Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. Kasaragod | ಸೋಷಿಯಲ್‌ ಮೀಡಿಯಾ...

Kasaragod | ಸೋಷಿಯಲ್‌ ಮೀಡಿಯಾ ಇನ್ಫ್ಲ್ಯುಯೆನ್ಸರ್ ‘ಚಿನ್ನು ಪಾಪು’ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ9 Feb 2026 6:21 PM IST
share
Kasaragod | ಸೋಷಿಯಲ್‌ ಮೀಡಿಯಾ ಇನ್ಫ್ಲ್ಯುಯೆನ್ಸರ್ ‘ಚಿನ್ನು ಪಾಪು’ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಆತ್ಮಹತ್ಯೆ ಶಂಕೆ

ಕಾಸರಗೋಡು: ಇನ್‌ ಸ್ಟಾಗ್ರಾಮ್‌ ನಲ್ಲಿ 2.06 ಲಕ್ಷಕ್ಕೂ ಹೆಚ್ಚು ಫಾಲೋವರ್‌ ಗಳನ್ನು ಹೊಂದಿದ್ದ ಸಾಮಾಜಿಕ ಮಾಧ್ಯಮದ ಯುವ ಪ್ರಭಾವಿ ‘ಚಿನ್ನು ಪಾಪು’ ಅವರು ಸೋಮವಾರ ಕಾಸರಗೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆನ್‌ಲೈನ್‌ನಲ್ಲಿ ‘ಚಿನ್ನು ಪಾಪು’ ಎಂದು ಪರಿಚಿತರಾಗಿದ್ದ ಅವರನ್ನು ದೇಲಂಪಾಡಿ ಪಂಚಾಯತ್‌ ನ ಅಧೂರ್ ಮೂಲದ ರೇಷ್ಮಾ (24) ಎಂದು ಗುರುತಿಸಲಾಗಿದೆ. ಕಾಸರಗೋಡು ಪಟ್ಟಣದ ಸಮೀಪದ ಉಳಿಯತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮಧ್ಯಾಹ್ನ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರೇಷ್ಮಾ ಅವರು ಪ್ರೇಮ ವಿವಾಹವಾಗಿದ್ದರೂ, ಒಂದು ತಿಂಗಳ ಹಿಂದಷ್ಟೇ ಪತಿಯಿಂದ ವಿಚ್ಛೇದನ ಪಡೆದಿದ್ದರು. ಅವರ ನಾಲ್ಕು ವರ್ಷದ ಮಗು ಅಧೂರ್‌ನಲ್ಲಿ ಪೋಷಕರ ಮನೆಯಲ್ಲಿತ್ತು ಎಂದು ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ತಕ್ಷಣ ನೆರೆಹೊರೆಯವರು ರೇಷ್ಮಾರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಪೋಷಕರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ʼಚಿನ್ನು ಪಾಪುʼ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿದ್ದು, ಗ್ರಾಮೀಣ ಜೀವನಶೈಲಿ, ಸ್ಥಳೀಯ ಆಹಾರ, ಪ್ರವಾಸಿ ಸ್ಥಳಗಳು ಹಾಗೂ ತುಳು ಭಾಷೆಯ ಕುರಿತ ವಿಚಾರಗಳ ಮೂಲಕ ಹೆಚ್ಚಿನ ಫಾಲೋವರ್‌ ಗಳನ್ನು ಹೊಂದಿದ್ದರು. ಸಾಮಾನ್ಯವಾಗಿ 7ರಿಂದ 10ದಿನಗಳಿಗೊಮ್ಮೆ ಕಂಟೆಂಟ್ ಗಳನ್ನು ಪೋಸ್ಟ್‌ ಮಾಡುತ್ತಿದ್ದರು. ಆರು ದಿನಗಳ ಹಿಂದಷ್ಟೇ ಹಂಚಿಕೊಂಡಿದ್ದ ತರಕಾರಿಯ ಕುರಿತ ಕೊನೆಯ ಪೋಸ್ಟ್‌ಗೆ ಸುಮಾರು 5,800 ಲೈಕ್‌ ಗಳು ಬಂದಿದ್ದವು.

ಅವರ ಸಾವಿನ ಸುದ್ದಿ ಸಾಮಾಜಿಕ ಮಾಧ್ಯಮ ಬಳಗದಲ್ಲೂ ಆಘಾತ ಮೂಡಿಸಿದೆ.

ಕಾರುಗಳು ಮತ್ತು ತಂತ್ರಜ್ಞಾನ ವಿಷಯಗಳಿಗಾಗಿ ಪರಿಚಿತರಾದ, ರೀಲ್ ಮಾಡುವ ಗೋಪಿಕೃಷ್ಣ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದು, “ಇಂತಹ ನಗುವಿನೊಂದಿಗೆ ಎಲ್ಲರೊಂದಿಗೆ ಬೆರೆಯುತ್ತಿದ್ದ ವ್ಯಕ್ತಿ ಹೀಗೆ ಅಕಸ್ಮಾತ್ ತೆರಳಿರುವುದು ಅರ್ಥವಾಗುತ್ತಿಲ್ಲ” ಎಂದು ಪೋಸ್ಟ್‌ ಮಾಡಿದ್ದಾರೆ.

ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಮರಣೋತ್ತರ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೌಜನ್ಯ: onmanorama.com

Tags

KasaragodSocialmediainfluencerChinnu Papufound dead
share
ವಾರ್ತಾಭಾರತಿ
ವಾರ್ತಾಭಾರತಿ
Next Story
X