Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಕೋಪ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ...

ವಿಕೋಪ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ ರಾಜ್ಯ ಸರಕಾರಕ್ಕೆ ಮನವಿ: ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ6 July 2023 9:44 PM IST
share
ವಿಕೋಪ ತಡೆಯಲು ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ ರಾಜ್ಯ ಸರಕಾರಕ್ಕೆ ಮನವಿ: ಡಿಸಿ ಕೂರ್ಮಾರಾವ್

ಉಡುಪಿ, ಜು.6: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಸಮರ್ಪಕ ನಿರ್ವಹ ಣೆಗೆ ರಾಜ್ಯ ವಿಕೋಪ ನಿರ್ವಹಣಾ ಪಡೆಯ ಒಂದು ತಂಡವನ್ನು ಉಡುಪಿಗೆ ನೀಡುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಅವರನ್ನು ಕೋರಲಾ ಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಜಿಲ್ಲೆಯಲ್ಲಿ ವಿಕೋಪ ನಿರ್ವಹಣೆ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಸಂಜೆ ನಡೆಸಿದ ವರ್ಚ್‌ವಲ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಯಾವುದೇ ಸಂದರ್ಭದಲ್ಲೂ ತಕ್ಷಣ ಸಂಪರ್ಕಕ್ಕೆ ಸಿಗುವಂತೆ ಇರಬೇಕು ಮತ್ತು ಎಲ್ಲಾ ಇಲಾಖೆ ಗಳು ಪರಸ್ಪರ ಸಮನ್ವಯದಿಂದ ಒಂದು ತಂಡವಾಗಿ ಕಾರ್ಯ ನಿರ್ವಹಿಸಿ ಸಾರ್ವಜನಿಕರ ರಕ್ಷಣೆ ಮಾಡಬೇಕು. ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆಗೆ ರಚಿಸ ಲಾಗಿರುವ ಎಲ್ಲಾ ವಾರ್ಡ್ ಮತ್ತು ಗ್ರಾಮ, ತಾಲೂಕು ಮಟ್ಟ ಸೇರಿದಂತೆ ಎಲ್ಲಾ ಟಾಸ್ಕ್ ಪೋರ್ಸ್ ತಂಡಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು.

ನೆರೆಯಿಂದ ತೊಂದರೆಗೊಳಗಾದ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವವರಿಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ಮತ್ತು ನಂತರ ಅವರು ಮನೆಗಳಿಗೆ ತೆರಳುವಾಗ ಅಗತ್ಯವಿರುವ ಸಾಮಗ್ರಿಗಳನ್ನು ನೀಡುವಂತೆ ಎಲ್ಲಾ ತಹಶೀಲ್ದಾರ್ ಗಳಿಗೆ ತಿಳಿಸಿದರು.

ನೆರೆಯಿಂದ ತೊಂದರೆಗೊಳಗಾದ ಸಾರ್ವಜನಿಕರ ರಕ್ಷಣೆಗೆ ಕರಾವಳಿ ಕಾವಲು ಪಡೆ, ಆಪದ ಮಿತ್ರ, ಮೀನುಗಾರರು, ಗೃಹರಕ್ಷಕ ದಳದ ನೆರವು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ. ಮೀನುಗಾರಿಕಾ ಇಲಾಖೆ ವತಿಯಿಂದ ಅಗತ್ಯಬಿದ್ದಲ್ಲಿ ಬೋಟುಗಳನ್ನು ಮತ್ತು ಕಯಾಕಿಂಗ್ ಬೋಟುಗಳನ್ನು ಬಳಸಿಕೊಳ್ಳುವಂತೆ ಹಾಗೂ ಸ್ವಯಂಸೇವಾ ಸಂಸ್ಥೆಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಅಗತ್ಯ ಸಹಕಾರ ಪಡೆಯುವಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೂಚಿಸಿದರು.

ವಿಕೋಪದಿಂದ ತೊಂದರೆಗೊಳಗಾದವರಿಗೆ ಅಗತ್ಯ ತುರ್ತು ಪರಿಹಾರವನ್ನು ಶೀಘ್ರದಲ್ಲಿಯೇ ವಿತರಿಸಲು ಮುಂದಾಗಬೇಕು ಎಂದ ಅವರು, ಕಳೆದ ಬಾರಿ ಮುಂಗಾರಿನಲ್ಲಿ ತೊಂದರೆಗೊಳಗಾದ ತಗ್ಗು ಪ್ರದೇಶದಲ್ಲಿ ಈ ಬಾರಿಯೂ ಪ್ರವಾಹವಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚ ರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆಗಳು ಸಾರ್ವಜನಿಕರಿಗೆ ತಲುಪುವಂತೆ ಸ್ವಚ್ಚತಾ ವಾಹನಗಳ ಮೂಲಕ ನಿರಂತರವಾಗಿ ಮಾಹಿತಿ ನೀಡುವಂತೆ ಹಾಗೂ ಮಳೆ ಅಧಿಕವಾಗಿ ಬರುತ್ತಿರುವ ಸಂದರ್ಭದಲ್ಲಿ ತುಂಬಿ ಹರಿಯುತ್ತಿರುವ ಹಳ್ಳ ಮತ್ತು ತೋಡುಗಳನ್ನು ದಾಟುವಾಗ ಎಚ್ಚರವಹಿಸುವಂತೆ ಜನ ಸಾಮಾನ್ಯರಿಗೆ ತಿಳಿಸುವಂತೆ ಸೂಚಿಸಿದರು.

ಜಿಲ್ಲಾಧಿಕಾರಿಗಳು ಇಂದು ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X