Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಡ್ರಾಮಿ | ವಿಜೃಂಭಣೆಯ ಕುಳಗೇರಿಯ ಶ್ರೀ...

ಯಡ್ರಾಮಿ | ವಿಜೃಂಭಣೆಯ ಕುಳಗೇರಿಯ ಶ್ರೀ ಬೆಣ್ಣೆ ಬಸವೇಶ್ವರ ರಥೋತ್ಸವ

ವಾರ್ತಾಭಾರತಿವಾರ್ತಾಭಾರತಿ24 March 2026 10:05 PM IST
share
ಯಡ್ರಾಮಿ | ವಿಜೃಂಭಣೆಯ ಕುಳಗೇರಿಯ ಶ್ರೀ ಬೆಣ್ಣೆ ಬಸವೇಶ್ವರ ರಥೋತ್ಸವ

ಯಡ್ರಾಮಿ: ಜಾತ್ರೆ, ಹಬ್ಬಗಳ ಆಚರಣೆಯಿಂದ ಸಾಮಾಜಿಕ ಸೌಹಾರ್ದತೆ ಸಾಧ್ಯವಾಗುತ್ತದೆ ಎಂದು ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತುಂಜಯ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

ತಾಲೂಕಿನ ಕುಳಗೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಶ್ರೀ ಬೆಣ್ಣೆ ಬಸವೇಶ್ವರ ರಥೋತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಮಾತನಾಡಿ, ಜಾತ್ರೆಗಳಲ್ಲಿ ಜಾತಿ ತಾರತಮ್ಯ ಕಾಣುವುದಿಲ್ಲ. ತಿಂಡಿ, ತೆಂಗು, ಹೂವು, ಹಣ್ಣು ಹಾಗೂ ಬಳೆ ಮಾರಾಟ ಮಾಡುವ ವ್ಯಕ್ತಿ ಯಾವ ಜಾತಿ, ಧರ್ಮದವರು ಎಂದು ಕೇಳಿ ಭಕ್ತರು ಖರೀದಿಸುವುದಿಲ್ಲ. ಕೇವಲ ಶ್ರದ್ಧೆ, ಭಕ್ತಿಯಿಂದ ಜಾತ್ರೆ ಉತ್ಸವ ಹಬ್ಬಗಳನ್ನು ಆಚರಿಸುತ್ತಾರೆ. ಆದ್ದರಿಂದ ಜಾತ್ರೆ, ಉತ್ಸವ, ಹಬ್ಬಗಳು ನಮ್ಮ ದೇಶದ ಸಾಮಾಜಿಕ ಸೌಹಾರ್ದತೆ ಕಾಪಾಡಲು ಸಹಕಾರಿಯಾಗಿವೆ ಎಂದು ಹೇಳಿದರು.

ಘನ ಸಾನಿಧ್ಯವಹಿಸಿದ ಸೊನ್ನ ವಿರಕ್ತಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮಾತನಾಡಿ, ಶ್ರೀ ಬೆಣ್ಣೆ ಬಸವೇಶ್ವರ ಹೊಸ ರಥ ನೋಡುವ ಸೌಭಾಗ್ಯ ನಮ್ಮದಾಗಿದೆ. ಹಬ್ಬಹರಿದಿನಗಳು ಮನುಷ್ಯನ ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಕಾಯಕದ ಮೂಲಕ ದೇಹ ದಂಡಿಸುವ ಮೂಲಕ ನಿದ್ದೆ ಮಾಡಬೇಕು. ಪರೋಪಕಾರಿಯಾಗಿ ಬಾಳಬೇಕು ಎಂದರು.

ಭವ್ಯ ರಥೋತ್ಸವ :

ಕುಳಗೇರಿ ಗ್ರಾಮದಲ್ಲಿ ಸೋಮವಾರ ಸಂಜೆ ಶ್ರೀ ಬೆಣ್ಣೆ ಬಸವೇಶ್ವರ ರಥೋತ್ಸವ ಅಪಾರ ಭಕ್ತ ಸಮೂಹದ ನಡುವೆ ವಿಜಂಭಣೆಯಿಂದ ನಡೆಯಿತು.

ರಥದಲ್ಲಿ ದೇವರನ್ನು ಕೂರಿಸಿ ಪೂಜೆ ಸಲ್ಲಿಸಿ, ತೇರಿನ ಗಾಲಿಗೆ ಕಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದ ಭಕ್ತರು ಜೈಕಾರ ಹಾಕಿದರು. ಡೊಳ್ಳು, ಜಾಂಜ್ ಮೇಳ, ಭಜನೆ ಉತ್ಸವಕ್ಕೆ ಮತ್ತಷ್ಟು ಮೆರಗು ನೀಡಿದವು. ಭಕ್ತರು ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿದರು. ಭಕ್ತರು ರಥದ ಮೇಲೆ ಬಾಳೆಹಣ್ಣು ಎಸೆದು ಕೈಮುಗಿದು ಭಕ್ತಿ ಸಮರ್ಪಿಸಿದರು.

ರಥೋತ್ಸವ ನಡೆಯುವ ದಾರಿಯಲ್ಲಿ ಧೂಳು ಅಡಗಿಸಲು ರಸ್ತೆ ಮೇಲೆ ನೀರು ಚಿಮುಕಿಸಲಾಗಿತ್ತು. ದೇವಾಲಯಕ್ಕೆ ತೆರಳಿದ ಭಕ್ತರು ದೇವರಿಗೆ ಹಣ್ಣುಕಾಯಿ, ಕರ್ಪೂರ, ಊದಬತ್ತಿ ಅರ್ಪಿಸಿ ಭಕ್ತಿ ಸರ್ಪಿಸಿದರು. ಬಿರಾಳ, ಮಳ್ಳಿ, ನಾಗರಹಳ್ಳಿ, ಅಲ್ಲಾಪುರ, ಮಾಗಣಗೇರಿ, ಯಾಳಗಿ, ಕಾಚಾಪುರ, ದುಮ್ಮದ್ರಿ ಮತ್ತಿತರೆ ಗ್ರಾಮಗಳ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Tags

Yadrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X