Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು ಸಿರಿಬಾಗಿಲಿನಲ್ಲಿ ಅಂತರಾಜ್ಯ...

ಕಾಸರಗೋಡು ಸಿರಿಬಾಗಿಲಿನಲ್ಲಿ ಅಂತರಾಜ್ಯ ಮಟ್ಟದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ 5ನೇ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 July 2025 6:15 PM IST
share
ಕಾಸರಗೋಡು ಸಿರಿಬಾಗಿಲಿನಲ್ಲಿ ಅಂತರಾಜ್ಯ ಮಟ್ಟದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ 5ನೇ ಸಮ್ಮೇಳನ

ಕಾಸರಗೋಡು : ಇಲ್ಲಿನ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಇದರ ಐದನೇ ಸಮ್ಮೇಳನವು ಭಾನುವಾರ ನಡೆಯಿತು.

ಹಿರಿಯ ಚಿಂತಕರು ಸಾಹಿತ್ಯ ಪ್ರವರ್ತಕರು ಆದ ವಿ.ಬಿ.ಕುಳಮರ್ವ ಸರ್ವಾಧ್ಯಕ್ಷರಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಮುಖ್ಯ ಅತಿಥಿಗಳಾಗಿ ಉಡುಪಿಯ ವಾಗ್ಮಿ ವಿದ್ವಾನ್ ರಘುಪತಿ ಭಟ್ ವೇದಿಕೆಯಲ್ಲಿದ್ದರು. ಆಹ್ವಾನಿತರಾಗಿ ಕ ಚು ಸಾ ಪರಿಷತ್ ಹುಬ್ಬಳ್ಳಿ ಇದರ ಸ್ಥಾಪಕ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರ್ಣಿ, ಜಿಲ್ಲಾಧ್ಯಕ್ಷರಾದ ವೆಂಕಟ ಭಟ್ ಎಡನೀರು, ಯಕ್ಷಗಾನ ಭಾಗವತ ಮತ್ತು ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ಅವರು ಉಪಸ್ಥಿತರಿದ್ದರು.

ಗಡಿನಾಡು ಕಾಸರಗೋಡಿನ ಹಿರಿಯ ಸಾಹಿತಿ ಮತ್ತು ಸಂಶೋಧಕ ರಾಧಾಕೃಷ್ಣ ಕೆ.ಉಳಿಯತಡ್ಕ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗಣಪತಿ ಭಟ್ಟ ವರ್ಗಾಸರ ಅವರ ಅಧ್ಯಕ್ಷತೆಯಲ್ಲಿ ವಿಚಾರಗೋಷ್ಠಿ ನಡೆಯಿತು. ಉತ್ತರ ಕನ್ನಡದ ವಸಂತ ನಾಯಕ ಆಶಯ ನುಡಿಯಾಡಿದರು. ಮೈಸೂರಿನ ಬಾನುಲಿ ನಿವೃತ್ತ ಅಧಿಕಾರಿ ಚುಟುಕು ಸಾಹಿತ್ಯದ ಕುರಿತು, ಗದಗದ ವೀರನಗೌಡ ಮರಿಗೌಡ ವಚನ- ಚುಟುಕು ಸಾಹಿತ್ಯ ಅನುಬಂಧದ ಕುರಿತು ತಮ್ಮ ಅಭಿಪ್ರಾಯ ಮಂಡಿಸಿದರು.

ಬಳಿಕ ನಡೆದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಡಾ.ಸುರೇಶ ನೆಗಳಗುಳಿಯವರು ವಹಿಸಿದ್ದರು. ಡಾ.ಕೊಳ್ಚಪ್ಪೆ ಗೋವಿಂದ ಭಟ್ ಆಶಯ ನುಡಿಯಾಡಿದರು. ಕವಿಗಳಾದ ಕಸ್ತೂರಿ ಜಯರಾಮ್, ಪ್ರೇಮ ಬಿರಾದಾರ್, ರವೀಂದ್ರ ಶೆಟ್ಟಿ ಬಳಂಜ, ಲಕ್ಷ್ಮಿ ವಿ.ಭಟ್, ಸುಲೋಚನಾ ನವೀನ್, ಕೆ ನರಸಿಂಹ ಭಟ್, ಏತಡ್ಕ ಶ್ರೀ ಹರಿ ಭಟ್ ಪೆಲ್ತಾಜೆ, ಶಶಿಕಲಾ ಟೀಚರ್, ಪ್ರಮೀಳಾ ಟಿ ಕೆ ಚುಳ್ಳಿಕಾಣ, ಚಿತ್ರಕಲಾ ದೇವರಾಜ್,ವಿಜಯಲಕ್ಷ್ಮಿ ವಿರೂಪಾಕ್ಷ ಕೊಳ್ಳಿ, ದರ್ಶನ್ ಚಿರಾಲ ಡಿ ಇವರು ಸ್ವ ರಚಿತ ಕವನ ವಾಚಿಸಿದರು.

ಗಡಿನಾಡು ಕಾಸರಗೋಡು ಸಾಹಿತ್ಯ- ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನವು ಸಾಹಿತ್ಯ- ಸಾಂಸ್ಕೃತಿಕ ಕ್ಷೇತ್ರದ ನಿಜವಾದ ಸಿರಿಬಾಗಿಲು ಎಂದು ಸಮ್ಮೇಳನದ ಸರ್ವಾಧ್ಯಕ್ಷರಾದ ವಿದ್ವಾಂಸ ವಿ.ಬಿ.ಕುಳಮರ್ವ ಅವರು ತಮ್ಮ ಅನಿಸಿಕೆಗಳನ್ನು ಹಂಚಿದರು. ಅಲ್ಲದೆ ದೂರದ ಹುಬ್ಬಳ್ಳಿ, ಮೈಸೂರು ವಿಭಾಗದ ಮಹನೀಯರು ಪ್ರತಿಷ್ಠಾನದ ಜತೆ ಕೈಜೋಡಿಸಿ ರುವುದು ಸಂತಸ ತಂದಿದೆ ಎಂದರು.

ನಿರೂಪಣೆಯನ್ನು ಹಾವೇರಿಯ ಡಾ.ಗಂಗಯ್ಯ ಕುಲಕರ್ಣಿ, ಮಂಗಳೂರಿನ ರೇಖಾ ಸುದೇಶ್, ಬೆಂಗಳೂರಿನ ವಿದ್ಯಾ ಬೇಕಲ್ ಮತ್ತು ಹೆಬ್ರಿಯ ಪ್ರೇಮ ಪಾಟೀಲ್ ನಡೆಸಿಕೊಟ್ಟರು.

ಅಪರಾಹ್ನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಾ.ವಾಣಿಶ್ರೀ ಕಾಸರಗೋಡು ಅವರ ಸಂಗೀತ ವೈಭವ ಸಂಪನ್ನವಾಯಿತು. ವಾದಿರಾಜ ಕಲ್ಲೂರಾಯ ಕಿನ್ನಿಕಂಬಳ ಇವರ ನೇತೃತ್ವದಲ್ಲಿ ನಡೆದ 'ಹರಿಸರ್ವೋತ್ತಮ' ಪ್ರಸಂಗದ ಯಕ್ಷಗಾನ ತಾಳಮದ್ದಳೆ ವಿಶೇಷ ಮೆರುಗು ನೀಡಿತು. ಬಲಿಪ ಶಿವಶಂಕರ ಭಾಗವತ, ಗೋಪಾಲಕೃಷ್ಣ ನಾವಡ ಮತ್ತು ಮುರಳಿ ಮಾಧವ ಹಿಮ್ಮೇಳದಲ್ಲಿದ್ದು ಮುಮ್ಮೇಳದಲ್ಲಿ ವಾದಿರಾಜ ಕಲ್ಲುರಾಯ, ಗಣೇಶ ಶೆಟ್ಟಿ ಕನ್ನಡಿಕಟ್ಟೆ,ಸದಾಶಿವ ಆಳ್ವಾ ತಲಪಾಡಿ ಭಾಗವಹಿಸಿದರು. ಪ್ರಭಾಕರ ಡಿ ಸುವರ್ಣ ಅವರು ತಾಳಮದ್ದಳೆ ಗೆ ಪ್ರಾಯೋಜಕತ್ವ ವಹಿಸಿದರುದ. ಗ್ರಾಮೀಣ ಪ್ರದೇಶವಾದ ಸಿರಿಬಾಗಿಲಿನಲ್ಲಿ ನಡೆದ ಈ ಕಾರ್ಯಕ್ರಮ ಸಾಹಿತ್ಯ ಅಭಿಮಾನಿಗಳ ಮೆಚ್ಚುಗೆ ಗೆ ಪಾತ್ರವಾಯಿತು.

ಈ ವೇಳೆ ಸಿರಿಬಾಗಿಲು ರಾಮಕೃಷ್ಣ ಮಯ್ಯ ದಂಪತಿಗಳನ್ನು ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X