ಕಾಸರಗೋಡು | ದೀಪಾವಳಿ ಪ್ರಯುಕ್ತ ಅಲಂಕಾರ ದೀಪ ಅಳವಡಿಸುತ್ತಿದ್ದಾಗ ವಿದ್ಯುತ್ ಆಘಾತ: ಯುವಕ ಮೃತ್ಯು

ಕಾಸರಗೋಡು: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಸೀತಾಂಗೋಳಿ ಸಮೀಪದ ಪುತ್ತಿಗೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
ಪುತ್ತಿಗೆ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ ( 37) ಮೃತಪಟ್ಟವರು.
ದೀಪಾವಳಿ ಅಂಗವಾಗಿ ಮನೆಯಂಗಳದಲ್ಲಿ ಅಲಂಕಾರ ವಿದ್ಯುದ್ದೀಪಗಳನ್ನು ಅಳವಡಿಸುತ್ತಿದ್ದಾಗ ರಾಜೇಶ್ ಶಾಕ್ ತಗುಲಿದೆ. ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜೇಶ್ ಬಡಗಿ ವೃತ್ತಿ ನಿರ್ವಹಿಸುತ್ತಿದ್ದರು.
Next Story





