Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು| ವಿವಾದಾತ್ಮಕ ರಸಪ್ರಶ್ನೆ...

ಕಾಸರಗೋಡು| ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ; ಶಿಕ್ಷಕ ಸೇವೆಯಿಂದ ಅಮಾನತು

ವಾರ್ತಾಭಾರತಿವಾರ್ತಾಭಾರತಿ9 Aug 2026 5:28 PM IST
share
ಕಾಸರಗೋಡು| ವಿವಾದಾತ್ಮಕ ರಸಪ್ರಶ್ನೆ ತಯಾರಿಸಿದ ಆರೋಪ; ಶಿಕ್ಷಕ ಸೇವೆಯಿಂದ ಅಮಾನತು

ಕಾಸರಗೋಡು: ಕುಂಬಳೆ ಮತ್ತು ಮಂಜೇಶ್ವರ ಉಪಜಿಲ್ಲೆಗಳ ಶಾಲೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ 'ಸ್ವಾತಂತ್ರ್ಯ ರಸಪ್ರಶ್ನೆ' ಕಾರ್ಯಕ್ರಮದಲ್ಲಿ ವಿವಾದಾತ್ಮಕ ಪ್ರಶ್ನೆಗಳನ್ನು ಸೇರಿಸಿದ ಆರೋಪದಲ್ಲಿ ಪಳ್ಳತ್ತಡ್ಕ ಎ.ಯು.ಪಿ. ಶಾಲೆಯ ಶಿಕ್ಷಕ ಗುರುಪ್ರಸಾದ್ ಅವರನ್ನು ಸಾರ್ವಜನಿಕ ಶಿಕ್ಷಣ ನಿರ್ದೇಶಕರು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ ಶಿಕ್ಷಕನ ವಿರುದ್ಧ ಕಟ್ಟುನಿಟ್ಟಿನ ಇಲಾಖಾ ಶಿಸ್ತು ಕ್ರಮ ಜರುಗಿಸುವಂತೆ ಶಾಲಾ ವ್ಯವಸ್ಥಾಪಕ ಮಂಡಳಿಗೆ ಸೂಚಿಸಲಾಗಿದೆ.

ವಿವಾದ ಸೃಷ್ಟಿಸಿದ 5ನೇ ಪ್ರಶ್ನೆ ಉಪಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಕೂಟದ (ಸೋಷಿಯಲ್ ಸೈನ್ಸ್ ಕ್ಲಬ್) ವತಿಯಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಈ ರಸಪ್ರಶ್ನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಇದರಲ್ಲಿ ಕೇಳಲಾಗಿದ್ದ ಒಟ್ಟು 15 ಪ್ರಶ್ನೆಗಳ ಪೈಕಿ 5ನೇ ಪ್ರಶ್ನೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಯಿತು. "ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆಗೆ ಒಳಗಾದ ಸ್ವಾತಂತ್ರ್ಯ ಹೋರಾಟಗಾರ ಯಾರು?" ಎಂಬ ಪ್ರಶ್ನೆಗೆ, ವಿ.ಡಿ. ಸಾವರ್ಕರ್ ಅವರ ಹೆಸರನ್ನು ಅಧಿಕೃತ ಉತ್ತರವೆಂದು ಹೆಸರಿಸಲಾಗಿತ್ತು.

ಈ ಪ್ರಶ್ನೆಯು ಇತಿಹಾಸವನ್ನು ತಿರುಚುವ ಪ್ರಯತ್ನ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ಮತ್ತು ರಾಜಕೀಯ ಮುಖಂಡರು ಪ್ರತಿಭಟನೆ ನಡೆಸಿದ್ದರು.

ಸರ್ಕಾರದ ಸ್ಪಷ್ಟನೆ:-

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಸಚಿವರು ತಕ್ಷಣದ ತನಿಖೆಗೆ ಆದೇಶಿಸಿದ್ದರು. ಕಾಸರಗೋಡು ಉಪ ಶಿಕ್ಷಣ ನಿರ್ದೇಶಕರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಶಿಕ್ಷಕ ಗುರುಪ್ರಸಾದ್ ನೇತೃತ್ವದ ತಂಡವೇ ಈ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿರುವುದು ದೃಢಪಟ್ಟಿದೆ.

ಇಲಾಖೆಯ ಅಧಿಕೃತ ಶೈಕ್ಷಣಿಕ ಕ್ಯಾಲೆಂಡರ್‌ನಲ್ಲಿ ಈ ರಸಪ್ರಶ್ನೆ ಕಾರ್ಯಕ್ರಮ ಇರಲಿಲ್ಲ ಮತ್ತು ಇದಕ್ಕೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಪ್ರಕರಣದ ಕುರಿತು ಸರ್ಕಾರದ ಮಟ್ಟದಲ್ಲಿ ಸದ್ಯ ಉನ್ನತ ಮಟ್ಟದ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

KasaragodAccusecreatingcontroversialquizTeachersuspendeservice
share
ವಾರ್ತಾಭಾರತಿ
ವಾರ್ತಾಭಾರತಿ
Next Story
X