Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯ ಮೇಲೆ...

ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಬೋರ್‌ವೆಲ್ ಲಾರಿ; ಇಬ್ಬರು ಕಾರ್ಮಿಕರು ಮೃತ್ಯು

ಅಪಾಯದಿಂದ ಪಾರಾದ ಮನೆಮಂದಿ

ವಾರ್ತಾಭಾರತಿವಾರ್ತಾಭಾರತಿ3 Oct 2026 9:16 AM IST
share
ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿದ ಬೋರ್‌ವೆಲ್ ಲಾರಿ; ಇಬ್ಬರು ಕಾರ್ಮಿಕರು ಮೃತ್ಯು

ಕಾಸರಗೋಡು: ನಿಯಂತ್ರಣ ತಪ್ಪಿದ ಬೋರ್‌ವೆಲ್ ಲಾರಿಯೊಂದು ರಸ್ತೆ ಬದಿಯ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿಣಾಮ ಇಬ್ಬರು ಹೊರ ರಾಜ್ಯಗಳ ಕಾರ್ಮಿಕರು ಸಾವನ್ನಪ್ಪಿದ ಘಟನೆ ವೆಸ್ಟ್ ಎಳೇರಿ ಗ್ರಾಮದ ವರಕ್ಕಾಡ್ ಜಂಕ್ಷನ್ ಬಳಿ ಶನಿವಾರ ಮುಂಜಾನೆ ನಡೆದಿದೆ.

ಮಧ್ಯಪ್ರದೇಶ ಮೂಲದ ದೇವೇಂದ್ರನ್ ಮತ್ತು ಛತ್ತೀಸ್‌ಗಢ ಮೂಲದ ಮನಾಸಿರ್ ಮೃತಪಟ್ಟವರು. ಇಬ್ಬರೂ ಬೋರ್‌ವೆಲ್ ಲಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎನ್ನಲಾಗಿದೆ.

ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಬೋರ್‌ವೆಲ್ ಲಾರಿ, ವರಕ್ಕಾಡ್ ಜಂಕ್ಷನ್ ಬಳಿಯ ಕಡಿದಾದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದಾಗ ಹಠಾತ್ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಪಕ್ಕದಲ್ಲೇ ಇದ್ದ ಜೇಸನ್ ಎಂಬವರ ಮನೆಯ ಮೇಲೆ ಲಾರಿ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಕಾರ್ಮಿಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ವೇಳೆ ಮನೆಯ ಮೇಲ್ಛಾವಣಿಯ ಒಂದು ಭಾಗ ಸಂಪೂರ್ಣ ಕುಸಿದಿದೆ. ಆದರೆ, ಅದೃಷ್ಟವಶಾತ್ ಮನೆಯಲ್ಲಿದ್ದ ಜೇಸನ್ ಮತ್ತು ಅವರ ಕುಟುಂಬದ ಸದಸ್ಯರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿಯ ಭಾರೀ ಗಾತ್ರದ ಕ್ರೇನ್ ಭಾಗವು ಟೆರೇಸ್‌ನ ಬದಿಗೆ ಸಿಲುಕಿದ್ದರಿಂದ ದೊಡ್ಡ ಮಟ್ಟದ ದುರಂತವೊಂದು ತಪ್ಪಿದಂತಾಗಿದೆ.

ಸ್ಥಳಕ್ಕೆ ಧಾವಿಸಿದ ಪೋಲಿಸರು ಮತ್ತು ರಕ್ಷಣಾ ಸಿಬ್ಬಂದಿ ಲಾರಿಯನ್ನು ತೆರವುಗೊಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags

KasaragodBorewell lorry
share
ವಾರ್ತಾಭಾರತಿ
ವಾರ್ತಾಭಾರತಿ
Next Story
X