Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವ ಜನತೆ ಉನ್ನತ ಸಾಧನೆಯ ಗುರಿ...

ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ17 July 2023 7:38 PM IST
share
ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ, ಜು.17:ಯುವ ಜನತೆ ತಮ್ಮ ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡಲು ಸ್ಪಷ್ಟ ಗುರಿ ಇಟ್ಟುಕೊಂಡು, ಆ ಗುರಿ ತಲುಪಲು ನಿರಂತರ ವಾಗಿ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಹೇಳಿದ್ದಾರೆ.

ಸೋಮವಾರ ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನಡೆದ ಆಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಗೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಯುವ ಜನತೆ ತಾವು ಇಟ್ಟುಕೊಂಡ ಗುರಿ ಸಾಧನೆಗೆ ಕಠಿಣ ಶ್ರಮ ಪಡಬೇಕು. ಶ್ರಮ ಪಟ್ಟರೆ ಸ್ವಲ್ಪ ತಡವಾದರೂ ಉತ್ತಮ ಪ್ರತಿಫಲ ದೊರಕೇ ದೊರೆಯುತ್ತದೆ. ಯಾವುದೇ ಸಂದರ್ಭದಲ್ಲಿ ನಿರಾಶರಾಗದೇ ಮುಂದೆ ಸಾಗಿದಲ್ಲಿ ಯಶಸ್ಸು ಸಿಗಲಿದೆ. ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ನಿಟ್ಟಿನಲ್ಲಿ ಯುವ ಜನತೆ ಕಾರ್ಯೋನ್ಮುಖರಾಗಬೇಕು ಎಂದರು.

ಉನ್ನತ ಧ್ಯೇಯದಿಂದ ಅಗ್ನಿಪಥ್ ಮೂಲಕ ದೇಶರಕ್ಷಣೆಗಾಗಿ ಸೇನೆಗೆ ಸೇರ್ಪಡೆಯಾಗುತ್ತಿರುವ ಯುವಜನರ ಕನಸು ಸಾಕಾರಗೊಂಡು ಯಶಸ್ಸು ದೊರೆಯಲಿ, ಮುಂದಿನ ಬದುಕು ಉಜ್ವಲವಾಗಲಿ ಎಂದು ಶುಭ ಹಾರೈಸಿದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಸೇನೆಯ ಮೇಜರ್ ಜನರಲ್ ಆರ್.ಆರ್.ರೈನಾ, ವಿಶಿಷ್ಟ ಸೇವಾ ಮೆಡಲ್, ಅಡಿಷನಲ್ ಡೈರಕ್ಟರ್ ಜನರಲ್, ನೇಮಕಾತಿ ವಿಭಾಗ ಮತ್ತು ಮಂಗಳೂರು ಸೇನಾ ನೇಮಕಾತಿ ವಿಭಾಗದ ಮುಖ್ಯಸ್ಥ ಕರ್ನಲ್ ಅನುಜ್ ಗುಪ್ತಾ ಮತ್ತಿತರರು ಉಪಸ್ಥಿತ ರಿದ್ದರು.

ಜು.25ರವರೆಗೆ ನಡೆಯುವ ಈ ರ್ಯಾಲಿಯಲ್ಲಿ 11 ಜಿಲ್ಲೆಗಲ ಸುಮಾರು 6,800 ಮಂದಿ ಯುವಕರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಮೊದಲ ದಿನವಾದ ಇಂದು ಚಿಕ್ಕಮಗಳೂರು ಜಿಲ್ಲೆಯಿಂದ 41, ಉಡುಪಿಯ 59, ದ.ಕನ್ನಡದ 88, ದಾವಣಗೆರೆಯ 91, ಶಿವಮೊಗ್ಗದ 92 ಹಾಗೂ ಹಾವೇರಿ ಜಿಲ್ಲೆಯ 294 ಸೇರಿದಂತೆ ಒಟ್ಟು 665 ಅಭ್ಯರ್ಥಿಗಳು ಪರೀಕ್ಷಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಬೆಳಗ್ಗೆ 6:30ರಿಂದ ನಡೆದ ಓಟದ ಸ್ಪರ್ಧೆಯಲ್ಲಿ ಅಭ್ಯರ್ಥಿಗಳನ್ನು ತಲಾ 100 ಜನರಂತೆ ತಂಡಗಳಾಗಿ ವಿಂಗಡಿಸಲಾಗಿದ್ದು, ನಿಗದಿತ ದೂರ 1600 ಮೀ.(ಕ್ರೀಡಾಂಗಣಕ್ಕೆ 4 ಸುತ್ತು)ನ್ನು 5:30 ನಿಮಿಷದೊಳಗೆ ಪೂರ್ಣ ಗೊಳಿಸಿದವರನ್ನು ಮತ್ತು 5:30ರಿಂದ 5:45 ನಿಮಿಷದೊಳಗೆ ಪೂರ್ಣ ಗೊಳಿಸಿದ ವರನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿತು. ಅದರ ನಂತರ ಓಡಿದ ಅಭ್ಯರ್ಥಿಗಳನ್ನು ಅನರ್ಹಗೊಳಿಸಲಾಯಿತು.

ನಿಗದಿತ ಅವಧಿಗಿಂತ ಕೆಲವೇ ಸೆಕಂಡ್‌ಗಳ ಅಂತರದಲ್ಲಿ ಓಟವನ್ನು ಪೂರ್ಣ ಗೊಳಿಸಲಾಗದೇ ವಿಫಲರಾದ ಹಲವು ಅಭ್ಯರ್ಥಿಗಳು ಸ್ಥಳದಲ್ಲೇ ರೋಧಿಸಿ, ತಮ್ಮನ್ನು ಅರ್ಹತೆಗೆ ಪರಿಗಣಿಸುವಂತೆ ಸೇನೆಯ ಅಧಿಕಾರಿಗಳಲ್ಲಿ ಬೇಡಿಕೊಳ್ಳುತ್ತಿರುವುದು ಕಂಡುಬಂತು. ಆದರೆ ಸೇನೆಯ ಅಧಿಕಾರಿಗಳು ಅವರನ್ನು ಮುಂದಿನ ರ್ಯಾಲಿಯಲ್ಲಿ ಮತ್ತೊಮ್ಮೆ ಪ್ರಯತ್ನಿಸುವಂತೆ ಸಮಾಧಾನ ಮಾಡಿ ಕಳುಹಿಸುತ್ತಿದ್ದರು.

ಓಟದ ಸ್ಪರ್ಧೆಯಲ್ಲಿ ಸಂಪೂರ್ಣ ನಿತ್ರಾಣರಾದವರಿಗೆ ತುರ್ತು ಪ್ರಥಮ ಚಿಕಿತ್ಸೆ ಮತ್ತು ವೈದ್ಯಕೀಯ ಚಿಕಿತ್ಸೆ ನೀಡಲು ಅಂಬುಲೆನ್ಸ್ ಸಹಿತ ವೈದ್ಯಾಧಿ ಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದರು. ಸ್ಥಳದಲ್ಲಿ ಯಾವುದೇ ಗದ್ದಲ, ನೂಕು ನುಗ್ಗಲು ಉಂಟಾಗದಂತೆ ಪೊಲೀಸ್ ಸಿಬ್ಬಂದಿ ಅಗತ್ಯ ಮುಂಜಾಗ್ರತೆ ವಹಿಸಿದ್ದರು.

ರ್ಯಾಲಿಯಲ್ಲಿ ಅಭ್ಯರ್ಥಿಗಳಿಗೆ 1600 ಮೀ.ಓಟದ ಜೊತೆಗೆ 9 ಅಡಿ ಕಂದಕ ಜಿಗಿತ, ಫುಲ್‌ಅಪ್, ಎತ್ತರ, ಎದೆಯ ಸುತ್ತಳತೆ ಮತ್ತು ತೂಕ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ಅರ್ಹತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಜುಲೈ 17ರಿಂದ 25ರವರೆಗೆ ನಡೆಯುವ ಈ ರ್ಯಾಲಿಗೆ ಜಿಲ್ಲಾಡಳಿದ ಮೂಲಕ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಅಭ್ಯರ್ಥಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಬಾಗಲಕೋಟೆ(1,916), ವಿಜಯಪುರ(1,096), ಧಾರವಾಡ (1,013), ಉತ್ತರ ಕನ್ನಡ(505), ದಕ್ಷಿಣ ಕನ್ನಡ(88), ಉಡುಪಿ(59), ದಾವಣಗೆರೆ (91), ಗದಗ(592), ಹಾವೇರಿ(294), ಚಿಕ್ಕಮಗಳೂರು (41) ಹಾಗೂ ಶಿವಮೊಗ್ಗ (92) ಜಿಲ್ಲೆಗಳ 6,800ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಲು ನೊಂದಣಿ ಮಾಡಿಕೊಂಡಿದ್ದು, ಅಗ್ನೀರ್ ಜನರಲ್ ಡ್ಯೂಟಿ, ಅಗ್ನೀರ್ ಟೆಕ್ನಿಕಲ್, ಅಗ್ನೀರ್ ಟ್ರೇಡ್ಸ್‌ಮೆನ್, ಅಗ್ನೀರ್ ಕ್ಲಕ್/ಸ್ಟೋರ್‌ಕೀಪರ್ ಹುದ್ದೆಗಳ ನೇಮಕಾತಿಗೆ ಉಡುಪಿಯಲ್ಲಿ ಆಯ್ಕೆ ಟ್ರಯಲ್ಸ್ ನಡೆಯುತ್ತಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X