ಮಂಜೇಶ್ವರದಲ್ಲಿ ಝಮೀರ್ ಅಹ್ಮದ್ ಚುನಾವಣೆ ಪ್ರಚಾರ

ಮಂಜೇಶ್ವರ, ಎ.7: ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಚಿವ ಝಮೀರ್ ಅಹ್ಮದ್ ಖಾನ್ ಮಂಗಳವಾರ ಮಂಜೇಶ್ವರದಲ್ಲಿ ಚುನಾವಣಾ ಪ್ರಚಾರ ನಡೆಸಿದರು.
ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ.ಅಶ್ರಫ್ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.
ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಮತ್ತಿತರರು ಉಪಸ್ಥಿತರಿದ್ದರು.
Next Story




