Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿ ಯೋಜನೆ ಮಹಿಳೆಯರ ಹಕ್ಕು: ನಾಗರತ್ನ...

ಶಕ್ತಿ ಯೋಜನೆ ಮಹಿಳೆಯರ ಹಕ್ಕು: ನಾಗರತ್ನ ನಾಡ

ಗುಲ್ವಾಡಿಗೆ ಸರಕಾರಿ ಬಸ್ಸಿಗಾಗಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2023 8:38 PM IST
share
ಶಕ್ತಿ ಯೋಜನೆ ಮಹಿಳೆಯರ ಹಕ್ಕು: ನಾಗರತ್ನ ನಾಡ


ಕುಂದಾಪುರ, ಜೂ.23: ಕುಂದಾಪುರದಿಂದ ತಲ್ಲೂರು -ಹಟ್ಟಿಯಂಗಡಿ -ಗುಡ್ಡಿಯಂಗಡಿ-ಕರ್ಕಿ -ಗುಲ್ವಾಡಿ ಮಾರ್ಗದಲ್ಲಿ ಶೀಘ್ರವೇ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಆಗ್ರಹಿಸಿ ಗುಲ್ವಾಡಿ ಗ್ರಾಮ ಪಂಚಾಯತ್ ಎದುರು ಸಿಪಿಎಂ ಗುಲ್ವಾಡಿ ಸ್ಥಳೀಯ ಸಮಿತಿ ನೇತೃತ್ವದಲ್ಲಿ ಇಂದು ಗ್ರಾಮಸ್ಥರು ಧರಣಿ ನಡೆಸಿದರು.

ಧರಣಿಯನ್ನುದ್ದೇಶಿಸಿ ಬೈಂದೂರು ವಲಯ ಸಮಿತಿ ಮುಖಂಡರಾದ ನಾಗರತ್ನ ನಾಡ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಯನ್ನು ಎಲ್ಲಾ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಬೇಕು. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ನೀಡುವ ಸೌಲಭ್ಯಗಳನ್ನು ಅವಹೇಳನ ಮಾಡುತ್ತಿರುವುದು ಖಂಡನೀಯವಾಗಿದೆ. ಶಕ್ತಿ ಯೋಜನೆ ಮಹಿಳೆಯರ ಹಕ್ಕು. ಈ ಯೋಜನೆ ಯಶಸ್ಸಿಗೆ ಗ್ರಾಮಸ್ಥರು ಕೆಎಸ್ಸಾರ್ಟಿಸಿ ಬಸ್‌ನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.

ಸ್ಥಳೀಯ ಸಮಿತಿ ಕಾರ್ಯದರ್ಶಿ ಜಿ.ಡಿ.ಪಂಜು ಪೂಜಾರಿ ಮಾತನಾಡಿ, ಗುಲ್ವಾಡಿಡ್ಯಾಂನ ಆಸುಪಾಸಿನ ನಿವಾಸಿಗಳಾದ ವಿದ್ಯಾರ್ಥಿಗಳು, ಕಾರ್ಮಿಕರು, ವಯೋವೃದ್ಧರು ಕುಂದಾಪುರ ಪೇಟೆಗೆ ಹೋಗಲು ಮಾವಿನಕಟ್ಟೆ ಮೂಲಕ ಸುಮಾರು 10-12 ಕಿ.ಮೀ ನಡೆದುಕೊಂಡೆ ಹೋಗಿ ಬರಬೇಕಾಗಿದೆ. ಗುಲ್ವಾಡಿ ಗ್ರಾಮದ ಸಾರಿಗೆ ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಪಕ್ಷದ ಬೈಂದೂರು ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕುಂದಾಪುರ ವಲಯ ಕಾರ್ಯದರ್ಶಿ ಎಚ್. ನರಸಿಂಹ, ವೆಂಕಟೇಶ್ ಕೋಣಿ, ಪಕ್ಷದ ಮುಖಂಡ ಚಂದ್ರಶೇಖರ ವಿ., ಶೀಲಾವತಿ ಪಡುಕೋಣೆ, ಸ್ಥಳೀಯ ಸಮಿತಿ ಮುಖಂಡರಾದ ಅಣ್ಣಪ್ಪ ಅಬ್ಬಿಗುಡ್ಡಿ, ನಾಗರಾಜ, ಜಿ.ಬಿ.ಮಹಮ್ಮದ್, ರೆಹಮಾನ್, ನೀಲಾ ಮುಂತಾದವರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಹೆಬ್ಬಾರ್ ಅವರ ಮೂಲಕ ಸಾರಿಗೆ ಪ್ರಾಧಿಕಾರ ಅಧಿಕಾರಿಗೆ ಮನವಿ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X