Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬ್ಯಾಂಕುಗಳು ಸಾಲ ಅರ್ಜಿ ತಿರಸ್ಕರಿಸಿದ...

‘ಬ್ಯಾಂಕುಗಳು ಸಾಲ ಅರ್ಜಿ ತಿರಸ್ಕರಿಸಿದ ಮೀನುಗಾರಿಕಾ ಬೋಟುಗಳಿಗೆ ನೀವು ಹೇಗೆ ಸೀಮೆಎಣ್ಣೆ ನೀಡುತ್ತಿದ್ದೀರಿ?’

► ಇಲಾಖೆಯ ಅಧಿಕಾರಿಯನ್ನು ಪ್ರಶ್ನಿಸಿದ ಸಿಇಓ ಪ್ರಸನ್ನ ► ಉಡುಪಿ ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಭೆ

ವಾರ್ತಾಭಾರತಿವಾರ್ತಾಭಾರತಿ11 July 2023 7:47 PM IST
share
‘ಬ್ಯಾಂಕುಗಳು ಸಾಲ ಅರ್ಜಿ ತಿರಸ್ಕರಿಸಿದ ಮೀನುಗಾರಿಕಾ ಬೋಟುಗಳಿಗೆ ನೀವು ಹೇಗೆ ಸೀಮೆಎಣ್ಣೆ ನೀಡುತ್ತಿದ್ದೀರಿ?’

ಉಡುಪಿ, ಜು.11: ಸುಸ್ಥಿತಿಯಲ್ಲಿ ಇಲ್ಲದ, ಕೆಲವೊಮ್ಮೆ ಬೋಟುಗಳನ್ನೇ ತೋರಿಸದ ಸಂದರ್ಭದಲ್ಲಿ ಬ್ಯಾಂಕುಗಳು ಶೂನ್ಯ ಬಡ್ಡಿ ದರದ ಸಾಲ ಯೋಜನೆ ಯಡಿ ಮೀನುಗಾರರ ಅರ್ಜಿಗಳನ್ನು ತಿರಸ್ಕರಿಸಿದ್ದರೆ, ಅದೇ ಬೋಟುಗಳಿಗೆ ನೀವು ಹೇಗೆ ಸೀಮೆಎಣ್ಣೆಯನ್ನು ಮಂಜೂರು ಮಾಡುತಿದ್ದೀರಿ ಎಂದು ಮೀನುಗಾರಿಕಾ ಇಲಾಖಾ ಅಧಿಕಾರಿಗೆ ಇಂದಿನ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿ ಕಾರಿ ಪ್ರಸನ್ನ ಎಚ್. ಖಾರವಾಗಿ ಪ್ರಶ್ನಿಸಿದರು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಮಂಗಳವಾರ ತನ್ನ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಡಿಸಿಸಿ ಮತ್ತು ಡಿಎಲ್‌ಆರ್‌ಸಿ ಸಭೆಯಲ್ಲಿ ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳ ಪ್ರಗತಿ ಪರಿಶೀಲನೆ ವೇಳೆ ಬ್ಯಾಂಕುಗಳು ಮೀನುಗಾರರ ಅರ್ಜಿಗಳನ್ನು ತಿರಸ್ಕರಿಸಲು ಕಾರಣಗಳನ್ನು ವಿವರಿಸಿದಾಗ ಅವರು ಮೀನುಗಾರಿಕಾ ಇಲಾಖೆಯ ಅಧಿಕಾರಿಯಿಂದ ಮೇಲಿನ ಮಾಹಿತಿ ಕೇಳಿದರು.

ಶೂನ್ಯ ಬಡ್ಡಿಯಲ್ಲಿ ಮೀನುಗಾರರಿಗೆ ನೀಡುವ ಸಾಲ ಯೋಜನೆಯಲ್ಲಿ ಒಟ್ಟು 4718 ಅರ್ಜಿಗಳು ಬಂದಿದ್ದು, ಇವುಗಳಲ್ಲಿ 2425 ಬೋಟುಗಳಿಗೆ ಒಟ್ಟು 30.74 ಕೋಟಿ ರೂ.ಸಾಲವನ್ನು ಬ್ಯಾಂಕುಗಳು ಮಂಜೂರು ಮಾಡಿವೆ. ಉಳಿದ 2291 ಅರ್ಜಿಗಳನ್ನು ಬ್ಯಾಂಕುಗಳು ತಿರಸ್ಕರಿಸಿವೆ ಎಂದು ಇಲಾಖೆ ಅಧಿಕಾರಿ ತಿಳಿಸಿದಾಗ, ಅಷ್ಟೊಂದು ಅರ್ಜಿಗಳನ್ನು ತಿರಸ್ಕರಿಸಲು ಏನು ಕಾರಣ ಎಂದು ಸಿಇಓ ಪ್ರಶ್ನಿಸಿದರು.

ಕೆಲವರ ಬೋಟುಗಳು ಸುಸ್ಥಿತಿಯಲ್ಲಿಲ್ಲ, ಕೆಲವರು ದಾಖಲೆಗಳು ಪರಿಪೂರ್ಣವಾಗಿಲ್ಲ, ಇನ್ನು ಕೆಲವರು ಬೋಟುಗಳನ್ನು ತೋರಿಸುವುದೇ ಇಲ್ಲ ಎಂದು ಬ್ಯಾಂಕುಗಳು ಅರ್ಜಿಗಳನ್ನು ತಿರಸ್ಕರಿಸುತ್ತಿವೆ ಎಂದು ವಿವರಿಸಿದಾಗ, ಹಾಗಿದ್ದರೆ ಇಂಥ ಬೋಟುಗಳಿಗೆ ನೀವು ಸೀಮೆಎಣ್ಣೆಯನ್ನು ಹೇಗೆ ಮಂಜೂರು ಮಾಡುತಿದ್ದೀರಿ ಎಂದು ಪ್ರಸನ್ನ ಎಚ್. ಅಚ್ಚರಿಯಿಂದ ಪ್ರಶ್ನಿಸಿದರು. ಸರಕಾರದ ಯೋಜನೆ ಸರಿಯಾಗಿ ಅನುಷ್ಠಾನಗೊಂಡು ಸಂಬಂಧಿತರು ಅದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಿ ಎಂದರು.

ಜಿಲ್ಲೆಯ ಪ್ರಮುಖ ಬ್ಯಾಂಕ್‌ಗಳಾದ ಬ್ಯಾಂಕ್ ಆಫ್ ಬರೋಡ 252, ಕೆನರಾ ಬ್ಯಾಂಕ್ 1142, ಯೂನಿಯನ್ ಬ್ಯಾಂಕ 338, ಕರ್ನಾಟಕ ಬ್ಯಾಂಕ್ 471 ಅರ್ಜಿಗಳನ್ನು ತಿರಸ್ಕರಿಸಿರುವುದನ್ನು ಇನ್ನೊಮ್ಮೆ ಪರಿಶೀಲಿಸಿ ಎಂದು ಅವರು ಮೀನುಗಾರಿಕಾ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಕೃಷಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಸಾಲ: ಜಿಲ್ಲೆಯ ಎಲ್ಲಾ ಬ್ಯಾಂಕು ಗಳು ಕೃಷಿಕರಿಗೆ ಕೃಷಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲಗಳನ್ನು ವಿತರಿಸುವುದರ ಮೂಲಕ ರೈತರ ಆರ್ಥಿಕ ಅಭಿವೃದ್ಧಿಗೆ ಮತ್ತು ಕೃಷಿ ಸಾಲದ ಪ್ರಗತಿಗೆ ಆದ್ಯತೆ ನೀಡುವಂತೆ ಪ್ರಸನ್ನ ಹೆಚ್ ಬ್ಯಾಂಕುಗಳಿಗೆ ಸೂಚನೆಗಳನ್ನು ನೀಡಿದರು.

ಕೃಷಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಬ್ಯಾಂಕ್‌ನಲ್ಲಿ ಲಭ್ಯವಿರುವ ಸಾಲದ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೃಷಿಕರಿಗೆ ಹೆಚ್ಚಿನ ಅರಿವು ಮೂಡಿಸುವಂತೆ ಹಾಗೂ ಈ ಸಾಲ ಕೋರಿ ರೈತರು ಬ್ಯಾಂಕ್‌ಗಳಿಗೆ ಸಲ್ಲಿಸುವ ಸಾಲದ ಅರ್ಜಿಗಳನ್ನು ಬ್ಯಾಂಕ್‌ಗಳು ಪರಿಶೀಲಿಸಿ, ಅವರಿಗೆ ಶೀಘ್ರದಲ್ಲಿ ಸಾಲ ಮಂಜೂರು ಮಾಡುವ ಮೂಲಕ ಜಿಲ್ಲೆಯ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ನೆರವು ನೀಡುವಂತೆ ತಿಳಿಸಿದ ಸಿಇಓ, ಕಳೆದ ಸಾಲಿನಲ್ಲಿ ಕೃಷಿ ಮೂಲಭೂತ ಸೌಕರ್ಯಗಳಿಗೆ ನಿಗದಿಪಡಿಸಿದ್ದ 311.39 ಕೋಟಿ ರೂ. ಆರ್ಥಿಕ ಗುರಿಯಲ್ಲಿ ಅತ್ಯಂತ ಕಡಿಮೆ (19.91ಕೋಟಿ ರೂ. ಶೇ 6.39) ಸಾಧನೆ ತೋರಿರುವ ಬ್ಯಾಂಕ್‌ಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಬಾರ್ಡ್ ಮೂಲಕ ಕೃಷಿಕರು ಗೋದಾಮುಗಳನ್ನು ನಿರ್ಮಿಸಿಕೊಳ್ಳಲು ಸಾಲ ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆಯುವಂತೆ ನಬಾರ್ಡ್ ಬ್ಯಾಂಕ್ ಮ್ಯಾನೇಜರ್ ಸಂಗೀತಾ ಕರ್ತಾ ತಿಳಿಸಿದಾಗ ಈ ಬಗ್ಗೆ ಎಲ್ಲಾ ಬ್ಯಾಂಕುಗಳು ಗಮನ ಹರಿಸುವಂತೆ ಸಿಇಓ ತಿಳಿಸಿದರು.

ರಾಜ್ಯಕ್ಕೆ ಪ್ರಥಮ: ಪಿಎಂ ಸ್ವನಿಧಿ ಯೋಜನೆಯ ಸಾಲ ವಿತರಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಬಾಕಿ ಇರುವ ಇತರೇ ಅರ್ಜಿಗಳನ್ನು ತಕ್ಷಣದಲ್ಲೇ ಸಾಲ ವಿತರಿಸುವಂತೆ ಹಾಗೂ ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ದ್ವಿತೀಯ ಸ್ಥಾನದಲ್ಲಿದ್ದು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಬಾಕಿ ಇರುವ ಇತರೇ ಅರ್ಜಿಗಳನ್ನು ಶೀಘ್ರದಲ್ಲಿ ವಿಲೇ ಮಾಡುವಂತೆ ತಿಳಿಸಿದರು.

ಕೃಷಿ ಹಾಗೂ ತೋಟಗಾರಿಕೆ ಬೆಳೆ ವಿಮೆ ನೊಂದಣಿ ಕುರಿತಂತೆ ರೈತರಿಗೆ ಮಾಹಿತಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಣಿ ಮಾಡುವಂತೆ ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಮೀನುಗಾರಿಕಾ ಚಟುವಟಿಕೆಗಳಿಗೆ ಸಾಲ ನೀಡುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯ ಲೀಡ್ ಬ್ಯಾಂಕ್ ಆದ ಕೆನರಾ ಬ್ಯಾಂಕ್‌ನ ಪ್ರಾದೇಶಿಕ ಮೆನೇಜರ್ ಶೀಬಾ ಸೆಹಜಾನ್ ಮಾತನಾಡಿ, 2023ರ ಮಾರ್ಚ್ ಅಂತ್ಯಕ್ಕೆ ಜಿಲ್ಲೆಯ ಒಟ್ಟು ಬ್ಯಾಂಕಿಂಗ್ ವ್ಯವಹಾರದಲ್ಲಿ ಕಳೆದ ಸಾಲಿಗಿಂತ ಶೇ.11.08ರಷ್ಟು ಪ್ರಗತಿ ತೋರಿಸಲಾಗಿದೆ. ಈ ಅವಧಿಯಲ್ಲಿ 5241 ಕೋಟಿ ಊ. ವ್ಯವಹಾರ ನಡೆದು ಒಟ್ಟು ಮೊತ್ತ 52,523 ಕೋಟಿ ರೂ.ಗೇರಿದೆ ಎಂದರು. ಸಾಲ ವಿತರಣೆಯಲ್ಲಿ ಶೇ.13.78 (2092ಕೋಟಿ) ಬೆಳವಣಿಗೆಯಾಗಿದ್ದು, ಒಟ್ಟು 17,265 ಕೋಟಿ ರೂ. ಸಾಲ ವಿತರಿಸಲಾಗಿದೆ. ಠೇವಣಿ ಸಂಗ್ರಹದಲ್ಲಿ ಶೇ.9.81 (3075 ಕೋಟಿ ರೂ.) ಏರಿಕೆಯಾಗಿದ್ದು ಒಟ್ಟಾರೆಯಾಗಿ ಠೇವಣಿ ಮೊತ್ತ 35,258 ಕೋಟಿ ರೂ. ಆಗಿದೆ ಎಂದರು.

ಪಿಎಂ ಸ್ವನಿಧಿ ಯೋಜನೆಯಲ್ಲಿ ಶೇ.133 ಸಾಧನೆ ಮಾಡಿದ್ದು, 3,049 ಮಂದಿಗೆ ಸಾಲ ವಿತರಣೆಯ ಗುರಿ ಮೀರಿ 4,046 ಮಂದಿಗೆ ಸಾಲ ವಿತರಣೆ ಮಾಡಲಾಗಿದೆ. ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ಶೇ.267 ಸಾಧನೆಯಾಗಿದ್ದು, 180 ಮಂದಿಗೆ ಸಾಲ ವಿತರಣೆಯ ಗುರಿಗೆ ಬದಲು 481 ಮಂದಿಗೆ ಸಾಲ ವಿತರಣೆ ಮಾಡಲಾಗಿದೆ ಎಂದು ವಿವರಿಸಿದರು.

ದುರ್ಬಲ ವಲಯಕ್ಕೆ 1925.52 ಕೋಟಿ ರೂ., ಮಹಿಳಾ ಫಲಾನುಭವಿ ಗಳಿಗೆ 3462 ಕೋಟಿ ರೂ., ಮುದ್ರಾ ಯೋಜನೆಯಡಿ 522 ಕೋಟಿ ರೂ. ವಿತರಿಸಲಾಗಿದೆ. 2023ರ ಜುಲೈ ಒಳಗೆ ಜಿಲ್ಲೆಯ ಎಲ್ಲಾ ಅರ್ಹ ಫಲಾನುಭವಿಗಳನ್ನು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆಗೆ ಒಳಪಡಿಸುವ ಮೂಲಕ ಅವರ ಕುಟುಂಬಗಳಿಗೆ ಸುರಕ್ಷತೆ ಒದಗಿಸಲು ಎಲ್ಲಾ ಬ್ಯಾಂಕುಗಳು ಆದ್ಯತೆ ನೀಡಬೇಕು ಎಂದರು.

ರಿಸರ್ವ್ ಬ್ಯಾಂಕ್‌ನ ಪ್ರಾದೇಶಿಕ ಅಧಿಕಾರಿ ಮುರಳಿ ಮೋಹನ್ ಪಾಠಕ್ ರಿಸರ್ವ್ ಬ್ಯಾಂಕ್‌ನ ಹೊಸ ನಿಯಮ ‘100 ದಿನಗಳು, 100 ಸ್ಥಳಗಳು’ ಪ್ರತಿ ಶಾಖೆಯಲ್ಲಿರುವ ನಿಷ್ಕೃಿಯ ಖಾತೆಗಳನ್ನು ಸಕ್ರಿಯಗೊಳಿಸುವ ಯೋಜನೆ ಕುರಿತು ಮತ್ತು ಹೊಸ ಆದೇಶಗಳ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ನಬಾರ್ಡ್ ಬ್ಯಾಂಕ್ ಸಂಗೀತಾ ಕರ್ತಾ, ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಹಾಯಕ ಉಪಪ್ರಬಂಧಕ ನಿತ್ಯಾನಂದ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಲೀಡ್ ಬ್ಯಾಂಕ್ ಮೆನೇಜರ್ ಪಿ.ಎಂ. ಪಿಂಜಾರ ಸ್ವಾಗತಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X