Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಹೊಸ ಆಲೋಚನೆಗಳ ಅನುಷ್ಠಾನದಲ್ಲಿ ಸರ್ಕಾರ...

ಹೊಸ ಆಲೋಚನೆಗಳ ಅನುಷ್ಠಾನದಲ್ಲಿ ಸರ್ಕಾರ ವಿದ್ಯಾರ್ಥಿಗಳ ಜೊತೆ: ಸಚಿವ ಎನ್. ಶಂಸುದ್ದೀನ್

ಪಡನ್ನ ವಿ.ಕೆ.ಪಿ. ಶಾಲೆಯಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ21 Sept 2026 2:54 PM IST
share
ಹೊಸ ಆಲೋಚನೆಗಳ ಅನುಷ್ಠಾನದಲ್ಲಿ ಸರ್ಕಾರ ವಿದ್ಯಾರ್ಥಿಗಳ ಜೊತೆ: ಸಚಿವ ಎನ್. ಶಂಸುದ್ದೀನ್

ಕಾಸರಗೋಡು: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಹೊಸ ಆಲೋಚನೆಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಜಾರಿಗೆ ತರುವಲ್ಲಿಯೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಪರವಾಗಿ ಇದೆ ಎಂದು ಕೇರಳ ಸಾರ್ವಜನಿಕ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಹೇಳಿದರು.

ಪಡನ್ನ ವಿ.ಕೆ.ಪಿ. ಕೆ.ಎಚ್.ಎಂ. ಎಂ.ಆರ್.ವಿ. ಹೈಯರ್ ಸೆಕೆಂಡರಿ ಶಾಲೆಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಿಸಲಿರುವ ನೂತನ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ವಿಶ್ವ ಫುಟ್‌ಬಾಲ್ ಪಂದ್ಯಾವಳಿಯ ಫೈನಲ್ ದಿನದಂದು ರಜೆ ಘೋಷಿಸಿರುವುದಷ್ಟೇ ಅಲ್ಲ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಲವು ಹೊಸ ಕ್ರಮಗಳನ್ನು ಸರ್ಕಾರ ಜಾರಿಗೆ ತರುತ್ತಿದೆ. ಇದರ ಭಾಗವಾಗಿ ಈ ವರ್ಷ ಅಕ್ಟೋಬರ್‌ನಲ್ಲಿ ಪ್ಲಸ್ ಒನ್ ಇಂಪ್ರೂವ್‌ಮೆಂಟ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ಎದುರಿಸುತ್ತಿರುವ ತೊಂದರೆಗಳನ್ನು ಕಡಿಮೆ ಮಾಡುವ ಉದ್ದೇಶದಿಂದಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಕಾಸರಗೋಡು ಜಿಲ್ಲೆಗೆ 10 ಪ್ಲಸ್ ಒನ್ ಬ್ಯಾಚ್‌ಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ ಒಂದು ಕಂಪ್ಯೂಟರ್ ಸೈನ್ಸ್ ಬ್ಯಾಚ್ ಪಡನ್ನದ ಈ ಶಾಲೆಗೆ ದೊರೆತಿದೆ. ಉತ್ತಮ ಶೈಕ್ಷಣಿಕ ಫಲಿತಾಂಶ ಸಾಧಿಸುತ್ತಿರುವ ಶಾಲೆಗೆ ದೊರೆತಿರುವ ಈ ಬ್ಯಾಚ್ ಅರ್ಹವಾದ ಮಾನ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಹಿಂದುಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ಲಸ್ ಒನ್ ಸೀಟುಗಳನ್ನು ಒದಗಿಸಿ ಶೈಕ್ಷಣಿಕ ಪ್ರಗತಿಗೆ ವೇಗ ನೀಡುವುದು ಸರ್ಕಾರದ ಗುರಿಯಾಗಿದೆ. ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಡಿಜಿಟಲ್ ಸ್ಕ್ವೇರ್‌ಗಳನ್ನು ಆರಂಭಿಸಿರುವುದು ಹಾಗೂ ಹೈಸ್ಕೂಲ್‌ಗಳಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಕಲಿಕೆಗೆ ಅವಕಾಶ ಕಲ್ಪಿಸಿರುವುದೂ ಇದೇ ಉದ್ದೇಶದ ಭಾಗವಾಗಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಆಧುನಿಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ನಾಡಿನ ಸಮಗ್ರ ಪ್ರಗತಿಗೆ ಅಗತ್ಯವಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣದ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಒದಗಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಸಚಿವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೃಕ್ಕರಿಪ್ಪು ರ ಶಾಸಕ ಸಂದೀಪ್ ವಾರಿಯರ್ ವಹಿಸಿದ್ದರು. ಶಾಲಾ ಮ್ಯಾನೇಜರ್ ಟಿ.ಎಂ.ಸಿ. ಕುಂಞಬ್ದುಲ್ಲಾ ಶಾಲೆಯ ಸಮಗ್ರ ವರದಿ ಮಂಡಿಸಿದರು.

ಪಡನ್ನ ಗ್ರಾಮ ಪಂಚಾಯತ್ ಅಧ್ಯಕ್ಷೆ ಪಿ.ಸಿ. ಸುಬೈದ, ಕೆ. ಶಂಸುುದ್ದೀನ್ ಹಾಜಿ, ಯು. ಕುಂಞುಮೊಯ್ದೀನ್ ಕುಟ್ಟಿ ಹಾಜಿ, ಎನ್‍.ಬಿ. ಹೈದರ್ ಹಾಜಿ, ಶಾಲಾ ಮ್ಯಾನೇಜಿಂಗ್ ಸಮಿತಿ ಕಾರ್ಯದರ್ಶಿ ಪಿ.ಕೆ.ಸಿ. ರಊಫ್ ಹಾಜಿ, ಟ್ರಷರರ್ ಪಿ.ಕೆ.ಸಿ. ನಾಸರ್ ಹಾಜಿ, ಶಾಲಾ ಮುಖ್ಯೋಪಾಧ್ಯಾಯಿನಿ ವಿ.ಕೆ. ಶಶಿಕಲಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಶಾಲಾ ಹೈಯರ್ ಸೆಕೆಂಡರಿ ಪ್ರಾಂಶುಪಾಲ ಎಂ.ಸಿ. ಶಿಹಾಬ್ ಸ್ವಾಗತಿಸಿದರು. ವಿಎಚ್‌ಎಸ್‌ಇ ಪ್ರಾಂಶುಪಾಲ ಎನ್‍.ಪಿ. ನಾಸರ್ ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘ, ಪಿಟಿಎ, ಮದರ್ ಪಿಟಿಎ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X