Kasargod | ಬೈಕಿಗೆ ಶಾಲಾ ಬಸ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಕಾಸರಗೋಡು, ಆ.20: ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬೋವಿಕ್ಕಾನ ಸಮೀಪದ ಪೊವ್ವಲ್ ಮಾಸ್ತಿಕುಂಡು ಎಂಬಲ್ಲಿ ನಡೆದಿದೆ.
ಗಾಳಿಮುಖ ನೆಟ್ಟಣಿಗೆಯ ಹೊಸಹಿತ್ತಿಲು ನಿವಾಸಿ ಎಸ್. ಶಮ್ಮಾಸ್ ಅಬ್ದುಲ್ಲಾ (25) ಮೃತಪಟ್ಟವರು.
ಶಮ್ಮಾಸ್ ಚೆರ್ಕಳ ಕಡೆಯಿಂದ ಗಾಳಿಮುಖದತ್ತ ಬೈಕಿನಲ್ಲಿ ತೆರಳುತ್ತಿದ್ದಾಗ ಮಾಸ್ತಿಕುಂಡು ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಖಾಸಗಿ ಶಾಲಾ ಬಸ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಶಮ್ಮಾ ಸ್ ರನ್ನು ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಆದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Next Story




