Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಜಿಲ್ಲಾಧಿಕಾರಿಯಾಗಿ...

ಕಾಸರಗೋಡು: ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ16 Sept 2026 12:23 PM IST
share
ಕಾಸರಗೋಡು: ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅಧಿಕಾರ ಸ್ವೀಕಾರ

ಕಾಸರಗೋಡು: ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ನೂತನ ಡಿಸಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಶ್ರೀಧನ್ಯಾ ಸುರೇಶ್, ಜಿಲ್ಲೆಯಲ್ಲಿ ಏಮ್ಸ್ (AIIMS) ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನಾ ವರದಿಯನ್ನು ಸಿದ್ಧಪಡಿಸಲಾಗುವುದು ಮತ್ತು ಇದಕ್ಕಾಗಿ ವಿಸ್ತೃತ ಅಧ್ಯಯನ ನಡೆಸಲಾಗುವುದು ಎಂದ ಅವರು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ವರ್ಗದ ಜನರ ಬೆಂಬಲ ಮತ್ತು ಸಹಕಾರ ಅಗತ್ಯ ಎಂದರು.

ಮೊದಲ ಬುಡಕಟ್ಟು ಮಹಿಳಾ ಡಿಸಿ

ಪರಿಶಿಷ್ಟ ಪಂಗಡ ಸಮುದಾಯದಿಂದ ಕಾಸರಗೋಡು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಶ್ರೀಧನ್ಯಾ ಪಾತ್ರರಾಗಿದ್ದಾರೆ. ಅಲ್ಲದೆ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ ಇವರಾಗಿದ್ದಾರೆ. 2019ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಶ್ರೀಧನ್ಯಾ, 2018ರ ಮೊದಲ ಪ್ರಯತ್ನದಲ್ಲೇ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 410ನೇ ರ‍್ಯಾಂಕ್ ಗಳಿಸಿದ್ದರು. ಈ ಮೂಲಕ ಕೇರಳ ರಾಜ್ಯದ ಪರಿಶಿಷ್ಟ ಪಂಗಡ ಸಮುದಾಯದಿಂದ ಐಎಎಸ್ ತೇರ್ಗಡೆಯಾದ ಮೊದಲ ಮಹಿಳೆ ಎಂಬ ಇತಿಹಾಸ ನಿರ್ಮಿಸಿದ್ದರು.ಇವರು ಕಲ್ಲಿಕೋಟೆ ದೇವಗಿರಿ ಕಾಲೇಜಿನಿಂದ ಝೂಲಜಿಯಲ್ಲಿ ಪದವಿ ಮತ್ತು ಕಲ್ಲಿಕೋಟೆ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಉತ್ತರಾಖಂಡದ ಮಸೂರಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ ಪೂರ್ಣಗೊಳಿಸಿದ ಇವರು, ಈ ಹಿಂದೆ ಕಲ್ಲಿಕೋಟೆ ಸಹಾಯಕ ಕಲೆಕ್ಟರ್, ಪೆರಿಂದಲ್ಮಣ್ಣ ಸಬ್ ಕಲೆಕ್ಟರ್, ನೋಂದಣಿ ಇಲಾಖೆ ಇನ್ಸ್ಪೆಕ್ಟರ್ ಜನರಲ್ (ಐಜಿ) ಮತ್ತು ಆಹಾರ ಸುರಕ್ಷತಾ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಇವರು ವಯನಾಡ್‌ನ ಪೊಝುತನಾ ಇಡಿಯಂವಯಲ್ ಅಂಬಲಕೊಲ್ಲಿಯ ಸುರೇಶ್ ಮತ್ತು ಕಮಲಾ ದಂಪತಿಯ ಪುತ್ರಿಯಾಗಿದ್ದು, ಗಾಯಕ್ ಆರ್. ಚಂದ್ ಅವರ ಪತ್ನಿಯಾಗಿದ್ದಾರೆ.

Tags

KasaragodSridhanya SureshDistrict Collector
share
ವಾರ್ತಾಭಾರತಿ
ವಾರ್ತಾಭಾರತಿ
Next Story
X