Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು | 48 ಸ್ಥಳೀಯಾಡಳಿತ...

ಕಾಸರಗೋಡು | 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ: 1370 ಮತಗಟ್ಟೆಗಳು ಸಜ್ಜು

ವಾರ್ತಾಭಾರತಿವಾರ್ತಾಭಾರತಿ10 Dec 2025 3:28 PM IST
share
ಕಾಸರಗೋಡು | 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ: 1370 ಮತಗಟ್ಟೆಗಳು ಸಜ್ಜು

ಕಾಸರಗೋಡು: ಜಿಲ್ಲೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಡಿ.11ರಂದು ಚುನಾವಣೆ ನಡೆಯಲಿದ್ದು, ಮತಗಟ್ಟೆಗಳಿರುವ ಮತಯಂತ್ರ ಹಾಗೂ ಸಾಮಗ್ರಿಗಳನ್ನು ಇಂದು ಬೆಳಗ್ಗೆ ವಿತರಿಸಲಾಯಿತು.

ನಾಳೆ ಬೆಳಗ್ಗೆ 7ರಿಂದ ಸಂಜೆ 6 ಗಂಟೆ ತನಕ ಮತದಾನ ನಡೆಯಲಿದೆ. ಡಿ.13ರಂದು ಫಲಿತಾಂಶ ಹೊರಬೀಳಲಿದೆ.

ಜಿಲ್ಲೆಯ 38 ಗ್ರಾಮ ಪಂಚಾಯತ್ ಗಳು, ಮೂರು ನಗರಸಭೆ, ಆರು ಬ್ಲಾಕ್ ಪಂಚಾಯತ್ ಹಾಗೂ ಒಂದು ಜಿಲ್ಲಾ ಪಂಚಾಯತ್ ಸೇರಿದಂತೆ 48 ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ.




ಗ್ರಾಮ ಪಂಚಾಯತ್ ಗಳ 725 ವಾರ್ಡ್ ಗಳಿಗೆ ಒಟ್ಟು 1,242 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ನಗರಸಭೆಗಳ 120 ವಾರ್ಡ್ ಗಳಿಗೆ 128 ಮತಗಟ್ಟೆಗಳು ಸೇರಿದಂತೆ ಒಟ್ಟು 1,370 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಬ್ಲಾಕ್ ಪಂಚಾಯತ್ ಗಳ 92 ಡಿವಿಜನ್ ಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ನ 18 ವಾರ್ಡ್ ಗಳು ಸೇರಿದಂತೆ 955 ವಾರ್ಡ್ ಗಳಿಗೆ ಮತದಾನ ನಡೆಯಲಿದೆ.

ಜಿಲ್ಲೆಯಲ್ಲಿ 11,12,190 ಮತದಾರರಿದ್ದಾರೆ. ಈ ಪೈಕಿ 5,24,022 ಪುರುಷರು ಹಾಗೂ 5,88,156 ಮಹಿಳಾ ಮತದಾರರಿದ್ದಾರೆ.12 ಮಂಗಳಮುಖಿಯರು, 129 ಅನಿವಾಸಿ ಭಾರತೀಯ ಮತದಾರರು ಒಳಗೊಂಡಿದ್ದಾರೆ. ಒಟ್ಟು 1370 ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ.

ಮತಯಂತ್ರ ಸೇರಿದಂತೆ ಚುನಾವಣಾ ಸಾಮಗ್ರಿಗಳ ವಿತರಣೆಗೆ ಆರು ಬ್ಲಾಕ್ ಪಂಚಾಯತ್ ಹಾಗೂ ಮೂರು ನಗರಸಭಾ ಮಟ್ಟದಲ್ಲಿ ಮೂರು ಸೇರಿದಂತೆ 9 ಕೇಂದ್ರಗಳನ್ನು ವ್ಯವಸ್ಥೆ ಗೊಳಿಸಲಾಗಿದೆ.




ಡಿ.11ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ

119 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು. ಚುನಾವಣಾ ಕರ್ತವ್ಯಕ್ಕೆ 6,584 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

2,855 ಅಭ್ಯರ್ಥಿಗಳು

ಜಿಲ್ಲೆಯಲ್ಲಿ 2,855 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. 1,312 ಪುರುಷರು, 1,473 ಮಹಿಳೆಯರು ಒಳಗೊಂಡಿದ್ದಾರೆ.ಜಿಲ್ಲಾ ಪಂಚಾಯತ್ ನ 18 ಡಿವಿಜನ್ ಗಳಿಗೆ 62 ಅಭ್ಯರ್ಥಿಗಳು, ಆರು ಬ್ಲಾಕ್ ಪಂಚಾಯತ್ ಗಳಿಗೆ 293 ಅಭ್ಯರ್ಥಿಗಳು, 38 ಗ್ರಾಮ ಪಂಚಾಯತ್ ಗಳಿಗೆ 2,167 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೂರು ನಗರಸಭೆಗಳಿಗೆ 333 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತಗಟ್ಟೆ ಕೇಂದ್ರಗಳಿಗೆ ರಜೆ

ಮತಗಟ್ಟೆಗಳೆಂದು ಗುರುತಿಸಿರುವ ಶೈಕ್ಷಣಿಕ ಸಂಸ್ಥೆಗಳಿಗೆ ಡಿ.10 ಮತ್ತು 11ರಂದು ರಜೆ ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೆ.ಇನ್ಬಾ ಶೇಖರ್ ಆದೇಶ ನೀಡಿದ್ದಾರೆ. ಮತ ಎಣಿಕೆ ನಡೆಯುವ ಶೈಕ್ಷಣಿಕ ಸಂಸ್ಥೆಗಳಿಗೆ ಡಿ.13ರಂದು ರಜೆ ಘೋಷಿಸಲಾಗಿದೆ. ಮತಗಟ್ಟೆಗಳೆಂದು ಗುರುತಿಸುವ 158 ಅಂಗನವಾಡಿ ಕೇಂದ್ರಗಳಿಗೂ ರಜೆ ಅನ್ವಯವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X