Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. Kasaragod | ಎಡನೀರು ಮಠದಲ್ಲಿ...

Kasaragod | ಎಡನೀರು ಮಠದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ22 Sept 2026 2:58 PM IST
share
Kasaragod | ಎಡನೀರು ಮಠದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ

ಕಾಸರಗೋಡು: ಇಂದಿನ ಯಕ್ಷಗಾನ ರಂಗದಲ್ಲಿ ‘ಗದಾಯುದ್ಧ’ ಪ್ರಸಂಗವು ಹಲವು ಬಾರಿ ಕಾಲಮಿತಿಯ ಒತ್ತಡ ಅಥವಾ ಯುದ್ಧಧರ್ಮದ ರಂಗನಡೆಯ ಕೊರತೆಯಿಂದ ಹೆಸರಿಗಷ್ಟೇ ಸೀಮಿತವಾಗುವ ಸಂದರ್ಭಗಳು ಸಾಮಾನ್ಯ. ಆದರೆ ಸೆ.19ರಂದು ಎಡನೀರು ಮಠದಲ್ಲಿ ಪ್ರದರ್ಶನಗೊಂಡ ‘ಗದಾಯುದ್ಧ’ ಪ್ರಸಂಗವು ಆ ಕೊರತೆಯನ್ನು ನೀಗಿಸಿ, ಶೀರ್ಷಿಕೆಗೆ ತಕ್ಕ ಅರ್ಥವನ್ನು ರಂಗಮಂಚದಲ್ಲಿ ಮೂಡಿಸಿದ ಅಪೂರ್ವ ಸಾಂಸ್ಕೃತಿಕ ಪ್ರದರ್ಶನವಾಗಿ ಗಮನ ಸೆಳೆಯಿತು.

ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸಿರಿಬಾಗಿಲು ಪ್ರತಿಷ್ಠಾನ ರೂಪಿಸಿದ ಈ ರಂಗಸಂಕಲ್ಪವು ಯಕ್ಷಗಾನದ ಪಾರಂಪರಿಕ ಯುದ್ಧನಡೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನವಾಗಿ ಮೂಡಿಬಂದಿತು.

ಪ್ರಸಂಗದಲ್ಲಿ ಗದಾಪ್ರಹಾರದ ಪ್ರತಿಯೊಂದು ಸೂಕ್ಷ್ಮ ನಡೆ, ಶಾಸ್ತ್ರೀಯ ಯುದ್ಧನಿಯಮಗಳು ಮತ್ತು ರಂಗಶಿಸ್ತನ್ನು ಕಾಲಮಿತಿಯೊಳಗೆ ಸಮರ್ಥವಾಗಿ ಕಟ್ಟಿಕೊಡಲಾಯಿತು. ಹಿರಿಯ ಕಲಾವಿದರಾದ ಶಂಭಯ್ಯ ಕಂಜರ್ಪಣೆ ಹಾಗೂ ಶ್ರುತಕೀರ್ತಿ ರಾಜ್ ಉಜಿರೆ ಅವರು ಭೀಮ ಮತ್ತು ದುರ್ಯೋಧನ ಪಾತ್ರಗಳಿಗೆ ಜೀವ ತುಂಬಿದರು. ಕೌರವನ ಅಂತಿಮ ಕ್ಷಣದ ಸ್ವಾಭಿಮಾನ, ಭೀಮನ ರೌದ್ರಭಾವ ಮತ್ತು ಗದಾಯುದ್ಧದ ಭೀಕರತೆಯನ್ನು ಹಾವಭಾವ, ಹೆಜ್ಜೆಗಾರಿಕೆ ಹಾಗೂ ಶರೀರಭಾಷೆಯ ಮೂಲಕ ಜೀವಂತವಾಗಿ ಮೂಡಿಸಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದರು.

ಈ ರಂಗಪ್ರಯೋಗಕ್ಕೆ ನಿರ್ದೇಶನ ನೀಡಿದ ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಧರ್ಮಸ್ಥಳ ಮೇಳದ ಪ್ರಧಾನ ಭಾಗವತ ರಾಮಕೃಷ್ಣ ಮಯ್ಯ ಅವರ ರಂಗಜ್ಞಾನ ಮತ್ತು ದೂರದೃಷ್ಟಿ ಪ್ರದರ್ಶನದ ಪ್ರಮುಖ ಆಕರ್ಷಣೆಯಾಯಿತು. ಅವರ ಗಾಯನದ ಏರಿಳಿತಗಳು ಹಾಗೂ ಹಿಮ್ಮೇಳ ಕಲಾವಿದರ ನಾದವೈಭವವು ಪ್ರಸಂಗಕ್ಕೆ ಮತ್ತಷ್ಟು ಮೆರುಗು ನೀಡಿತು.

ಕಾಲಮಿತಿಯ ಸವಾಲಿನ ನಡುವೆಯೂ ಯಕ್ಷಗಾನದ ಪಾರಂಪರಿಕ ರಂಗನಡೆಯನ್ನು ಉಳಿಸಿ ಬೆಳೆಸುವ ಸಿರಿಬಾಗಿಲು ಪ್ರತಿಷ್ಠಾನದ ಈ ಪ್ರಯತ್ನ ಕಲಾಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಯಿತು.

Tags

Kasaragod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X