Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯಡ್ರಾಮಿ | ಕಡಕೋಳ ಮಡಿವಾಳಪ್ಪ ಸಂಶೋಧನಾ...

ಯಡ್ರಾಮಿ | ಕಡಕೋಳ ಮಡಿವಾಳಪ್ಪ ಸಂಶೋಧನಾ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಸಿಎಂ ವೇದಿಕೆಗೆ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ9 Jan 2026 8:19 PM IST
share
ಯಡ್ರಾಮಿ | ಕಡಕೋಳ ಮಡಿವಾಳಪ್ಪ ಸಂಶೋಧನಾ ಕೇಂದ್ರಕ್ಕೆ ಆಗ್ರಹಿಸಿ ಜ.12 ರಂದು ಸಿಎಂ ವೇದಿಕೆಗೆ ಪಾದಯಾತ್ರೆ

ಯಡ್ರಾಮಿ: ಕಡಕೋಳ ಮಡಿವಾಳಪ್ಪನವರ ಸಂಶೋಧನಾ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ, ಕಡಕೋಳ ಮಡಿವಾಳೇಶ್ವರರ ಕರ್ತೃ ಗದ್ದಿಗೆಯಿಂದ ಯಡ್ರಾಮಿ ಪಟ್ಟಣದವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಹಾಮಠದ ಪೀಠಾಧಿಪತಿಗಳಾದ ಡಾ.ರುದ್ರಮುನಿ ಶಿವಾಚಾರ್ಯರು ತಿಳಿಸಿದ್ದಾರೆ.

ಯಡ್ರಾಮಿ ಪಟ್ಟಣದಲ್ಲಿ ಸೋಮವಾರ (ಜ.12) ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮದ ವೇದಿಕೆಯವರೆಗೆ ಅಪಾರ ಸಂಖ್ಯೆಯ ಭಕ್ತರೊಂದಿಗೆ ಪಾದಯಾತ್ರೆ ನಡೆಸಿ, ಸಿಎಂ ಅವರಿಗೆ ನೇರವಾಗಿ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.

ಕಡಕೋಳ ಮಡಿವಾಳಪ್ಪನವರು 12ನೇ ಶತಮಾನದ ಶರಣರಂತೆ ಸಮಾನತೆಯ ಸಂದೇಶ ಸಾರಿದವರು. ಸಾವಿರಾರು ತತ್ವಪದಗಳ ಮೂಲಕ ಜಾತೀಯತೆ, ಕಂದಾಚಾರ ಮತ್ತು ಸಾಮಾಜಿಕ ಶೋಷಣೆಯನ್ನು ಖಂಡಿಸಿದ ಮಹಾನ್ ತತ್ವಜ್ಞಾನಿ. ಕಡಕೋಳದಲ್ಲಿ ಎಲ್ಲಾ ಧರ್ಮದವರನ್ನು ಒಗ್ಗೂಡಿಸಿ ಅನುಭವ ಮಂಟಪ ನಡೆಸಿದ ಇಂತಹ ದಾರ್ಶನಿಕರ ಕ್ಷೇತ್ರವನ್ನು ಸರ್ಕಾರಗಳು ಸತತವಾಗಿ ಕಡೆಗಣಿಸುತ್ತಿವೆ ಎಂದು ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಿಎಂ ದಿ. ಧರ್ಮಸಿಂಗ್ ಅವರ ಕಾಲದಿಂದಲೂ ಮಠದ ಅಭಿವೃದ್ಧಿಗೆ ಮನವಿ ಸಲ್ಲಿಸುತ್ತಾ ಬರಲಾಗಿದೆ. ಪ್ರಸ್ತುತ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷರಾಗಿರುವ ಡಾ.ಅಜಯ್ ಸಿಂಗ್ ಅವರು ಮೂರು ಬಾರಿ ಆಯ್ಕೆಯಾದರೂ ಕಡಕೋಳದ ಅಭಿವೃದ್ಧಿಗೆ ಗಮನ ಹರಿಸಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಅಧ್ಯಯನ ಕೇಂದ್ರದ ಬಗ್ಗೆ ಸಿಎಂ ಅವರ ಭೇಟಿ ಮಾಡಿಸುವ ಬದಲು, ಅಧಿಕಾರಿಗಳ ಭೇಟಿ ಮಾಡಿಸಿ ಕಾಟಾಚಾರದ ನಡೆ ಪ್ರದರ್ಶಿಸಿದ್ದಾರೆ ಎಂದು ಅವರು ದೂರಿದರು.

ರಾಜಕಾರಣಿಗಳು ಭರವಸೆ ಈಡೇರಿಸದ ಕಾರಣ, ಭಕ್ತರೊಂದಿಗೆ ಸ್ವತಃ ಪಾದಯಾತ್ರೆ ಕೈಗೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನ್ಯಾಯ ಕೇಳುವುದಾಗಿ ಶ್ರೀಗಳು ತಿಳಿಸಿದ್ದಾರೆ.

Tags

Yedrami
share
ವಾರ್ತಾಭಾರತಿ
ವಾರ್ತಾಭಾರತಿ
Next Story
X