Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೈಂದೂರು: ಹಿರಿಯ ನಾಗರಿಕರಿಗೆ ಸೈಬರ್...

ಬೈಂದೂರು: ಹಿರಿಯ ನಾಗರಿಕರಿಗೆ ಸೈಬರ್ ಜಾಗೃತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ10 July 2023 7:41 PM IST
share
ಬೈಂದೂರು: ಹಿರಿಯ ನಾಗರಿಕರಿಗೆ ಸೈಬರ್ ಜಾಗೃತಿ ಕಾರ್ಯಾಗಾರ

ಬೈಂದೂರು: ಹಿರಿಯ ನಾಗರಿಕರ ವೇದಿಕೆ ಬೈಂದೂರು ಮತ್ತು ಶಿರೂರು ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಗರಿಕರ ಸುರಕ್ಷತೆ, ಭದ್ರತೆ ಮತ್ತು ಗೌಪ್ಯತೆಯ ಸೈಬರ್ ಜಾಗೃತಿ ಕುರಿತ ಕಾರ್ಯಕ್ರಮವೊಂದು ಬೈಂದೂರು ರೋಟರಿ ಭವನದಲ್ಲಿ ಜರಗಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಡುಪಿ ಸೈಬರ್ ಕ್ರೈಮ್ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಅವರು ಸೈಬರ್ ಜಾಗ್ರತಿ ಬಗ್ಗೆ ವಿವರವಾದ ಮಾಹಿತಿಗಳನ್ನು ನೀಡಿದರು.

ಇತ್ತೀಚಿಗೆ ‘ಇಂಟರ್ನೆಟ್ ಫಿಷ್ಸಿಂಗ್’ ಅತಿಯಾಗಿದೆ. ಅಂದರೆ ಮೀನುಗಾರರು ಯಾವ ರೀತಿ ಬಲೆ ಬೀಸಿ, ಗಾಳ ಹಾಕಿ ಮೀನು ಹಿಡಿಯುತ್ತಾರೋ, ಅದೇ ರೀತಿ ಜಾಲತಾಣದಲ್ಲಿ ಅಮಾಯಕರು ಮೋಸದ ಬಲೆಗೆ ಬೀಳುತ್ತಿರುವುದು ಅತಿಯಾಗಿದೆ ಎಂದರು. ಒಟಿಪಿಯನ್ನು ಹಂಚಿ ಕೊಂಡು ಹಣ ಕಳೆದುಕೊಳ್ಳುವುದು, ಫೇಸ್‌ಬುಕ್, ಇನ್ಸ್‌ಟ್ರಾಗ್ರಾಂ ಇತ್ಯಾದಿ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಗೌಪ್ಯತೆಯನ್ನು ಬಿಚ್ಚಿಟ್ಟು ಮಾಹಿತಿಗಳನ್ನು ಹಂಚಿಕೊಂಡು ಹಣಕಾಸು ಕಳೆದುಕೊಳ್ಳುವ ಬಗ್ಗೆ ವಿವರವಾಗಿ ತಿಳಿಸಿದ ಮಂಜುನಾಥ್ ನಾಗರಿಕರು ಜಾಗ್ರತರಾಗಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.

ಈ ರೀತಿಯಲ್ಲಿ ಮೋಸ ಹೋದವರಲ್ಲಿ ವಿದ್ಯಾವಂತರು, ಸರಕಾರಿ ನೌಕರರು, ಹಿರಿಯ ನಾಗರಿಕರು ಅಧಿಕ ಪ್ರಮಾಣದಲ್ಲಿರುವುದು ವಿಪರ್ಯಾಸ ಎಂದ ಅವರು, ಲಾಟರಿಯಲ್ಲಿ ಕೋಟಿ ಹಣ ಬಂತೆಂದು ಮೋಸಗೊಳಿಸುವುದು, ಬ್ಲಾಕ್‌ಮೇಲ್ ತಂತ್ರ ಉಪಯೋಗಿಸಿ ಹಣ ಸುಲಿಗೆ ಮಾಡುವುದು ಇತ್ಯಾದಿ ಮೋಸಗಾರಿಕೆ ಬಗ್ಗೆ ಜಾಗ್ರತರಾಗುವಂತೆ ಮನವರಿಕೆ ಮಾಡಿದರು.

ಮಣಿಪಾಲ ಮಾಹೆಯ ಕಾಲೇಜ್ ಅಪ್ ನರ್ಸಿಂಗ್‌ನ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಶಶಿಧರ ವೈ.ಎನ್ ಪ್ರಾಸ್ತಾವಿಕ ಮಾತುಗಳನ್ನಾಡಿ ಹಿರಿಯ ನಾಗರಿಕರ ಆರೋಗ್ಯ ಕುರಿತು ಹಾಗೂ ಅವರಲ್ಲಿ ಉಂಟಾಗುವ ಖಿನ್ನತೆಯ ಕಾರಣಗಳನ್ನು ತಿಳಿಸಿ, ಜಾಗರೂಕರಾಗಿರುವಂತೆ ಕಿವಿಮಾತು ಹೇಳಿದರು.

ಬೈಂದೂರು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಕೆ.ಪುಂಡಲೀಕ ನಾಯಕ ಹಿರಿಯ ನಾಗರಿಕರು ಸುತ್ತ ನಡೆಯುವ ಮೋಸದ ಜಾಲದ ಬಗ್ಗೆ ಜಾಗ್ರತರಾಗಿರುವಂತೆ ಸಲಹೆ ನೀಡಿದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ್ ಪ್ರಭು ಸ್ವಾಗತಿಸಿದರು.

ಬೈಂದೂರು ಹಿರಿಯ ನಾಗರಿಕ ವೇದಿಕೆಯ ಸ್ಥಾಪಕ ಅಧ್ಯಕ್ಷ ವಸಂತ ಹೆಗಡೆ, ಸದಸ್ಯರಾದ ರಾಮ ಮಾಸ್ಟರ್, ನಿಕಟಪೂರ್ವ ಕಾರ್ಯದರ್ಶಿ ಸಂಜೀವ ಆಚಾರ್, ಐ.ನಾರಾಯಣ, ಗೋವಿಂದ್ರಾಯ ಪೈ ಮುಂತಾದವರು ಚರ್ಚೆಯಲ್ಲಿ ಭಾಗವಹಿಸಿದರು.

ಶಿರೂರು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಎಸ್.ಎಮ್.ಅಜ್ಮಲ್, ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಬೈಂದೂರು ಹಿ.ನಾ.ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಗೋವಿಂದ ಎಂ., ಉಪಾಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಗೋವಿಂದ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಯೋಜಕರಾದ ಮಣಿಪಾಲದ ವೆಲ್ಕಂಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಶನ್‌ನ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಜಿ.ಯು. ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X