ಮಂಜೇಶ್ವರ: ಕಾರು - ಬೈಕ್ ನಡುವೆ ಅಪಘಾತ; ಸವಾರ ಮೃತ್ಯು

ಮಂಜೇಶ್ವರ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ವರ್ಕಾಡಿ ಬಳಿ ನಡೆದಿದೆ.
ಕೊಡ್ಲಮೊಗರು ನಿವಾಸಿ ಮೊಹಮ್ಮದ್ ಟಿ . ಮೃತಪಟ್ಟವರು.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮುಹಮ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಕಾರು ಮತ್ತು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Next Story




