Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಿಂಗತ್ವ ಅಲ್ಪಸಂಖ್ಯಾತರ ಗೌರವಪೂರ್ಣ...

ಲಿಂಗತ್ವ ಅಲ್ಪಸಂಖ್ಯಾತರ ಗೌರವಪೂರ್ಣ ಬದುಕಿಗೆ ಯಕ್ಷಗಾನ ಕೌಶಲ್ಯ ತರಬೇತಿ

ವಾರ್ತಾಭಾರತಿವಾರ್ತಾಭಾರತಿ13 July 2023 6:53 PM IST
share
ಲಿಂಗತ್ವ ಅಲ್ಪಸಂಖ್ಯಾತರ ಗೌರವಪೂರ್ಣ ಬದುಕಿಗೆ ಯಕ್ಷಗಾನ ಕೌಶಲ್ಯ ತರಬೇತಿ

ಉಡುಪಿ, ಜು.13: ಕುಟುಂಬ ಮತ್ತು ಸಮಾಜದಿಂದ ದೂರ ಉಳಿದು, ದೈನಂದಿನ ಜೀವನ ನಿರ್ವಹಣೆಗಾಗಿ ಇಷ್ಟವಿಲ್ಲದಿದ್ದರೂ, ಅವಮಾನ ಪಡುವಂತಹ ಭಿಕ್ಷಾಟನೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗುವ ಅನಿವಾರ್ಯತೆಗೆ ಸಿಲುಕುವ ಲಿಂಗತ್ವ ಅಲ್ಪಸಂಖ್ಯಾತರು, ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ಪಡೆ ಯುವ ಮೂಲಕ ಮತ್ತು ತಮ್ಮಲ್ಲಿನ ಪ್ರತಿಭೆಯ ಮೂಲಕ ಗೌರವಯುತ ಜೀವನ ನಡೆಸಲು ಸಾಧ್ಯವಾಗುವ ಹಾಗೂ ಅತ್ಯುನ್ನತ ಸಾಧನೆ ಮಾಡಬಹು ದಾದ ಅವಕಾಶವೊಂದನ್ನು ಉಡುಪಿ ಜಿಲ್ಲಾಡಳಿತ ಕಲ್ಪಿಸಿಕೊಟ್ಟಿದೆ.

ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಜಂಟಿಯಾಗಿ ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನಿ ಬದುಕಿಗೆ ಅತ್ಯುತ್ತಮ ಅವಕಾಶ ಕಲ್ಪಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗುವ ಕಾರ್ಯಕ್ರಮವನ್ನು ಆಯೋಜಿಸಿದೆ.

ಉಡುಪಿ ಜಿಲ್ಲಾಡಳಿತದ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಡಿಯಲ್ಲಿ, ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಕಳದ ಸ್ತ್ರೀಶಕ್ತಿ ಭವನದಲ್ಲಿ 10,000ರೂ.ಗಳ ಸ್ಟೈಪೆಂಡ್‌ನೊಂದಿಗೆ ಕಳೆದ ಜೂನ್ 5ರಿಂದ ಜುಲೈ 4ರವರೆಗೆ ಒಂದು ತಿಂಗಳ ಕಾಲ ಕರಾವಳಿಯ ಹೆಮ್ಮೆಯ ಕಲೆ ಯಾದ ಯಕ್ಷಗಾನದಲ್ಲಿ ತರಬೇತಿಯನ್ನು ನೀಡಲಾಗಿದೆ. ಈ ಮೂಲಕ ಯಕ್ಷಗಾನ ಪ್ರದರ್ಶನಕ್ಕೂ ಅವರನ್ನು ಸಜ್ಜುಗೊಳಿಸಲಾಗಿದೆ.

ತರಬೇತಿಯಲ್ಲಿ ಯಕ್ಷಗಾನ ಕುಣಿತ, ಅಭಿನಯ ಹಾಗೂ ಸಂಭಾಷಣೆಯಲ್ಲಿ ಪರಿಣಿತಿ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರು ತರಬೇತಿ ಅಂತ್ಯದಲ್ಲಿ ‘ಶ್ವೇತ ಕುಮಾರ ಚರಿತ್ರೆ’ ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಅದ್ಬುತವಾಗಿ ಪ್ರದರ್ಶಿಸಿ, ನೆರದಿದ್ದವರ ಮೆಚ್ಚುಗೆ ಗಳಿಸಿದರು.

ಯಕ್ಷಗಾನ ತರಬೇತಿಯ ನಾಟ್ಯ ಗುರುಗಳಾಗಿ ಸುಧೀರ್ ಉಪ್ಪೂರು ಮತ್ತು ಜಯಗಾಣಿಗ ಬೀಜಮಕ್ಕಿ, ಚಂಡೆವಾದಕರಾಗಿ ಶಶಿಕುಮಾರ್,ಮದ್ದಳೆಯಲ್ಲಿ ನವೀನ್ ಕುಮಾರ್ ಮತ್ತು ಭಾಗವತಿಕೆಯಲ್ಲಿ ಸುದೀಪ್‌ಚಂದ್ರ ಶೆಟ್ಟಿ ಸಹಕಾರ ನೀಡಿದ್ದಾರೆ.

ಯಕ್ಷಗಾನ ತರಬೇತಿ ಪಡೆದಿರುವ ಈ ಲಿಂಗತ್ವ ಅಲ್ಪಸಂಖ್ಯಾತರು ಯಕ್ಷಗಾನ ಪ್ರದರ್ಶನಗಳಲ್ಲಿ ಸ್ವತಂತ್ರವಾಗಿ ವೇಷದಾರಿಗಳಾಗಿ ಅಭಿನಯಿಸುವ ಸಾಮರ್ಥ್ಯವನ್ನು ಹೊಂದಿದ್ದು ಈ ಮೂಲಕ ಜೀವನ ನಿರ್ವಹಣೆಗಾಗಿ, ಆರ್ಥಿಕವಾಗಿ ಸಂಪಾದನೆ ಮಾಡಲು ಹಾಗೂ ತಮ್ಮದೇ ತಂಡಗಳನ್ನು ರಚಿಸಿ ಕೊಂಡು ಸ್ವತಂತ್ರವಾಗಿ ಕಾರ್ಯಕ್ರಮಗಳನ್ನು ನೀಡಲು ಸಮರ್ಥ ರಾಗಿದ್ದಾರೆ. ಹೊರ ಜಿಲ್ಲೆ, ರಾಜ್ಯ, ದೇಶ-ವಿದೇಶಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿ ಸಲು ಉತ್ಸುಕರಾಗಿರುವ ಇವರಿಗೆ ಸೂಕ್ತ ಪ್ರೋತ್ಸಾಹ, ಬೆಂಬಲ ಮತ್ತು ಅವಕಾಶಗಳನ್ನು ನೀಡುವ ಮಹತ್ತರ ಜವಾಬ್ದಾರಿ ಇದೀಗ ಇಡಿ ಸಮಾಜದ್ದಾಗಿದೆ.

‘ನಮಗೆ ಯಕ್ಷಗಾನದ ಯಾವುದೇ ತಲೆಬುಡ ಗೊತ್ತಿರಲಿಲ್ಲ. ಒಂದು ತಿಂಗಳ ಅವಧಿಯಲ್ಲಿ ಗುರುಗಳು ಬಡಗುತಿಟ್ಟು ಮಾದರಿಯಲ್ಲಿ ಕುಣಿತ, ಸಂಭಾಷಣೆ, ತಾಳ, ಲಯ, ಮಾತುಗಾರಿಕೆ ಬಗ್ಗೆ ಸಾಕಷ್ಟು ತರಬೇತಿ ನೀಡಿ ನಾವು ಸ್ವತಂತ್ರವಾಗಿ ರಂಗಸ್ಥಳದಲ್ಲಿ ಪ್ರದರ್ಶನ ನೀಡುವ ಮಟ್ಟಿಗೆ ತಯಾರು ಮಾಡಿ ದ್ದಾರೆ... ಈಗ ನಮಗೂ ಕೂಡ ಹೆಚ್ಚಿನ ಆತ್ಮವಿಶ್ವಾಸ ಮೂಡಿದೆ. ತರಬೇತಿಯ ಕೊನೆಯ ದಿನದಲ್ಲಿ ನಮ್ಮ ಪ್ರದರ್ಶನ ವೀಕ್ಷಿಸಿದ ಕೆಲವರು ಮೇಳಗಳಿಗೆ ಅತಿಥಿ ಕಲಾವಿದರಾಗಿ ಬರುವಂತೆ ಹಾಗೂ ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡುವಂತೆ ತಿಳಿಸಿದ್ದಾರೆ. ತರಬೇತಿ ಪಡೆದ ಎಲ್ಲಾ ಕಲಾವಿದರು ಸೇರಿ ತಮ್ಮದೇ ಆದ ಮಂಡಳಿ ರಚಿಸಿಕೊಂಡು ನಿರಂತರವಾಗಿ ಅಭ್ಯಾಸ ನಡೆಸುವ ಹಾಗೂ ಕಾಯಕ್ರಮ ನೀಡುವ ಉದ್ದೇಶವಿದೆ. ನಮಗೆ ಈ ತರಬೇತಿಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದಗಳು.’

-ಸುಶಾಂತ್, ತರಬೇತಿ ಪಡೆದ ಲಿಂಗತ್ವ ಅಲ್ಪಸಂಖ್ಯಾತ ಕಲಾವಿದ.

"ಜಿಲ್ಲೆಯಲ್ಲಿ 283 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದು, ಇವರು ಜೀವನ ನಿರ್ವಹಣೆಗೆ ತಮಗೆ ಇಷ್ಟವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬದಲು ಕೌಶಲ್ಯ ತರಬೇತಿಗಳ ಮೂಲಕ ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಯಕ್ಷಗಾನ ತರಬೇತಿ ನೀಡಲಾಗಿದೆ. ಕಲಾ ಪ್ರತಿಭೆಯ ಮೂಲಕ ಅವರು ಸಾಮಾಜಿಕವಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಿದೆ. ಯಕ್ಷಗಾನ ಮಾತ್ರವಲ್ಲದೇ ಇತರೇ ಕೌಶಲ್ಯಯುಕ್ತ ತರಬೇತಿ ಪಡೆಯಲು ಇಚ್ಚಿಸಿದಲ್ಲಿ ಜಿಲ್ಲಾಡಳಿತ ಎಲ್ಲಾ ಅಗತ್ಯ ನೆರವು ನೀಡಲಿದೆ.

-ಕೂರ್ಮಾರಾವ್ ಎಂ., ಉಡುಪಿ ಜಿಲ್ಲಾಧಿಕಾರಿ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X