ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ʼಯೋಗ ಧನುಷ್ʼ ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 11ನೇ ಅಂತರರಾಷ್ಟೀಯ ಯೋಗ ದಿನಾಚರಣೆಯ ಅಂಗವಾಗಿ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ “ಯೋಗ ಧನುಷ್ ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಸರ್ಕಾರಿ ಹೋಮಿಯೋಪತಿ ಮತ್ತು ಆಯುರ್ವೇದ ಸಂಯುಕ್ತ ಅಸ್ಪತ್ರೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸಂಜಯ ಕುಲಕರ್ಣಿ ಅವರು “ಯೋಗ ಧನುಷ್ ” ಕಾರ್ಯಕ್ರಮದ ಉದ್ದೇಶ ಹಾಗೂ Y-Break ಯೋಗ ಆ್ಯಪ್ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಯೋಗ ತರಬೇತಿದಾರ ಸುದೀಪ ಅವರು Y-Break ಯೋಗ ಆ್ಯಪ್ ಪ್ರೊಟೋಕಾಲ್ ಪ್ರಕಾರ ಯೋಗಾಭ್ಯಾಸ ಮಾಡಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹಾಗೂ ಜಿಲ್ಲಾ ನ್ಯಾಯಾಲಯದ ಆಡಳಿತಾಧಿಕಾರಿ ಸುನಿಲ್ ಕುಮಾರ್ ಚಂದೆ ಅವರು ಮಾತನಾಡಿ, ಸಿಬ್ಬಂದಿಗಳು Y-break app ಬಳಸಿ ಪ್ರತಿನಿತ್ಯ ಯೋಗವನ್ನು ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಸಿಬ್ಬಂದಿಗಳಾದ ಶರಣಕುಮಾರ್, ಕಲ್ಲಪ್ಪ ಹಾಗೂ ಇನ್ನಿತರ ಸಿಬ್ಬಂದಿಗಳು ಉಪಸ್ಥಿತರಿದ್ದರು.





