ಬದಿಯಡ್ಕ | ಮಾದಕ ವಸ್ತು ಜೊತೆ ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ
ಕಾಸರಗೋಡು: ಮಾದಕ ವಸ್ತು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬದಿಯಡ್ಕ ನಾರಾಂಪಾಡಿಯ ಮುಹಮ್ಮದ್ ರಫೀಕ್(23) ಬಂಧಿತ ಆರೋಪಿ. ಈತನ ಮನೆಯಿಂದ 107 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಆಧಾರದಲ್ಲಿ ರಫೀಕ್ ಮನೆಗೆ ದಾಳಿ ನಡೆಸಿದಾಗ ಆತನ ಕೋಣೆಯ ಮಂಚದಡಿಯಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಎಂಡಿಎಂಎ ಪತ್ತೆಯಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವನ್ನು ತಂದಿದ್ದಾಗಿ ವಿಚಾರಣೆ ವೇಳೆ ಆತ ಬಾಯಿಬಿಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story