Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊರರಾಜ್ಯ, ಉಡುಪಿ ಜಿಲ್ಲೆಯ ಮನೆ...

ಹೊರರಾಜ್ಯ, ಉಡುಪಿ ಜಿಲ್ಲೆಯ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣಪತ್ರ

ಉಡುಪಿ ನಗರಸಭೆ, ಅಂಚೆ ಇಲಾಖೆ ಮೂಲಕ ನಾಗರಿಕ ಸ್ನೇಹಿ ಯೋಜನೆ

ವಾರ್ತಾಭಾರತಿವಾರ್ತಾಭಾರತಿ9 July 2023 6:20 PM IST
share
ಹೊರರಾಜ್ಯ, ಉಡುಪಿ ಜಿಲ್ಲೆಯ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣಪತ್ರ

ಉಡುಪಿ: ಮಣಿಪಾಲ ಸೇರಿದಂತೆ ಉಡುಪಿ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಅಥವಾ ಇತರ ಕಡೆಗಳಲ್ಲಿ ಮರಣ ಹೊಂದಿದ ಹೊರ ರಾಜ್ಯ ಮತ್ತು ಜಿಲ್ಲೆಯ ವ್ಯಕ್ತಿಗಳ ಕುಟುಂಬದ ಮನೆ ಬಾಗಲಿಗೆ ಮರಣ ಪ್ರಮಾಣಪತ್ರ ವನ್ನು ಅಂಚೆ ಮೂಲಕ ತಲುಪಿಸುವ ನಾಗರೀಕ ಸ್ನೇಹಿ ವಿಶಿಷ್ಠ ವ್ಯವಸ್ಥೆಯನ್ನು ಉಡುಪಿ ಜಿಲ್ಲಾಡಳಿತ ಜಾರಿಗೊಳಿಸಿದೆ.

ಉಡುಪಿ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಹಬ್ ಆಗಿ ಗುರುತಿಸಿ ಕೊಂಡಿದ್ದು, ಇಲ್ಲಿನ ಮಣಿಪಾಲ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆಗಳು ಸೇರಿ ದಂತೆ ಹೊರ ರಾಜ್ಯದ ರೋಗಿಗೂ ಸಹ ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ. ಈ ಆಸ್ಪತ್ರೆಯಲ್ಲಿ ನೂರಾರು ಮಕ್ಕಳ ಜನನ ಮತ್ತು ರೋಗ ಉಲ್ಬಣಗೊಂಡು ಅಂತಿಮ ಹಂತದಲ್ಲಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ವೈದ್ಯರ ಸತತ ಶ್ರಮದ ನಂತರವೂ ಚಿಕಿತ್ಸೆ ಫಲಕಾರಿಯಾಗದೆ ಮರಣಗಳು ಸಂಭವಿಸುತ್ತಿವೆ.

ಹೊರ ಜಿಲ್ಲೆ ಮತ್ತು ರಾಜ್ಯದಿಂದ ಆಗಮಿಸಿದ ವ್ಯಕ್ತಿ ಮರಣ ಹೊಂದಿದ ನಂತರ ವ್ಯಕ್ತಿಯಯ ಕುಟುಂಬಕ್ಕೆ ಮುಂದಿನ ಚಟುವಟಿಕೆಗಳನ್ನು ಕೈಗೊಳ್ಳಲು ಮರಣಪ್ರಮಾಣ ಪತ್ರವು ಅತ್ಯಂತ ಅಗತ್ಯವಾಗಿರುತ್ತದೆ. ಹಲವು ಸಂದರ್ಭದಲ್ಲಿ ಸಂಬಂಧಿಸಿದ ಸ್ಥಳೀಯ ಜನನ ಮರಣ ನೊಂದಣಿ ಪ್ರಾಧಿಕಾರಕ್ಕೆ ಪ್ರಮಾಣ ಪತ್ರ ಕೋರಿ ಅಂದೇ ಅರ್ಜಿ ಸಲ್ಲಿಸಿದರೂ ಸಹ ತಾಂತ್ರಿಕ ಕಾರಣಗಳಿಂದ ಪ್ರಮಾಣಪತ್ರ ಪಡೆಯಲು ಸಾಧ್ಯವಾಗುವುದಿಲ್ಲ. ಅದೇ ಉದ್ದೇಶಕ್ಕೆ ವ್ಯಕ್ತಿಯ ಮರಣದ ದು:ಖದ ನಡುವೆ ಉಡುಪಿ ಜಿಲ್ಲೆಗೆ ಮತ್ತೆ ಸಾವಿರಾರು ರೂ.ಗಳನ್ನು ಖರ್ಚು ಮಾಡಿಕೊಂಡು ಬರಬೇಕಾಗುತ್ತದೆ.

ನಗರಸಭೆ -ಅಂಚೆ ಇಲಾಖೆ ಒಪ್ಪಂದ

ಈ ಸಮಸ್ಯೆಯನ್ನು ಮನಗಂಡ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ವಿಶೇಷ ಮುತುವರ್ಜಿ ವಹಿಸಿ ಉಡುಪಿ ನಗರಸಭೆ ಮತ್ತು ಅಂಚೆ ಇಲಾಖೆಯ ಮೂಲಕ ಮರಣ ಪ್ರಮಾಣಪತ್ರವನ್ನು ಹೊರ ರಾಜ್ಯ ಮತ್ತು ಜಿಲ್ಲೆಯ ಕುಟುಂಬಗಳ ಮನೆ ಬಾಗಿಲಿಗೆ ತಲುಪಿಸಲು ಮುಂದಾಗಿದೆ.

ಮೃತ ವ್ಯಕ್ತಿಯ ಕುಟುಂಬದವರು ಮರಣ ಪ್ರಮಾಣ ಪತ್ರ ಕೋರಿ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ನಮೂನೆಯಲ್ಲಿ ಅಂಚೆ ಮೂಲಕ ಕಳುಹಿ ಸುವ ವ್ಯವಸ್ಥೆಯನ್ನು ಆಯ್ಕೆ ಮಾಡಿ ಕೊಳ್ಳಬೇಕು. ಇದಕ್ಕಾಗಿ ನಿಗಧಿಪಡಿಸಿ ರುವ ಶುಲ್ಕ ೮೦ರೂ.ವನ್ನು ಪಾವತಿ ಮಾಡಿದರೆ, ಕರ್ನಾಟಕ ರಾಜ್ಯ ಸೇರಿದಂತೆ ದೇಶದ ಯಾವುದೇ ಮೂಲೆಯಲ್ಲಿ ರುವ ಮೃತರ ಕುಟುಂಬಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಪ್ರಮಾಣಪತ್ರವನ್ನು ತಲುಪಿಸಲಾಗುತ್ತದೆ.

ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಉಡುಪಿ ನಗರದ ಸ್ಥಳೀಯ ಜನನ ಮರಣ ನೊಂದಣಿ ಪ್ರಾಧಿಕಾರವಾದ ಉಡುಪಿ ನಗರಸಭೆ ಮತ್ತು ಅಂಚೆ ಇಲಾಖೆಗಳು ಈ ಸೇವೆ ಒದಗಿಸಲು ಪರಸ್ಪರ ಒಪ್ಪಂದ(ಎಂಓಯು) ಮಾಡಿ ಕೊಂಡಿದ್ದು, ನಗರಸಭೆಯಿಂದ ದಾಖಲೆಗಳನ್ನು ಸಂಗ್ರಹಿಸಲು ಅಂಚೆ ಇಲಾಖೆ ಯಿಂದ ಇದಕ್ಕಾಗಿಯೇ ಪ್ರತ್ಯೇಕ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಮೂಲಕ ಮೃತರ ಕುಟುಂಬದವರು ನೋವಿನ ನಡುವೆ ದಾಖಲೆಗಾಗಿ ಕಚೇರಿಗೆ ಅಲೆ ದಾಡದೆ ಮನೆ ಬಾಗಿಲಿನಲ್ಲಿಯೇ ಸೇವೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

‘ಜಿಲ್ಲೆಗೆ ವೈದ್ಯಕೀಯ ಚಿಕಿತ್ಸೆ ಉದ್ಯೋಗ ಸೇರಿದಂತೆ ಹಲವು ಕಾರಣಗಳಿಗೆ ಸಾವಿರಾರು ಮಂದಿ ವಲಸಿಗರು ಆಗಮಿಸುತ್ತಿದ್ದು ವಿವಿಧ ಕಾರಣಗಳಿಂದ ಮೃತಪಟ್ಟ ವ್ಯಕ್ತಿಗಳ ಮರಣಪ್ರಮಾಣಪತ್ರವನ್ನು ಸಕಾಲದಲ್ಲಿ ಪಡೆಯಲು ತೊಂದರೆಯಾಗುತ್ತಿದ್ದ ಕಾರಣ ನಗರಸಭೆ ಮತ್ತು ಅಂಚೆ ಇಲಾಖೆ ಮೂಲಕ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಕಳೆದ 10 ದಿನದಲ್ಲಿ 100ಕ್ಕೂ ಅಧಿಕ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ವರಿಗೆ ಯಶಸ್ವಿಯಾಗಿ ಅವರ ಮನೆ ಬಾಗಿಲಿಗೆ ತಲುಪಿಸಲಾಗಿದೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಈ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸೂಚನೆ ನೀಡಲಾಗಿದೆ’ -ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ ಉಡುಪಿ

ವಿಶಿಷ್ಟ ಯೋಜನೆಗೆ ಸಚಿವರಿಂದ ಚಾಲನೆ

ಉಡುಪಿ ನಗರಸಭೆ ವತಿಯಿಂದ ಜನನ ಮರಣ ಪ್ರಮಾಣಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಠ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿ.ಪಂ. ಸಿಇಓ ಪ್ರಸನ್ನ ಎಚ್., ಎಸ್ಪಿಅಕ್ಷಯ್ ಎಂ. ಹಾಕೆ, ಅಂಚೆ ಇಲಾಖೆ, ನಗರಸಭೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X