ಕಾಸರಗೋಡು: ಮನೆಯ ಆವರಣ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕಾಸರಗೋಡು: ಮನೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಅದೂರು ಸಮೀಪ ನಡೆದಿದೆ.
ಆದೂರು ಸಂಜಕಡವು ನಿವಾಸಿ ಅಬೂಬಕ್ಕರ್ ಎಂಬವರ ಮಕ್ಕಳಾದ ಮುಸಮ್ಮಿಲ್ (14) ಮತ್ತು ಮುನ್ಸಿರ್ (10) ಮೃತಪಟ್ಟವರು ಎಂದು ತಿಳಿದುಬಂದಿದೆ.
ಭಾರೀ ಮಳೆಗೆ ಮನೆಯ ಆವರಣ ಗೋಡೆ ಕುಸಿದು ಬಿದ್ದು ಈ ಘಟನೆ ನಡೆದಿದೆ. ಮತ್ತೋರ್ವ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Next Story






