Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Yedrami | ಟನ್ ಕಬ್ಬಿಗೆ 3,600 ರೂ. ದರ...

Yedrami | ಟನ್ ಕಬ್ಬಿಗೆ 3,600 ರೂ. ದರ ಘೋಷಣೆ: ಉಗಾರ ಶುಗರ್‌ಗೆ ಕಬ್ಬು ಸಾಗಣೆ ಬಿರುಸು

ಸಾಜಿದ್‌ ಅಲಿ/ವಾರ್ತಾಭಾರತಿಸಾಜಿದ್‌ ಅಲಿ/ವಾರ್ತಾಭಾರತಿ18 Nov 2026 7:42 PM IST
share
Yedrami | ಟನ್ ಕಬ್ಬಿಗೆ 3,600 ರೂ. ದರ ಘೋಷಣೆ: ಉಗಾರ ಶುಗರ್‌ಗೆ ಕಬ್ಬು ಸಾಗಣೆ ಬಿರುಸು

ಯಡ್ರಾಮಿ: ತಾಲೂಕಿನ ನಾಗರಹಳ್ಳಿ ಗ್ರಾಮದ ಬಳಿಯ ಉಗಾರ ಶುಗರ್ ಸಕ್ಕರೆ ಕಾರ್ಖಾನೆಯು ಟನ್ ಕಬ್ಬಿಗೆ 3,600 ರೂ. ದರ ಘೋಷಿಸಿದ ಬೆನ್ನಲ್ಲೇ ಕಬ್ಬು ಹಂಗಾಮು ಬಿರುಸು ಪಡೆದುಕೊಂಡಿದೆ. ನ್ಯಾಯಯುತ ದರಕ್ಕಾಗಿ ರೈತ ಸಂಘಟನೆಗಳು ನಡೆಸಿದ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದ್ದು, ಕಳೆದ ಎರಡು ದಿನಗಳಿಂದ ಕಾರ್ಖಾನೆಗೆ ಕಬ್ಬು ಸಾಗಣೆ ಕಾರ್ಯ ಚುರುಕುಗೊಂಡಿದೆ.

ಕಬ್ಬಿಗೆ ನ್ಯಾಯಯುತ ದರ ನೀಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಕಬ್ಬು ಬೆಳೆಗಾರರು ನಾಗರಹಳ್ಳಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದರು. ಸರ್ಕಾರ ಘೋಷಿಸಿದ್ದ ಟನ್‌ಗೆ 3,200 ರೂ. ದರಕ್ಕೆ ಒಪ್ಪದ ರೈತರು, ಕನಿಷ್ಠ 3,600 ರೂ. ನೀಡಬೇಕೆಂದು ಪಟ್ಟು ಹಿಡಿದಿದ್ದರು. ರೈತರ ಒತ್ತಡಕ್ಕೆ ಮಣಿದ ಕಾರ್ಖಾನೆ ಆಡಳಿತ ಮಂಡಳಿ ಅಂತಿಮವಾಗಿ ಟನ್‌ಗೆ 3,600 ರೂ. ದರ ಘೋಷಿಸಿದೆ. ಇದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಕಬ್ಬನ್ನು ಟ್ರ್ಯಾಕ್ಟರ್‌ಗಳ ಮೂಲಕ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ಕಬ್ಬಿನ ದರ ಘೋಷಣೆಯಾಗದ ಕಾರಣ ಕಾರ್ಖಾನೆಗಳ ಆರಂಭ ವಿಳಂಬವಾಗಿತ್ತು. ಇದರಿಂದ ಬೆಳೆದ ಕಬ್ಬು ನಿಗದಿತ ಸಮಯಕ್ಕೆ ಕಾರ್ಖಾನೆ ತಲುಪುವುದೇ ಎಂಬ ಆತಂಕ ರೈತರನ್ನು ಕಾಡುತ್ತಿತ್ತು. ಒಂದೆಡೆ ತೀವ್ರ ಬರದಿಂದ ನೀರಿನ ಕೊರತೆ ಉಂಟಾಗಿ ಕಬ್ಬು ಒಣಗುವ ಭೀತಿ ಎದುರಾಗಿದ್ದರೆ, ಮತ್ತೊಂದೆಡೆ ಕಟಾವು ವಿಳಂಬದಿಂದ ಕಬ್ಬಿನ ರಿಕವರಿ ಪ್ರಮಾಣ ಕುಸಿಯುವ ಆತಂಕವೂ ಬೆಳೆಗಾರರನ್ನು ಚಿಂತೆಗೀಡು ಮಾಡಿತ್ತು. ಇದೀಗ ದರ ಘೋಷಣೆಯಾಗಿರುವುದರಿಂದ ಕಬ್ಬು ಸಾಗಣೆಗೆ ವೇಗ ದೊರೆತಿದೆ. ದಿನದಿಂದ ದಿನಕ್ಕೆ ಟ್ರ್ಯಾಕ್ಟರ್‌ಗಳ ಮೂಲಕ ಕಬ್ಬು ಕಾರ್ಖಾನೆಗೆ ತಲುಪುತ್ತಿದ್ದು, ರೈತರಲ್ಲಿ ಸಮಾಧಾನ ಮೂಡಿದೆ. ಸಕಾಲದಲ್ಲಿ ಕಬ್ಬು ಕಟಾವು ಮಾಡಿ ಕಾರ್ಖಾನೆಗೆ ಸಾಗಿಸಬಹುದು ಎಂಬ ವಿಶ್ವಾಸ ಬೆಳೆಗಾರರಲ್ಲಿ ಮೂಡಿದೆ.

ಹೋರಾಟಕ್ಕೆ ಸಂದ ಜಯ :

ಸರ್ಕಾರ ಘೋಷಿಸಿದ್ದ 3,200 ರೂ. ದರಕ್ಕೆ ಒಪ್ಪದೆ ಟನ್‌ಗೆ 3,600 ರೂ. ನೀಡುವಂತೆ ಪಟ್ಟು ಹಿಡಿದಿದ್ದ ರೈತ ಸಂಘಟನೆಗಳು ನಾಗರಹಳ್ಳಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದವು. ರೈತರ ನಿರಂತರ ಹೋರಾಟದಿಂದ ಜಿಲ್ಲಾಡಳಿತದ ಮೇಲೆಯೂ ಒತ್ತಡ ಹೆಚ್ಚಾಗಿತ್ತು. ಹಲವು ಸವಾಲುಗಳ ನಡುವೆಯೂ ಧೃತಿಗೆಡದೆ ಹೋರಾಟ ಮುಂದುವರಿಸಿದ ರೈತರು, ಸರ್ಕಾರದ ಘೋಷಿತ ದರಕ್ಕಿಂತ ಟನ್‌ಗೆ 400 ರೂ. ಹೆಚ್ಚುವರಿ ದರ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ರೈತರ ಒಗ್ಗಟ್ಟು ಮತ್ತು ಸಂಘಟಿತ ಹೋರಾಟಕ್ಕೆ ಈ ಫಲಿತಾಂಶ ಸಾಕ್ಷಿಯಾಗಿದೆ.

ನಾವು ಯಾವಾಗಲೂ ಕಬ್ಬು ಬೆಳೆಗಾರರ ಪರವಾಗಿ ಧ್ವನಿ ಎತ್ತುತ್ತಾ ಬಂದಿದ್ದೇವೆ. ಹೋರಾಟದ ಮೂಲಕ ರೈತರ ಬಾಕಿ ಹಣ ಕೊಡಿಸುವಲ್ಲಿಯೂ ಯಶಸ್ವಿಯಾಗಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ದರ ಘೋಷಣೆ ವಿಚಾರದಲ್ಲಿ ತಾಳ್ಮೆ ಕಳೆದುಕೊಳ್ಳದೆ, ನಾಯಕ ಈರಣ್ಣ ಭಜಂತ್ರಿ ಅವರ ಮಾರ್ಗದರ್ಶನದಲ್ಲಿ ಹೋರಾಟ ಮುಂದುವರಿಸಿದ್ದೇವೆ. ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಸಂಘಟಿತ ಹೋರಾಟ ನಡೆಸಿ ಯಶಸ್ಸು ಕಂಡಿದ್ದೇವೆ.

-ರಮೇಶ ಆಲೂರ, ರೈತ ಮುಖಂಡರು

Tags

KalaburagisugarcaneYedrami
share
ಸಾಜಿದ್‌ ಅಲಿ/ವಾರ್ತಾಭಾರತಿ
ಸಾಜಿದ್‌ ಅಲಿ/ವಾರ್ತಾಭಾರತಿ

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ

Next Story
X