Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಂದಾಪುರ: ಶಾಸಕ ಕಿರಣ್ ಕೊಡ್ಗಿ ನೂತನ...

ಕುಂದಾಪುರ: ಶಾಸಕ ಕಿರಣ್ ಕೊಡ್ಗಿ ನೂತನ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ30 Jun 2023 8:35 PM IST
share
ಕುಂದಾಪುರ: ಶಾಸಕ ಕಿರಣ್ ಕೊಡ್ಗಿ ನೂತನ ಕಚೇರಿ ಉದ್ಘಾಟನೆ

ಕುಂದಾಪುರ, ಜೂ.30: ಕ್ಷೇತ್ರದ ಅಭಿವೃದ್ಧಿಗೆ ಪಕ್ಷ ಬೇಧವಿಲ್ಲದೆ ಕೆಲಸ ಮಾಡುವ ಸಾಮರ್ಥ್ಯ ನೂತನ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರಿಗಿದೆ ಎಂದು ಮಾಜಿ ಶಾಸಕ, ಬಸ್ರೂರು ಶ್ರೀಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದ್ದಾರೆ.

ಕುಂದಾಪುರ ತಾಲೂಕು ಪಂಚಾಯತ್‌ನಲ್ಲಿ ಶುಕ್ರವಾರ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ನೂತನ ಶಾಸಕರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದ ಪ್ರತಿ ಹಳ್ಳಿಗಳಿಗೂ ಅಭಿವೃದ್ಧಿ ಕಾರ್ಯ ತಲುಪಬೇಕು. ಪಕ್ಷ ಸಂಘಟನೆಗೂ ಒತ್ತು ನೀಡಬೇಕು ಎಂದರು.

ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಂದಾಪುರ ಹೃದಯ ಭಾಗ ಶಾಸ್ತ್ರೀ ವೃತ್ತದಲ್ಲಿ ಶಾಸಕರ ಕಚೇರಿ ಉದ್ಘಾಟನೆಗೊಂಡಿದ್ದು ಕ್ಷೇತ್ರದ ಜನರಿಗೆ ಇಲ್ಲಿ ಭೇಟಿ ನೀಡಿ ಅಹವಾಲು ನೀಡಲು ಸುಲಭವಾಗುತ್ತದೆ. ಶಾಸಕರ ಕಚೇರಿಯ ಮೂಲಕ ಜನರ ಕಡತಗಳ ಸುಲಭ ವಿಲೇವಾರಿಯಾಗಿ ಸರಕಾರಿ ಕೆಲಸಗಳು ಶೀಘ್ರವಾಗಿ ನಡೆಯಬೇಕು. ಇದೊಂದು ಅಭಿವೃದ್ಧಿ ಕೇಂದ್ರವಾಗಿ ಸಾಮಾನ್ಯ ಜನರ ಕಾರ್ಯಾಲಯವಾಗಲಿ ಎಂದು ಆಶಿಸಿದರು.

ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ಇದು ಸರಕಾರಿ ಕಚೇರಿ ಯಾಗಿದ್ದು ಜನ ಸಾಮಾನ್ಯರಿಗೆ ಆಗಬೇಕಾದ ಕೆಲಸ ಕಾರ್ಯಗಳು ಶೀಘ್ರವಾಗಿ ಪೂರೈಸಲು ಅಗತ್ಯಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ಶನಿವಾರ ನಾನು ಜನರಿಗೆ ಲಭ್ಯವಿರುತ್ತೇನೆ. ಉಳಿದ ದಿನಗಳಲ್ಲಿ ಆಪ್ತ ಸಹಾಯಕರು ಕಚೇರಿಯಲ್ಲಿದ್ದು ಜನರಿಗೆ ಸ್ಪಂದನೆ ನೀಡಲಿದ್ದಾರೆ ಎಂದರು.

ಪ್ರಮುಖರಾದ ರಾಜೇಶ್ ಕಾವೇರಿ, ಕಾಡೂರು ಸುರೇಶ್ ಶೆಟ್ಟಿ, ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಭಾಸ್ಕರ ಬಿಲ್ಲವ ಹೇರಿಕುದ್ರು, ಸಂಪತ್ ಕುಮಾರ್ ಶೆಟ್ಟಿ, ಸಬ್ಲಾಡಿ ಜಯರಾಮ ಶೆಟ್ಟಿ, ರಮೇಶ ಶೆಟ್ಟಿ, ಅಲ್ತಾರು ಗೌತಮ್ ಹೆಗ್ಡೆ, ಮಡಾಮಕ್ಕಿ ಶಶಿಧರ ಶೆಟ್ಟಿ, ರೂಪಾ ಪೈ, ಶ್ರೀಲತಾ ಸುರೇಶ್ ಶೆಟ್ಟಿ, ತಾಪಂ ಇಒ ಭಾರತಿ, ಪುರಸಭೆ ಸದಸ್ಯರು, ಗ್ರಾಪಂ ಪ್ರತಿನಿಧಿಗಳು ಇದ್ದರು.

ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸ್ವಾಗತಿಸಿ, ಆಪ್ತ ಕಾರ್ಯದರ್ಶಿ ಮಹಿಮ್ ಶೆಟ್ಟಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X