Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಲ್ಲಿ ಮಳೆ; 3 ಮನೆಗಳು,...

ಉಡುಪಿ ಜಿಲ್ಲೆಯಲ್ಲಿ ಮಳೆ; 3 ಮನೆಗಳು, ಜಾನುವಾರು ಕೊಟ್ಟಿಗೆಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ14 July 2023 7:37 PM IST
share
ಉಡುಪಿ ಜಿಲ್ಲೆಯಲ್ಲಿ ಮಳೆ; 3 ಮನೆಗಳು, ಜಾನುವಾರು ಕೊಟ್ಟಿಗೆಗೆ ಹಾನಿ

ಉಡುಪಿ, ಜು.14: ಉಡುಪಿ ಜಿಲ್ಲೆಯಲ್ಲಿ ಇಂದು ಸಹ ಮುಂಗಾರು ಚುರುಕಾಗಿದ್ದು, ದಿನವಿಡೀ ಮಳೆಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ನಾಳೆಯೂ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನ್ನು ಘೋಷಿಸಿದ್ದು ಮಳೆ ನಾಳೆಯೂ ಮುಂದುವರಿಯುವ ಸಾಧ್ಯತೆ ಇದೆ. ಅನಂತರದ ಸತತ ನಾಲ್ಕು ದಿನ ಯೆಲ್ಲೋ ಅಲರ್ಟ್‌ನ್ನು ನೀಡಲಾಗಿದೆ.

ಕಳೆದೊಂದು ದಿನದಿಂದ ಗಾಳಿ-ಮಳೆಗೆ ಉಡುಪಿ ಜಿಲ್ಲೆಯಲ್ಲಿ ಮೂರು ಮನೆಗಳಿಗೆ ಸಂಪೂರ್ಣ ಇಲ್ಲವೇ ಭಾಗಶ: ಹಾನಿಯಾಗಿದೆ. ಇದರಿಂದ ಸುಮಾರು ನಾಲ್ಕೂವರೆ ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಅದೇ ರೀತಿ ದಿನದಲ್ಲಿ ಒಂದು ಜಾನುವಾರು ಕೊಟ್ಟಿಗೆಗೂ ಭಾಗಶ: ಹಾನಿಯಾಗಿದೆ.

ಗೋಪಾಲ ಪೂಜಾರಿ ಮನೆ ಸಂಪೂರ್ಣ ಹಾನಿ: ಗುರುವಾರ ದಿನವಿಡೀ ಸುರಿದ ಮಳೆಗೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ರಥಬೀದಿ ಯಲ್ಲಿ ರುವ ಆಂಜನೇಯ ದೇವಸ್ಥಾನದ ಸಮೀಪದ ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದಿದೆ.

ಭಾರೀ ಮಳೆಗೆ ಮನೆಯ ಒಂದು ಭಾಗದ ಗೋಡೆ ಕುಸಿದಿದ್ದು, ಇದರೊಂದಿಗೆ ಇಡೀ ಮನೆಯೇ ಕುಸಿಯಿತು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಇದರಿಂದ ಒಟ್ಟು 3.50 ಲಕ್ಷ ರೂ.ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ ಹಾಗೂ ಕಂದಾಯ ನಿರೀಕ್ಷಕ ಲಕ್ಷ್ಮೀನಾರಾಯಣ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಉಳಿದಂತೆ ಬ್ರಹ್ಮಾವರ ತಾಲೂಕಿನ ಹೊಸಾಳದ ಚಂದ್ರ ಎಂಬವರ ಮನೆಯೂ ಗಾಳಿಮಳೆಯಿಂದ ಭಾಗಶ: ಹಾನಿಗೊಂಡಿದ್ದು 50 ಸಾವಿರ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಕಾರ್ಕಳ ತಾಲೂಕು ನಿಟ್ಟೆಯ ಸುಮಿತ್ರಾ ಎಂಬವರ ವಾಸದ ಮನೆ ಗಾಳಿ-ಮಳೆಗೆ ಹಾನಿಗೊಂಡಿದ್ದು 40ಸಾವಿರ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ.

ಬ್ರಹ್ಮಾವರ ತಾಲೂಕು ಪೆಜಮಂಗೂರು ಗ್ರಾಮದ ಲಕ್ಷ್ಮೀ ಆಚಾರ್ತಿ ಇವರ ಮನೆಯ ಜಾನುವಾರು ಕೊಟ್ಟಿಗೆ ಮಳೆಗೆ ಭಾಗಶ: ಕುಸಿದಿದ್ದು ಸುಮಾರು ಹತ್ತು ಸಾವಿರ ರೂ.ಗಳ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

40.1ಮಿ.ಮೀ. ಮಳೆ: ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ ಸರಾಸರಿ 40.1ಮಿ.ಮೀ. ಮಳೆಯಾಗಿರುವುದಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ತಿಳಿದು ಬಂದಿದೆ.ಬೈಂದೂರಿನಲ್ಲಿ 57.5, ಬ್ರಹ್ಮಾವರದಲ್ಲಿ 49.1, ಉಡುಪಿಯಲ್ಲಿ 46.2, ಕಾಪುವಿನಲ್ಲಿ 36.1, ಹೆಬ್ರಿಯಲ್ಲಿ 33.4 ಹಾಗೂ ಕಾರ್ಕಳದಲ್ಲಿ 23.9 ಮಿ.ಮೀ. ಮಳೆಯಾಗಿರುವುದಾಗಿ ವರದಿ ತಿಳಿಸಿದೆ.

ಉತ್ತಮ ಮಳೆಯಾಗುತ್ತಿರುವುದರಿಂದ ಅಣೆಕಟ್ಟುಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರಸ್ತುತ ಹಿರಿಯಡ್ಕ ಬಳಿಯ ಬಜೆ ಡ್ಯಾಮ್‌ನ ನೀರಿನ ಮಟ್ಟ 6.03 ಮೀ. ಆಗಿದ್ದರೆ ಕಾರ್ಕಳದ ಮುಂಡ್ಲಿಯ ನೀರಿನ ಮಟ್ಟ 5.87 ಮೀ. ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X