಮಂಡಿಸಿದ್ದು, ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಕೆಕೆಆರ್ ಡಿಬಿ ಮಂಡಳಿಗೆ 5,000 ಕೋಟಿ ರೂ.ಗಳ ಅನುದಾನ ಹಾಗೂ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿದೆ.

ಮಂಡಳಿಯ ವಿವೇಚನಾ ಹಾಗೂ ಮ್ಯಾಕ್ರೋ ಅನುದಾನಗಳಲ್ಲಿ ಶೇ.40ರಷ್ಟು ಮೊತ್ತವನ್ನು ಆರೋಗ್ಯ, ಶಿಕ್ಷಣ ಹಾಗೂ ಅಪೌಷ್ಟಿಕತೆ ನಿವಾರಣೆ ಕಾರ್ಯಕ್ರಮಗಳಿಗೆ ಮೀಸಲಿಡಲಾಗಿದೆ. ರಾಯಚೂರಿನಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹ ನಿರ್ಮಾಣ ಮಾಡಲಾಗುವುದರ ಜೊತೆಗೆ ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಯಾದಗಿರಿ, ಕೊಪ್ಪಳ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಟ್ಟು 24 ಕೋಟಿ ರೂ. ವೆಚ್ಚದಲ್ಲಿ ಆರು ಹೊಸ ತಾರಾಲಯಗಳನ್ನು ಸ್ಥಾಪಿಸಲಾಗುವುದು.

ಕಲಬುರಗಿಯಲ್ಲಿ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್‌ಗೆ 390 ಕೋಟಿ ರೂ. ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಈ ಆರ್ಥಿಕ ವರ್ಷದಲ್ಲಿ 75 ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಅಲ್ಲದೇ 400 ಕೋಟಿ ರೂ. ಅಂದಾಜು ವೆಚ್ಚದಲ್ಲಿ 135 ಕಿ.ಮೀ ಉದ್ದದ ವಾಗ್ದಾರಿ–ರಿಬ್ಬನ್‌ಪಳ್ಳಿ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯನ್ನು ಕೆಕೆಆರ್‌ಡಿಬಿ ವತಿಯಿಂದ ಶೇ.50ರಷ್ಟು ಅನುದಾನ ಒದಗಿಸಿಕೊಂಡು ಕೈಗೆತ್ತಿಕೊಳ್ಳಲಾಗುತ್ತದೆ.

ಬೀದರ್ ಮಹಾನಗರ ಪಾಲಿಕೆಗೆ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ 200 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಕಲಬುರಗಿ ನಗರಕ್ಕೆ 24x7 ಗುಣಮಟ್ಟದ ಕುಡಿಯುವ ನೀರು ಒದಗಿಸುವ ಕಾಮಗಾರಿಗಳಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಉದ್ಯಮ–ಶಿಕ್ಷಣ ಸಹಭಾಗಿತ್ವದ LEAP “Super 100 Industry–Academia Adoption Program” ಹಾಗೂ ಕೆ-ಕಾಂಬಿನೇಟರ್ ವೇಗವರ್ಧಕ ಕಾರ್ಯಕ್ರಮ ಜಾರಿಗೆ ತರಲಾಗುತ್ತದೆ. ಕಲಬುರಗಿ, ಹೊಸಕೋಟೆ ಮತ್ತು ಮೈಸೂರಿನಲ್ಲಿ ಪ್ಲಗ್-ಅಂಡ್-ಪ್ಲೇ ಸೌಲಭ್ಯ ಹೊಂದಿದ ‘ಲೀಪ್ ಲ್ಯಾಬ್’ಗಳನ್ನು ಸ್ಥಾಪಿಸಲಾಗುತ್ತದೆ.

ಕೆಕೆಆರ್‌ಡಿಬಿ ಹಾಗೂ ರಾಜ್ಯ ಸರ್ಕಾರದ ನೆರವಿನಿಂದ ಆಳಂದ, ಅಫಜಲಪುರ, ಚಿತ್ತಾಪುರ, ಯಾದಗಿರಿ, ಹರಪನಹಳ್ಳಿ, ಜೇವರ್ಗಿ ಮತ್ತು ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ವ್ಯವಸ್ಥೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಜೇವರ್ಗಿಯಲ್ಲಿ ಕೆಕೆಆರ್‌ಡಿಬಿ ಅನುದಾನದಡಿ ನಾಲೆಡ್ಜ್ ಪಾರ್ಕ್ ಸ್ಥಾಪಿಸಲಾಗುತ್ತದೆ ಎಂದರು.

ರಾಜ್ಯದ ಜಿಎಸ್‌ಡಿಪಿಗೆ ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಪ್ರತ್ಯೇಕ ಯೋಜನೆ, ನೀತಿ ಮತ್ತು ದತ್ತಾಂಶ ವಿಶ್ಲೇಷಣಾ ವಿಭಾಗ ಸ್ಥಾಪನೆ ಮಾಡಲಾಗುತ್ತದೆ. ಬೀದರ್‌ನ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಕಲಬುರಗಿ ಮತ್ತು ಬಳ್ಳಾರಿಯಲ್ಲಿ 150 ಸಂಖ್ಯಾಬಲದ 50 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುತ್ತದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಭೇಟಿ ನೀಡಿದ ಕಲಬುರಗಿ, ವಿಜಯಪುರ, ಬೆಳಗಾವಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅವರ ಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದ ನಾಲ್ಕು ಕ್ರೈಸ್ ವಸತಿ ಶಾಲೆಗಳು ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗಾಗಿ ಬೆಂಗಳೂರು, ಮೈಸೂರು ಸೇರಿದಂತೆ ಕಲಬುರಗಿಯಲ್ಲಿ 10 ವಸತಿ ನಿಲಯಗಳನ್ನು ಪ್ರಾರಂಭಿಸಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗುತ್ತದೆ.

ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪನೆಗೆ ಒಂದು ಕೋಟಿ ರೂ. ಅನುದಾನ ನೀಡಲಾಗುತ್ತದೆ. ಯಾದಗಿರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತದೆ ಎಂದು ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ಹೇಳಿದರು.

ಗಣಿ ಬಾಧಿತ ಜಿಲ್ಲೆಗಳಾದ ಬಳ್ಳಾರಿ ಸೇರಿದಂತೆ ಇತರೆ ಜಿಲ್ಲೆಗಳ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುತ್ತದೆ. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡಲಾಗುತ್ತದೆ. ಖ್ವಾಜಾ ಬಂದೇನವಾಜ್ ಕುರಿತು ಅಹೋರಾತ್ರಿ ನಾಟಕ ಪ್ರದರ್ಶನವೂ ಆಯೋಜಿಸಲಾಗುತ್ತದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪದವಿ ಕಾಲೇಜು, 23 ಪಾಲಿಟೆಕ್ನಿಕ್ ಹಾಗೂ 5 ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಆಧುನೀಕರಣ, ಅಣೆಕಟ್ಟು ಹಾಗೂ ಚೆಕ್‌ಡ್ಯಾಂ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಗ್ರಾಮದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲಾಗುತ್ತದೆ. ಹಜ್ ಯಾತ್ರಿಕರಿಗಾಗಿ ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.

ಕುರಿ ಮತ್ತು ಮೇಕೆ ಸಾಕಾಣಿಕೆ ಪ್ರೋತ್ಸಾಹಿಸಲು ಆಯ್ದ 10,000 ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಲ್ಲಿ ಘಟಕಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಹೈನುಗಾರಿಕೆಗೆ ಉತ್ತೇಜನ ನೀಡಲು ಆಯ್ದ 10,000 ಫಲಾನುಭವಿಗಳಿಗೆ ಹಸು ಅಥವಾ ಎಮ್ಮೆ ಖರೀದಿಸಲು ಶೇ.25ರಷ್ಟು ಸಹಾಯಧನ ನೀಡಲಾಗುತ್ತದೆ. ಈ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ 40 ಕೋಟಿ ರೂ. ಮೀಸಲು ಇಡಲಾಗಿದೆ.

2026–27ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 62 ಶ್ರಮಿಕ ವಸತಿ ಶಾಲೆಗಳನ್ನು ಪ್ರಾರಂಭಿಸುವ ಉದ್ದೇಶವಿದ್ದು, ಕಲಬುರಗಿ ಜಿಲ್ಲೆಯ ಚಿತ್ತಾಪುರ, ಆಳಂದ ಮತ್ತು ಅಫಜಲಪುರದಲ್ಲಿ ಶಾಲೆಗಳು ಆರಂಭವಾಗಲಿವೆ ಎಂದು ಹೇಳಿದರು.

ಕಲಬುರಗಿಯಲ್ಲಿ 16 ಕೋಟಿ ರೂ. ವೆಚ್ಚದಲ್ಲಿ ಷ್ನೈಡರ್ ಎಲೆಕ್ಟ್ರಿಕ್ ಯೂತ್ ಇಂಪ್ಯಾಕ್ಟ್ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಇದರಿಂದ ಪ್ರತಿವರ್ಷ ಸುಮಾರು 2,000 ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಉದ್ಯೋಗಾವಕಾಶ ದೊರೆಯಲಿದೆ.

ಇದಲ್ಲದೆ ಲೋಕೋಪಯೋಗಿ ಇಲಾಖೆಯ ಮೂಲಕ ಚಡಚಣ–ಗಾಣಗಾಪುರ ರಸ್ತೆ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಮೂಲಕ ಗದಗ–ವಾಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಿದರು.

Tags

Karnataka Budget 2026Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X