ಕಾಸರಗೋಡು| ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ಕಟ್ಟೆಚ್ಚರದ ಕಣ್ಗಾವಲು ಇರಿಸಲಾಗಿದೆ.
ಶುಕ್ರವಾರ ಸಂಜೆ ಇಮೇಲ್ ಸಂದೇಶವೊಂದು ತಲುಪಿದ್ದು, ಕೂಡಲೇ ಪೊಲೀಸ್ ಇಲಾಖೆ ಪೂರ್ಣ ಕಟ್ಟೆಚ್ಚರ ವಹಿಸಿದೆ.
ಮಾಹಿತಿ ತಲುಪಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ವ್ಯಾಪಕ ತಪಾಸಣೆ ನಡೆಸಿದರು. ತಪಾಸಣೆಯ ಸಮಯದಲ್ಲಿ ಬಾಂಬ್ ಇರುವ ಯಾವುದೇ ಸುಳಿವುಗಳು ಕಂಡು ಬಂದಿಲ್ಲವಾದರೂ, ಅಧಿಕಾರಿಗಳು ಕಟ್ಟೆಚ್ಚರದಲ್ಲಿದ್ದಾರೆ.
ಬಾಂಬ್ ಬೆದರಿಕೆ ಇರುವ ಇಮೇಲ್ ಸಂದೇಶವು ಉಕ್ರೇನ್‌ನಿಂದ ಬಂದಿದೆ ಎಂದು ಹೇಳಲಾಗುತ್ತಿದೆ. ಸಂದೇಶದ ಮೂಲವನ್ನು ಸಹ ತನಿಖೆ ಮಾಡಲಾಗುತ್ತಿದೆ. ಇತ್ತೀಚೆಗೆ, ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಬೆದರಿಕೆ ಸಂದೇಶವೂ ಬಂದಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





