ಆ. 8ರಂದು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ: ಡಿಸಿ ಅರ್ಜುನ್ ಪಾಂಡ್ಯನ್

ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ (Orange Alert) ನೀಡಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆಯನ್ನು ಪರಿಗಣಿಸಿ ಆ.8ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.
ಶಾಲೆಗಳು, ಕಾಲೇಜುಗಳು, ಅಂಗನವಾಡಿಗಳು, ಮದರಸಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಕೇಂದ್ರಗಳು ಮತ್ತು ಟ್ಯೂಷನ್ ಸೆಂಟರ್‌ಗಳಿಗೆ ರಜೆ ಅನ್ವಯಿಸುತ್ತದೆ.
ಯಾವುದೇ ಶಾಲೆಯಲ್ಲಿ ನಾಳೆ ವಿಶೇಷ ತರಗತಿಗಳನ್ನು (Special Classes) ನಡೆಸುವಂತಿಲ್ಲ. ಪರೀಕ್ಷೆಗಳು ನಡೆಯಲಿವೆ, ಮುಂಚಿತವಾಗಿ ನಿಗದಿಪಡಿಸಲಾದ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಿಗೆ (Interviews) ಯಾವುದೇ ಬದಲಾವಣೆ ಇರುವುದಿಲ್ಲ, ಅವು ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ಪ್ರಕಟನೆ ತಿಳಿಸಿದೆ.
Next Story




