ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರದಾನ
► 'ವಾರ್ತಾಭಾರತಿ'ಯ ಹಿರಿಯ ವರದಿಗಾರ್ತಿ ಸತ್ಯವತಿ, ಕೊಡಗಿನ ವರದಿಗಾರ ಇಸ್ಮಾಯೀಲ್ ಗೆ ಪ್ರಶಸ್ತಿ

ಮಂಗಳೂರು: 'ವಾರ್ತಾಭಾರತಿ' ಕನ್ನಡ ದಿನಪತ್ರಿಕೆಯ ಮಂಗಳೂರು ಬ್ಯುರೋದ ಹಿರಿಯ ವರದಿಗಾರ್ತಿ ಸತ್ಯವತಿ ಮತ್ತು ಕೊಡಗು ವಿಶೇಷ ವರದಿಗಾರ ಕಂಡಕೆರೆ ಇಸ್ಮಾಯೀಲ್ ಅವರಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕೊಡಮಾಡುವ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಲಭಿಸಿದೆ.
ಮೇ 3 ಶನಿವಾರ ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಎಲೈನ್ಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಕೃಷಿ ಸಚಿವ ಚೆಲುವರಾಯ ಸ್ವಾಮಿ ಪ್ರಶಸ್ತಿ ಪ್ರದಾನ ಮಾಡಿದರು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಉದ್ಯಮಿ ಕೆ.ಕೆ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
Next Story





