ಭಾರೀ ಮಳೆ ಸಾಧ್ಯತೆ : ನಾಳೆ (ಜು.1) ಕಾಸರಗೋಡು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ

ಕಾಸರಗೋಡು: ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜು.1ರಂದು (ಮಂಗಳವಾರ) ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವೃತ್ತಿಪರ ಶಿಕ್ಷಣ ಸಂಸ್ಥೆಗಳು, ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಕೇಂದ್ರಗಳು, ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳು ಹಾಗೂ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.
ಆದರೆ, ವಸತಿ ಶಾಲೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಇದೇ ವೇಳೆ, ಈಗಾಗಲೇ ನಿಗದಿಯಾಗಿರುವ ವಿಶ್ವವಿದ್ಯಾಲಯ ಪರೀಕ್ಷೆಗಳು ಪೂರ್ವ ನಿಗದಿಯಂತೆ ನಡೆಯಲಿವೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
Next Story




