ಕಾಸರಗೋಡು: ಪ್ಲೈವುಡ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ; ಓರ್ವ ಮೃತ್ಯು, 25ಕ್ಕೂ ಅಧಿಕ ಮಂದಿಗೆ ಗಾಯ

ಕಾಸರಗೋಡು: ಪ್ಲೈವುಡ್ ಫ್ಯಾಕ್ಟರಿಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಓರ್ವ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಕುಂಬಳೆ ಸಮೀಪದ ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಅಸ್ಸಾಂ ನಿವಾಸಿ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
ಫ್ಯಾಕ್ಟರಿಯ ಬಾಯ್ಲರ್ ಸ್ಫೋಟಗೊಂಡು ಈ ದುರಂತ ನಡೆದಿದೆ. ಸ್ಫೋಟದ ತೀವ್ರತೆಗೆ ಪರಿಸರವಾಸಿಗಳು ಬೆಚ್ಚಿ ಬೀಳುವಂತೆ ಮಾಡಿತ್ತು. ಅನಂತಪುರದ ಡೆಕ್ಕೂರು ಪ್ಲೈ ವುಡ್ ಫ್ಯಾಕ್ಟರಿಯಲ್ಲಿನ ಬಾಯ್ಲರ್ ಸ್ಫೋಟಗೊಂಡು ಈ ದುರಂತ ನಡೆದಿದೆ. ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿ, ದುರಂತದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Next Story







