Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಿರುಪಯೋಗಿ ಸುರತ್ಕಲ್ ಟೋಲ್ ಬೂತ್...

ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಿ, ಹೆದ್ದಾರಿ ಗುಂಡಿಗಳನ್ನು ಮುಚ್ಚಿಸಿ: ಹೋರಾಟ ಸಮಿತಿ

ವಾರ್ತಾಭಾರತಿವಾರ್ತಾಭಾರತಿ14 July 2023 11:06 PM IST
share
ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಿ, ಹೆದ್ದಾರಿ ಗುಂಡಿಗಳನ್ನು ಮುಚ್ಚಿಸಿ: ಹೋರಾಟ ಸಮಿತಿ

ಸುರತ್ಕಲ್, ಜು.14: ಹೆದ್ದಾರಿ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ ಇರುವ ನಿರುಪಯೋಗಿ ಸುರತ್ಕಲ್ ಟೋಲ್ ಬೂತ್ ತೆರವುಗೊಳಿಸಲು‌ ಹೆದ್ದಾರಿ ಪ್ರಾಧಿಕಾರ ಕ್ರಮ ಕೈಗೊಳ್ಳದಿರುವುದು, ಸುರತ್ಕಲ್ ಟೋಲ್ ಬೂತ್ ನಿಂದ ಬಿ ಸಿ ರೋಡ್ ವರಗೆ ಮಳೆಗಾಲದ ಆರಂಭದಲ್ಲೇ ಹೆದ್ದಾರಿ ಪೂರ್ತಿ ಬಿದ್ದಿರುವ ಮಾರಣಾಂತಿಕ ಗುಂಡಿಗಳನ್ನು ಮುಚ್ಚಲು ಮುಂದಾಗದಿರುವುದನ್ನು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸಿದ್ದು, ತಕ್ಷಣವೇ ನಿರುಪಯೋಗಿ ಟೋಲ್ ಬೂತ್ ತೆರವು, ಹೆದ್ದಾರಿ ಗುಂಡಿಗಳನ್ನು ಮುಚ್ಚಿಸಲು ಮುಂದಾಗದಿದ್ದಲ್ಲಿ ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳ ಲಾಗುವುದು ಎಂದು ಹೋರಾಟ ಸಮಿತಿ ಎಚ್ಚರಿಸಿದೆ.

ಸುರತ್ಕಲ್ ಟೋಲ್ ಬೂತ್ ನಲ್ಲಿ‌ ಟೋಲ್ ಸಂಗ್ರಹ ರದ್ದುಗೊಂಡು ಎಂಟು ತಿಂಗಳಾದರೂ ಅಲ್ಲಿರುವ ನಿರುಪಯೋಗಿ ಟೋಲ್ ಬೂತ್ ಇನ್ನೂ ತೆರವುಗೊಂಡಿಲ್ಲ. ಉಪಯೋಗವಿಲ್ಲದೆ ಪಾಳಬಿದ್ದಿರುವ ನಿರುಪಯೋಗಿ ಟೋಲ್ ಬೂತ್ ಈಗ ಜೀರ್ಣಾವಸ್ಥೆಗೆ ತಲುಪಿದ್ದು ಹೆದ್ದಾರಿಯಲ್ಲಿ ಪ್ರಯಾಣಿಸುವ ವಾಹನ ಸವಾರರ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಬೂತ್ ನ ಛಾವಣಿ, ಬೋರ್ಡ್ ಗಳು ಕಳಚಿ ಬೀಳುವ ರೀತಿ ಅಪಾಯಕಾರಿಯಾಗಿ ನೇತಾಡುತ್ತಿವೆ. ರಾತ್ರಿ ಕಾಲದ ಪ್ರಯಾಣವಂತೂ ಟೋಲ್ ಬೂತ್ ನ ಪರಿಸರ ಅಪಘಾತಕ್ಕೆ ಆಹ್ವಾನಿಸುವಂತಿದೆ. ಟೋಲ್ ಸಂಗ್ರಹ ರದ್ದುಗೊಂಡ ತಕ್ಷಣವೇ ನಿರುಪಯೋಗಿ ಟೋಲ್ ಬೂತ್ ತೆರವುಗೊಳಿಸಬೇಕಿದ್ದ ಹೆದ್ದಾರಿ ಪ್ರಾಧಿಕಾರ ಈ ಕುರಿತು ಗಂಭೀರ ನಿರ್ಲಕ್ಷ್ಯ ವಹಿಸಿರುವುದು ಅಕ್ಷಮ್ಯ ಎಂದಿದೆ.

ಕೂಳೂರು ನೂತನ ಸೇತುವೆ ನಿರ್ಮಾಣ ಮೂರು ವರ್ಷ ದಾಟಿದರೂ ಪೂರ್ಣಗೊಳ್ಳದೆ ಕಾಮಗಾರಿ ಪೂರ್ತಿಯಾಗಿ ಕುಂಠಿತಗೊಂಡಿದೆ. ಹೋರಾಟ ನಡೆಸಿ ಸುರತ್ಕಲ್ ಟೋಲ್ ಬೂತ್ ತೆರವು ಗೊಳಿಸಿದ ಜನತೆಯೊಂದಿಗೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಸುರತ್ಕಲ್ ನಿರುಪಯೋಗಿ ಟೋಲ್ ಬೂತ್, ಹೆದ್ದಾರಿ ಗುಂಡಿಗಳ ಸಮಸ್ಯೆ ಅತ್ಯಂತ ಗಂಭೀರ ಸ್ಥಿತಿಗೆ ತಲುಪಿದ್ದರೂ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಈ ಕುರಿತು ಚಕಾರ ಎತ್ತದಿರುವುದು ಅವರ ಬೇಜವಾಬ್ದಾರಿತನ, ಜನರ ಗಂಭೀರ ಸಮಸ್ಯೆಗಳಿಗೆ ಸ್ಪಂದಿಸದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಇದು ಖೇದಕರ ಎಂದು ಹೇಳಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ತಕ್ಷಣವೇ ನಿರುಪಯೋಗಿ ಟೋಲ್ ಬೂತ್ ತೆರವು, ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಪ್ರಾಧಿಕಾರ ಮುಂದಾಗದಿದ್ದಲ್ಲಿ ಜನಪರ ಸಂಘಟನೆಗಳನ್ನು ಜೊತೆ ಸೇರಿಸಿ ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳುವುದಾಗಿ ಸುರತ್ಕಲ್ ಟೊಲ್ ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X