Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.13, 14ರಂದು ಮಂಗಳೂರಿನಲ್ಲಿ ಐಸಿಎಐ...

ಜು.13, 14ರಂದು ಮಂಗಳೂರಿನಲ್ಲಿ ಐಸಿಎಐ ವತಿಯಿಂದ ‘ತೆರಿಗೆ ಕ್ಲಿನಿಕ್’

ವಾರ್ತಾಭಾರತಿವಾರ್ತಾಭಾರತಿ11 July 2023 9:16 PM IST
share
ಜು.13, 14ರಂದು ಮಂಗಳೂರಿನಲ್ಲಿ ಐಸಿಎಐ ವತಿಯಿಂದ ‘ತೆರಿಗೆ ಕ್ಲಿನಿಕ್’

ಮಂಗಳೂರು, ಜು.11: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ಇದರ 75ನೇ ವರ್ಷಾಚರಣೆ ಸಲುವಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರ ಮಹತ್ವದ ಕುರಿತು ತೆರಿಗೆದಾರರಲ್ಲಿ ಅರಿವು ಮೂಡಿಸಲು ಮತ್ತು ರಿಟರ್ನ್ಸ್ ಸಲ್ಲಿಸುವಲ್ಲಿ ತೆರಿಗೆದಾರರ ಪ್ರಶ್ನೆಗಳು ಅಥವಾ ಅಸ್ಪಷ್ಟತೆಗಳನ್ನು ಪರಿಹರಿಸಲು ಜು.13 ಮತ್ತು 14ರಂದು ಮಂಗಳೂರಿನಲ್ಲಿ ‘ತೆರಿಗೆ ಕ್ಲಿನಿಕ್’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮಂಗಳವಾರ ಐಸಿಎಐ ಮಂಗಳೂರು ಶಾಖೆ ಅಧ್ಯಕ್ಷ ಸಿಎ ಗೌತಮ್ ನಾಯಕ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮಂಗಳೂರಿನ ಕೆ.ಆರ್.ರಾವ್ ರಸ್ತೆಯ ಮಹೇಂದ್ರ ಆರ್ಕೇಡ್‌ನ 2ನೇ ಮಹಡಿಯಲ್ಲಿರುವ ಐಸಿಎಐ ಭವನದಲ್ಲಿ ಬೆಳಗ್ಗೆ 11ರಿಂದ ಸಂಜೆ 6 ಗಂಟೆ ವರೆಗೆ ತೆರಿಗೆ ಕ್ಲಿನಿಕ್ ಎರಡು ದಿನಗಳ ಕಾಲ ಕಾರ್ಯನಿರ್ವಹಿಸಲಿದೆ. ಜು.13ರಂದು ಬೆಳಗ್ಗೆ 10.30ಕ್ಕೆ ಉದ್ಘಾಟನೆ ನಡೆಯಲಿದ್ದು, ಮಂಗಳೂರಿನ ಆದಾಯ ತೆರಿಗೆ ಆಯುಕ್ತ ಎಸ್.ರಂಗರಾಜನ್ ಮತ್ತು ಆದಾಯ ತೆರಿಗೆ ಹೆಚ್ಚುವರಿ ಆಯುಕ್ತ ಶಂಕರ ಗಣೇಶ್ ಕುರುಪ್ಪಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ಏಕಕಾಲದಲ್ಲಿ ಐಸಿಎಐ ತನ್ನ 168 ಶಾಖೆ ಮತ್ತು ಐದು ಪ್ರಾದೇಶಿಕ ಕೌನ್ಸಿಲ್‌ಗಳ ಮೂಲಕ ದೇಶಾದ್ಯಂತ ಆಯೋಜಿಸುತ್ತಿದೆ ಎಂದು ಮಾಹಿತಿ ನೀಡಿದರು.

ತೆರಿಗೆ ಆಧಾರದ ಹೆಚ್ಚಳ, ಇತರೆ ಪ್ರಶ್ನೆಗಳಿಗೆ, ಸುಗಮ ಫೈಲಿಂಗ್‌ಗೆ ಈ ತೆರಿಗೆ ಕ್ಲಿನಿಕ್ ನೆರವಾಗಲಿದೆ. ಈ ಕಾರ್ಯಕ್ರಮದಲ್ಲಿ ತೆರಿಗೆ ಪಾವತಿದಾರರಿಗೆ ತೆರಿಗೆ ಪಾವತಿ ಕ್ರಮದ ಬಗ್ಗೆ ಲಿಖಿತವಾಗಿಯೂ ಹೇಳಿಕೊಡಲಾಗುತ್ತದೆ. ಇದರಿಂದ ಸ್ವಯಂ ಆಗಿಯೂ ತೆರಿಗೆ ಪಾವತಿದಾರರು ತೆರಿಗೆ ಪಾವತಿಸಲು ಸಾಧ್ಯವಾಗಲಿದೆ. ಅಲ್ಲದೆ ತೆರಿಗೆ ಪಾವತಿ ಕುರಿತ ಗೊಂದಲ, ಸಂಶಯಗಳನ್ನಬು ಬಗೆಹರಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಐಸಿಎಐಯ ಎಸ್‌ಐಆರ್‌ಸಿ ಮಂಗಳೂರು ಶಾಖೆಯ ಉಪಾಧ್ಯಕ್ಷ ಸಿಎ ಗೌತಮ್ ಪೈ ಡಿ , ಖಜಾಂಚಿ ಸಿಎ ಡೇನಿಯಲ್ ಮಾರ್ಷ್ ಪಿರೇರಾ, ಸಿಕಸಾ ಮಂಗಳೂರು ಶಾಖಾ ಅಧ್ಯಕ್ಷೆ ಸಿಎ ಮಮತಾ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X