ಕಾಸರಗೋಡು ಜಿಲ್ಲೆಯಲ್ಲಿ ನಿರಂತರ ಮಳೆ: ಆ.2ರಂದು ಮದ್ರಸ, ಧಾರ್ಮಿಕ ಶಿಕ್ಷಣ ಸಂಸ್ಥೆ ಸೇರಿ ಟ್ಯೂಷನ್ ಕೇಂದ್ರಗಳಿಗೆ ರಜೆ

ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆ. 2ರಂದು ಜಿಲ್ಲೆಯ ಎಲ್ಲಾ ಮದ್ರಸಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಮತ್ತು ಟ್ಯೂಷನ್ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ಈ ಆದೇಶ ಹೊರಡಿಸಿದ್ದಾರೆ.
ರವಿವಾರ ಕಾರ್ಯನಿರ್ವಹಿಸುವ ಮದ್ರಸಾಗಳು, ಕೋಚಿಂಗ್ ಸೆಂಟರ್‌ಗಳು ಮತ್ತು ವಿಶೇಷ ತರಗತಿ ನಡೆಸುವ ಇತರೆ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
Next Story




