Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಚಿಂತನ-ಮಂಥನ : ಸಿರಿಬಾಗಿಲು...

ಚಿಂತನ-ಮಂಥನ : ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ12 Aug 2026 1:03 PM IST
share
ಚಿಂತನ-ಮಂಥನ :  ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ
ಯಕ್ಷಗಾನದ ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ: ಇಡ್ಯಾ ಶಕುಂತಲಾ ರಮಾನಂದ ಭಟ್

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಶ್ರೀ ಕೇಶವಾನಂದ ಭಾರತಿ ಸ್ಮೃತಿ ಮಂದಿರದಲ್ಲಿ ಆ.9 ರಂದು "ಯಕ್ಷಗಾನ ಕಲೆಯ ದೀಪಕ್ಕೆ ತೈಲಧಾರೆಗಳಾಗೋಣ....!" ಎಂಬ ಶೀರ್ಷಿಕೆಯ ಸರಣಿ ಕಾರ್ಯಕ್ರಮ- ಯಕ್ಷಗಾನ ಮಹಿಳಾ ಕಲಾವಿದರುಗಳ ಸಮಾವೇಶ ನಡೆಯಿತು.

ವಿಶೇಷ ಚಿಂತನ-ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಕುಂತಳಾ ರಮಾನಂದ ಭಟ್ ರವರು "ಯಕ್ಷಗಾನ ಮಹಿಳಾ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ. ಸಿರಿಬಾಗಿಲು ಪ್ರತಿಷ್ಠಾನದ ಇಂತಹ ಗೋಷ್ಠಿಯಿಂದ ಮತ್ತಷ್ಟು ತೊಡಗಿಸಿಕ್ಕೊಳ್ಳುವಂತಾಗಲು ಸ್ಪೂರ್ತಿ ದೊರಕಿದಂತಾಯಿತು" ಎಂದರು.

ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಸರಗೋಡಿನ ಹಿರಿಯ ಕಲಾವಿದೆ ವಿಶ್ರಾಂತ ಪ್ರಾಧ್ಯಾಪಕಿ ಜಯಲಕ್ಷ್ಮಿ ಕಾರಂತ ಮಂಗಲ್ಪಾಡಿಯವರು "ಇಂದು ಮಹಿಳೆಯರು ಸಮಾಜದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮುಖ್ಯ ವಾಹಿನಿಯಲ್ಲಿ ಕಾಣಿಸುತ್ತಿದ್ದಾರೆ. ಅವರಿಗೆ ಬೆಂಬಲವಾಗಿ ಇಂತಹ ವಿಚಾರ ಸಂಕಿರಣ ನಡೆದಾಗ ಆತ್ಮಸ್ಥೈರ್ಯ ಹೆಚ್ಚುತ್ತದೆ "ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನಿಕಟ ಪೂರ್ವ ಸದಸ್ಯರಾದ ನಿರ್ಮಲ ಹೆಗಡೆ ಶಿರಸಿ, ಜಯಲಕ್ಷ್ಮಿ ಆರ್. ಹೊಳ್ಳ ಕೈಯಾರು ಉಪಸ್ಥಿತರಿದ್ದರು.

ನಂತರ ವಿಶೇಷ ಚಿಂತನ ಮಂಥನ ಕಾರ್ಯಕ್ರಮದಲ್ಲಿ "ಮಹಿಳೆಯರು ಮತ್ತು ಯಕ್ಷಗಾನದ ಭವಿಷ್ಯ, ಯಕ್ಷಗಾನದಲ್ಲಿ ಮಹಿಳೆಯರು: ಅವಕಾಶ, ಸವಾಲು ಮತ್ತು ನಾಯಕತ್ವ, ಮಹಿಳಾ ಶಕ್ತಿ ಮತ್ತು ಯಕ್ಷಗಾನದ ಮುಂದಿನ ಪೀಳಿಗೆ, ಯಕ್ಷಗಾನದ ಬೆಳವಣಿಗೆಯಲ್ಲಿ ಮಹಿಳೆಯರ ಪೂರಕ ಪಾತ್ರ, ಭವಿಷ್ಯದ ಯಕ್ಷಗಾನ: ಮಹಿಳೆಯರ ದೃಷ್ಟಿ ಮತ್ತು ದಿಕ್ಕು" ಮುಂತಾದ ವಿಷಯಗಳಲ್ಲಿ ಜಯಂತಿ ಎಸ್. ಹೊಳ್ಳ ಕೃಷ್ಣಾಪುರ, ಲಲಿತಾ ಭಟ್ ಕುಳಾಯಿ, ನಿರ್ಮಲ ಹೆಗಡೆ ಶಿರಸಿ, ಪದ್ಮ ಆಚಾರ್ ಪುತ್ತೂರು, ವೃಂದಾ ಕೊನ್ನಾರ್ ಮುಂತಾದವರು ವಿಷಯ ಮಂಡಿಸಿದರು. ಡಾ. ಆರತಿ ಪಟ್ರಮೆ ತುಮಕೂರು ಸಂವಾದದ ಸಮಗ್ರ ಅವಲೋಕನ ನಡೆಸಿದರು.

ಉಪಾನ್ಯಾಸಕಿ ಸಾಯಿಸುಮಾ ನಾವಡ ಕಾರ್ಯಕ್ರಮ ನಿರೂಪಿಸಿದರು. ಸುಮಿತ್ರಾ ಆರ್. ಮಯ್ಯ ಅತಿಥಿಗಳನ್ನು ಸ್ವಾಗತಿಸಿದರು. ಯುವ ಭಾಗವತೆ ಹೇಮಸ್ವಾತಿ ಕುರಿಯಾಜೆ ಪ್ರಾರ್ಥಿಸಿದರು.

ಮಧ್ಯಾಹ್ನ ನಂತರ ನಡೆದ ಸಮರೋಪ ಸಮಾರಂಭದಲ್ಲಿ ಯಕ್ಷಗಾನದ ಹಿರಿಯ ಮಹಿಳಾ ಕಲಾವಿದೆ ಪೂರ್ಣಿಮಾ ಯತೀಶ್ ರೈ ಸುರತ್ಕಲ್ ಹಾಗೂ ಕೃತಿ ಪುರಪ್ಪೆಮನೆ ಸಾಗರ ಭಾಗವಹಿಸಿ ಮಾತನಾಡಿದರು. ನೂರಕ್ಕೂ ಹೆಚ್ಚಿನ ಮಹಿಳಾ ಕಲಾವಿದರು ಈ ಕಾರ್ಯಕ್ರಮದ ಸಂವಾದ ದಲ್ಲಿ ಭಾಗವಹಿಸಿದರು. ಕೊನೆಗೆ ಜಯಲಕ್ಷ್ಮಿ ಆರ್ ಹೊಳ್ಳ ಧನ್ಯವಾದ ವಿತ್ತರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X