ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ : ಝಮೀರ್ ಅಹ್ಮದ್ ಖಾನ್

ಝಮೀರ್ ಅಹ್ಮದ್
ಕಲಬುರಗಿ : ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರೂ, ನಮ್ಮ ಬೆಂಬಲ ಕೇಂದ್ರ ಸರಕಾರಕ್ಕಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದರು.
ಈ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರೂ, ನಮ್ಮ ಪಕ್ಷದಿಂದ ಬೆಂಬಲವಿದೆ ಎಂದು ಈಗಾಗಲೇ, ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಪಾಕಿಸ್ತಾನ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದ ಎಂದು ಸ್ಪಷ್ಟಪಡಿಸಿದರು.
ಸಿ.ಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಈಗಲೂ ನನ್ನ ಹೇಳಿಕೆಗೆ ಬದ್ದನಿದ್ದೇನೆ. ಸಿ.ಟಿ.ರವಿಗೆ ಕೆಲಸವೇನು ಇಲ್ಲ. ಅದಕ್ಕಾಗಿ ಹೀಗೆಲ್ಲಾ ಮಾತನಾಡುತ್ತಾರೆ. ನಮಗೆ ನಮ್ಮ ದೇಶ ಮುಖ್ಯ. ಅದಕ್ಕಾಗಿ ನಾನು ಯುದ್ದಕ್ಕೆ ಹೋಗುತ್ತೇನೆ ಎಂದು ಪ್ರತಿಕ್ರಿಯಿಸಿದರು.
Next Story





