Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಲಭೂತ ಸೌಕರ್ಯ ಒದಗಿಸುವುದಷ್ಟೇ...

ಮೂಲಭೂತ ಸೌಕರ್ಯ ಒದಗಿಸುವುದಷ್ಟೇ ಅಭಿವೃದ್ಧಿಯಲ್ಲ: ಎಸ್.ಜನಾರ್ದನ್ ಮರವಂತೆ

ವಾರ್ತಾಭಾರತಿವಾರ್ತಾಭಾರತಿ26 Jun 2023 7:16 PM IST
share
ಮೂಲಭೂತ ಸೌಕರ್ಯ ಒದಗಿಸುವುದಷ್ಟೇ ಅಭಿವೃದ್ಧಿಯಲ್ಲ: ಎಸ್.ಜನಾರ್ದನ್ ಮರವಂತೆ

ಉಪ್ಪುಂದ: ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುವುದೇ ಅಭಿವೃದ್ಧಿ ಎಂಬ ಕಲ್ಪನೆ ನಮ್ಮಲ್ಲಿದೆ. ಆದರೆ ಶಿಕ್ಷಣ, ಆರೋಗ್ಯ ಮತ್ತು ತಲಾ ಆದಾಯದ ಅಂಶಗಳನ್ನು ಒಟ್ಟು ಸೇರಿಸಿ ಮಾಡಲಾಗುವ ಅಪೇಕ್ಷಿತ ಮಾರ್ಪಾಡುಗಳು ನೈಜ ಅಭಿವೃದ್ಧಿ ಎನಿಸಿಕೊಳ್ಳುತ್ತದೆ ಎಂದು ರಾಜ್ಯ ಪಂಚಾಯತ್‌ ರಾಜ್‌ನ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ಹೇಳಿದ್ದಾರೆ.

ಉಪ್ಪುಂದದ ದೇವಕಿ ಬಿ.ಆರ್. ಸಭಾಂಗಣದಲ್ಲಿ ಕುಂದಾಪ್ರ ಡಾಟ್ ಕಾಂ ವತಿಯಿಂದ ಆಯೋಜಿಸಲಾದ‘ಮಿಷನ್ ಬೈಂದೂರು-೨೦೩೩’ ಕಾರ್ಯಕ್ರಮ ಉದ್ಘಾಟಿಸಿ, ಅಭಿವೃದ್ಧಿಯ ಪರಿಕಲ್ಪನೆ ಎಂಬ ವಿಷಯದ ಬಗ್ಗೆ ಅವರು ವಿಚಾರ ಮಂಡನೆ ಮಾಡಿ ಮಾತನಾಡುತಿದ್ದರು.

ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಜಾಗತಿಕವಾಗಿ ಮಾತ್ರವಲ್ಲದೇ ಪ್ರತಿ ದೇಶದ ಮಾನವ ಅಭಿವೃದ್ಧಿಯ ಸೂಚ್ಯಂಕವನ್ನು ಜನರ ಮುಂದಿಡುತ್ತದೆ. ಸದ್ಯ ಜಾಗತಿಕವಾಗಿ ಮಾನವ ಅಭಿವೃದ್ಧಿಯ ಅಂತಿಮ ಹಂತ ‘ಸುಖೀ ಜೀವನ’ ಎಂದು ಕಂಡುಕೊಳ್ಳಲಾಗಿದೆ. ಇದರಲ್ಲಿ ಶಿಕ್ಷಣ, ಆರೋಗ್ಯ, ತಲಾ ಆದಾಯ ಹೆಚ್ಚಳ ಸೇರಿದಂತೆ ಹಲವು ಅಂಶಗಳೂ ಸೇರಿಕೊಂಡಿವೆ. ಪ್ರಸ್ತುತ ಹಲವು ದೇಶಗಳಲ್ಲಿ ಹ್ಯಾಪಿನೆಸ್ ಇಂಡೆಕ್ಸ್ ಅಳೆಯಲಾಗುತ್ತದೆ ಎಂದರು.

ದೇಶದಲ್ಲಿ ಮಾನವ ಅಭಿವೃದ್ಧಿ ಸೂಕ್ಯಂಕವನ್ನು ಅಳತೆ ಮಾಡಿದ ಎರಡನೇ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಜಿಲ್ಲಾ ಮಟ್ಟದ ಅಭಿವೃದ್ಧಿ ಸೂಕ್ಯಂಕ ಸಿದ್ದಪಡಿಸಿದ್ದ ಉಡುಪಿ ಜಿಲ್ಲೆಗೆ ಪ್ರಥಮ ಬಹುಮಾನ ಬಂದಿತ್ತು. ಉಡುಪಿ ಜಿಲ್ಲೆಯಲ್ಲಿ ಗ್ರಾಮಪಂಚಾಯತ್ ಮಟ್ಟದಲ್ಲಿ ಮಾನವ ಅಭಿವೃದ್ಧಿಯ ಅಧ್ಯಯನ ನಡೆದಿದ್ದವು. ಇಂತಹ ಅಧ್ಯಯನವನ್ನು ಆಧರಿಸಿ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವುದು ಬಹುಮುಖ್ಯ ಎಂದರು.

ಅಭಿವೃದ್ಧಿಯ ಕನಸು ಹಾಗೂ ಸವಾಲುಗಳು ಎಂಬ ವಿಷಯವಾಗಿ ಕೇಂದ್ರ ರೈಲ್ವೆ ಬೋರ್ಡ್‌ನ ಮಾಜಿ ಸದಸ್ಯ ಕೆ.ವೆಂಕಟೇಶ ಕಿಣಿ ಅವರು ಮಾತನಾಡಿ, ಬೈಂದೂರು ಕ್ಷೇತ್ರವೆಂಬುದು ದೈವದತ್ತ ಕೊಡುಗೆ.ಧಾರ್ಮಿಕ, ಬೀಚ್ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶವಿದು. ಬೈಂದೂರಿನ ಭೌಗೋಳಿಕ ಹಿನ್ನೆಲೆ ಗಮನಿಸಿದರೆ, ಇಲ್ಲಿ ಪ್ರವಾಸೋದ್ಯದಿಂದ ಮಾತ್ರ ಊರಿನ ಅಭಿವೃದ್ಧಿ ಸಾಧ್ಯವಿದೆ. ಆದರೆ ಪರಿಸರವನ್ನು ಹಾಳು ಮಾಡಿ, ಜನರನ್ನು ಒಕ್ಕಲೆಬ್ಬಿಸಿ ಯಾವ ಕೆಲಸವನ್ನೂ ಮಾಡಬಾರದು ಎಂದರು.

ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಮಿಷನ್ ಬೈಂದೂರು ವೇದಿಕೆ ಮೂಲಕ ತಾಲೂಕಿನ ಅಭಿವೃದ್ಧಿ ಚರ್ಚೆಆರಂಭವಾಗಿದೆ. ಚರ್ಚೆ ನಡೆದಾಗಲೇ ಉತ್ತಮ ವಿಚಾರಗಳು ಹೊರಬರುತ್ತವೆ. ನಾನು ನಿಮ್ಮ ಕನಸುಗಳ ಬುಟ್ಟಿಯೂ ಹೌದು, ಬಂಡಿಯೂ ಹೌದು, ತೋಟವೂ ಹೌದು. ಜನ ಊರಿನ ಬಗ್ಗೆ ಏನು ಕನಸು ಕಂಡಿದ್ದಾರೋ ಅದನ್ನು ಸಾಕರಾಗೊಳಿಸುವ ಜವಾಬ್ದಾರಿಯೂ ನನ್ನದು ಎಂದರು.

ಕುಂದಾಪ್ರ ಡಾಟ್ ಕಾಂನ ಪ್ರವರ್ತಕ ಸುನಿಲ್ ಹೆಚ್.ಜಿ ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಉದಯ ಮರವಂತೆ ವಂದಿಸಿದರು. ಬೈಂದೂರು ರೋಟರಿ ನಿಯೋಜಿತ ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X