ಕಾಸರಗೋಡು: ರೈಲು ಢಿಕ್ಕಿಯಾಗಿ ಇಬ್ಬರು ಯುವಕರು ಮೃತ್ಯು
Photo credit: onmanorama.com
ಕಾಸರಗೋಡು, ಜ.30: ರೈಲು ಢಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಪಳ್ಳಂ ರೈಲ್ವೇ ಸೇತುವೆ ಬಳಿ ಇಂದು ಮುಂಜಾನೆ ಸಂಭವಿಸಿದೆ.
20ರಿಂದ 25 ವರ್ಷದೊಳಗಿನ ಇಬ್ಬರು ಯುವಕರು ಮೃತಪಟ್ಟಿದ್ದು, ಅವರ ಗುರುತು ಪತ್ತೆಯಾಗಿಲ್ಲ.
ಇಂದು ಮುಂಜಾನೆ 5:30ರ ಸುಮಾರಿಗೆ ಇಬ್ಬರು ಯುವಕರ ಮೃತದೇಹಗಳು ಹಳಿಯಲ್ಲಿ ಪತ್ತೆಯಾಗಿವೆ.
ಸ್ಥಳೀಯರು ನೀಡಿದ ಮಾಹಿತಿಯಂತೆ ರೈಲ್ವೆ ಪೊಲೀಸರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story