Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪ್ರಾಪ್ತರ ಕೈಗೆ ವಾಹನ ನೀಡಬೇಡಿ : ಎಸಿಪಿ...

ಅಪ್ರಾಪ್ತರ ಕೈಗೆ ವಾಹನ ನೀಡಬೇಡಿ : ಎಸಿಪಿ ಗೀತಾ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ2 July 2023 10:10 PM IST
share
ಅಪ್ರಾಪ್ತರ ಕೈಗೆ ವಾಹನ ನೀಡಬೇಡಿ : ಎಸಿಪಿ ಗೀತಾ ಕುಲಕರ್ಣಿ

ಮಂಗಳೂರು, ಜು.2: ಪೋಷಕರು ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ತಮ್ಮ ವಾಹನ ಕೊಡುವ ಮುನ್ನ ಅದರಿಂದಾಗುವ ಪರಿಣಾಮದ ಕುರಿತು ಯೋಚಿಸಬೇಕು. ವಾಹನ ಚಲಾಯಿಸಿ ಅದರಿಂದ ಅವಘಡ ಸಂಭವಿಸಿದರೆ ಅಥವಾ ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಆರ್‌ಸಿ ಯಾರ ಹೆಸರಿನಲ್ಲಿದೆಯೋ ಅವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಹೇಳಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಜಪ್ಪಿನಮೊಗರಿನ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ರವಿವಾರ ನಡೆದ ‘ಅಪ್ರಾಪ್ತ ವಯಸ್ಸಿನ ವಾಹನ ಸವಾರರ ಹೆತ್ತವರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಳೆದ ವಾರ ಮೇರಿಹಿಲ್‌ನಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಸ್ಕೂಟರ್ ಅಪಘಾತದಲ್ಲಿ ಮೃತಪಟ್ಟ ಘಟನೆಯ ಬಗ್ಗೆ ಉಲ್ಲೇಖಿಸಿದ ಅವರು, ಈ ಘಟನೆಗೆ ಸಂಬಂಧಿಸಿದಂತೆ ಸ್ಕೂಟರ್ ಚಲಾಯಿಸುತ್ತಿದ್ದ ಬಾಲಕನ ತಂದೆಯ ಮೇಲೆ ಕೇಸ್ ದಾಖಲಿಸಲಾಗಿದೆ. ಒಂದು ಕಡೆ ಮಗನನ್ನು ಕಳೆದುಕೊಂಡ ನೋವು, ಇನ್ನೊಂದು ಕಡೆ ಕೇಸ್ ಎರಡನ್ನೂ ಅನುಭವಿಸಬೇಕಾದ ಅನಿವಾರ್ಯತೆ ಹೆತ್ತವರಿಗೆ ಬಂದಿದೆ. ಹಾಗಾಗಿ ಮಕ್ಕಳಿಗೆ ವಾಹನ ಕೊಡುವ ಮುನ್ನ ಯೋಚನೆ ಮಾಡಬೇಕು ಎಂದರು.

ಈಗಾಗಲೇ ಶಾಲೆಗಳಿಗೆ ಭೇಟಿ ನೀಡಿ ಅಪ್ರಾಪ್ತರು ವಾಹನ ಚಲಾಯಿಸುವುದರಿಂದ ಆಗುವ ಸಮಸ್ಯೆಗಳ ಕುರಿತಂತೆ ವಿವರಿಸವ ಕೆಲಸಗಳು ಪೊಲೀಸ ರಿಂದ ನಡೆಯುತ್ತಿದೆ. ಅಪರಾಧ ತಡೆ ಮಾಸಾಚರಣೆ ಸಂದರ್ಭವೂ ಈ ಬಗ್ಗೆ ವಿವರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಹೆತ್ತವರ ಮಾತು ಕೇಳುವಂತೆ ಮಕ್ಕಳನ್ನು ಬಾಲ್ಯದಿಂದಲೇ ಬೆಳೆಸಬೇಕು. ಒಂದು ವೇಳೆ ಮಾತು ಕೇಳುವುದೇ ಇಲ್ಲ ಎಂದಾದರೆ ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿದರೆ ಅವರು ಮನವೊಲಿಸುವ ಕೆಲಸ ಮಾಡಲಿದ್ದಾರೆ ಎಂದರು.

ಪೊಲೀಸ್ ನಿರೀಕ್ಷಕ ರಮೇಶ್ ಎಚ್.ಹಾನಾಪುರ ಅವರು ಮಾತನಾಡಿ, ಒಂದು ಪ್ರಾಣ ಹೋದರೆ ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ದುರ್ಘ ಟನೆಗಳು ನಡೆಯುವ ಮುನ್ನವೇ ತಡೆಯುವ ನಿಟ್ಟಿನಲ್ಲಿ ನಾವು ಯೋಚಿಸಬೇಕು. ಸಾರ್ವಜನಿಕರೂ ಈ ನಿಟ್ಟಿನಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.

ಅಪ್ರಾಪ್ತ ವಯಸ್ಸಿನ ಮಕ್ಕಳ ಹೆತ್ತವರು, ಠಾಣಾ ವ್ಯಾಪ್ತಿಯ ಸಾರ್ವಜನಿಕರು ಉಪಸ್ಥಿತರಿದ್ದರು.

ಕೌನ್ಸ್ಸೆಲಿಂಗ್: ಡ್ರಗ್ಸ್ ಸೇವಿಸಿದ ಆರೋಪದಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರಿಗೆ ತಜ್ಞರಿಂದ ಕೌನ್ಸ್ಸೆಲಿಂಗ್ , ಮಾದಕ ವಸ್ತು ಸೇವನೆಯ ದುಷ್ಪರಿಣಾಮ ಕುರಿತು ಸಂವಾದ ಕಾರ್ಯಕ್ರಮ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಯಿತು. ವೈದ್ಯರು, ಮನಶ್ಶಾಸ್ತ್ರಜ್ಞರು, ಎಫ್‌ಎಸ್‌ಎಲ್ ತಜ್ಞರು, ಪೊಲೀಸ್ ಅಧಿಕಾರಿಗಳು ಮಾದಕ ವ್ಯಸನಿಗಳಿಗೆ ಮಾರ್ಗದರ್ಶನ ನೀಡಿದರು. ಒಟ್ಟು 160 ಮಂದಿ ಈ ಕೌನ್ಸೆಂಗ್‌ನಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X