ಕುಂಬಳೆ: ಕಾರು, ಬೈಕ್ ಢಿಕ್ಕಿ; ಸವಾರ ಮೃತ್ಯು

ಕಾಸರಗೋಡು: ಸ್ಕೂಟರ್ ಹಾಗೂ ಕಾರಿನ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ ನಲ್ಲಿ ನಡೆದಿದೆ.
ಆರಿಕ್ಕಾಡಿ ಪಾರೆಸ್ಥಾನ ಸಮೀಪದ ಎನ್.ಹರೀಶ್ ಕುಮಾರ್ (37) ಮೃತಪಟ್ಟವರು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಅಪಘಾತದಿಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಗೊಂಡ ಹರೀಶ್ ಕುಮಾರ್ ಅವರನ್ನು ಕುಂಬಳೆ ಯ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.
ಕಾಸರಗೋಡಿನಿಂದ ಕುಂಬಳೆ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗೂ ಕುಂಬಳೆ ಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನ ಆಯಿಲ್ ಟ್ಯಾಂಕ್ ನಿಂದ ಸೋರಿಕೆ ಉಂಟಾದ ಹಿನ್ನಲೆಯಲ್ಲಿ ಎರಡೂ ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ರಸ್ತೆ ಸಂಚಾರ ಸುಗಮ ಗೊಳಿಸಿದರು.





