ಆ.3ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕಾಸರಗೋಡು: ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಆ.3ರ ಸೋಮವಾರ ಜಿಲ್ಲೆಯ ವೃತ್ತಿಪರ (ಪ್ರೊಫೆಷನಲ್) ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.
ಈ ರಜೆಯು ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಟ್ಯೂಷನ್ ಸೆಂಟರ್‌ಗಳು, ಐಸಿಎಸ್‌ಇ (ICSE), ಸಿಬಿಎಸ್‌ಇ (CBSE) ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸುತ್ತದೆ. ಆದರೆ, ಮುಂಚಿತವಾಗಿ ನಿಗದಿಪಡಿಸಲಾದ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story




