ಕಾಸರಗೋಡು: ಪೊಲೀಸ್ ಜೀಪು - ಆಟೋ ರಿಕ್ಷಾ ನಡುವೆ ಅಪಘಾತ; ಚಾಲಕ ಮೃತ್ಯು

ಕಾಸರಗೋಡು: ಪೊಲೀಸ್ ಜೀಪು ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟ ಘಟನೆ ವೆಳ್ಳರಿಕುಂಡು ಎಂಬಲ್ಲಿ ನಡೆದಿದೆ.
ಆಟೋ ಚಾಲಕ ಪೂಂಗಮ್ ಚಾಲದ ರಾಜು ಮೃತಪಟ್ಟವರು. ಪೊಲೀಸ್ ಜೀಪಿನಲ್ಲಿದ್ದ ಎ ಎಸ್ ಐ ಗಾಯಗೊಂಡಿದ್ದಾರೆ.
ಗುರುವಾರ ಸಂಜೆ 7:30 ರ ಸುಮಾರಿಗೆ ತಾಲೂಕು ಕಚೇರಿ ಪ್ರದೇಶದ ಬಳಿಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪೊಲೀಸ್ ಜೀಪ್ ಮತ್ತು ಆಟೋರಿಕ್ಷಾ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿದುಬಂದಿದೆ.
Next Story




