Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು | ಚಿನ್ನಾಭರಣ ಕಳವು ಆರೋಪದಿಂದ...

ಕಾಸರಗೋಡು | ಚಿನ್ನಾಭರಣ ಕಳವು ಆರೋಪದಿಂದ ನೊಂದು ಯುವತಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ22 Feb 2026 11:00 AM IST
share
ಕಾಸರಗೋಡು | ಚಿನ್ನಾಭರಣ ಕಳವು ಆರೋಪದಿಂದ ನೊಂದು ಯುವತಿ ಆತ್ಮಹತ್ಯೆ

ಕಾಸರಗೋಡು: ಚಿನ್ನಾಭರಣ ಕಳವು ಆರೋಪದಿಂದ ಮಾನಸಿಕವಾಗಿ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಸಮೀಪದ ನೆಲ್ತಡ್ಕ ದಲ್ಲಿ ನಡೆದಿದೆ.

ನೆಲ್ತಡ್ಕ ನಿವಾಸಿ ಜಸೀಲಾ (24) ಮೃತಪಟ್ಟವರು. ಇವರು ನೆರೆಮನೆಯವರ ಹಾಗೂ ಪೊಲೀಸರಿಂದ ಮಾನಸಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಪತಿ ಮನೆಯ ಸಮೀಪದ ಯುವಕ ಹಾಗೂ ಆತನ ಕುಟುಂಬಸ್ಥರು ಜಸೀಲಾ ವಿರುದ್ಧ ಚಿನ್ನಾಭರಣ ಕಳವು ಆರೋಪ ಹೊರಿಸಿದ್ದರು. ಪೊಲೀಸ್ ದೂರು ಕೂಡಾ ನೀಡಿದ್ದರು. ಈ ಸಂಬಂಧ ಜಸೀಲಾರನ್ನು ಪೊಲೀಸ್ ಠಾಣೆಗೆ ಕೊಂಡೊಯ್ದು ಪೊಲೀಸರು ವಿಚಾರಣೆ ಹೆಸರಲ್ಲಿ ಮಾನಸಿಕವಾಗಿ ಕಿರುಕುಳ ನೀಡಿದ್ದರು ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರೂ ಚಿನ್ನಾಭರಣ ಕಳವಿಗೆ ಸಂಬಂಧಿಸಿ ಜಸೀಲಾ ವಿರುದ್ಧ ಯಾವುದೇ ಸುಳಿವು, ಸಾಕ್ಷ್ಯಗಳು ಲಭಿಸದ ಹಿನ್ನೆಲೆಯಲ್ಲಿ ಅವರು ಬಿಡುಗಡೆ ಗೊಳಿಸಲಾಗಿತ್ತು. ಎರಡು ಮಕ್ಕಳ ತಾಯಿಯಾದ ಜಸೀಲಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲೂ ಅಪಪ್ರಚಾರ ನಡೆಸಲಾಗಿತ್ತು. ಇದು ಮಾನಸಿಕವಾಗಿ ಅವರನ್ನು ಕುಗ್ಗಿಸಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಇವೆಲ್ಲದರಿಂದ ಮನನೊಂದಿದ್ದ ಜಸೀಲಾ ಕಳೆದ ರವಿವಾರ ತಾನು ಅಮಾಯಕಿ ಎಂದು ವಿಡಿಯೋ ಚಿತ್ರೀಕರಣ ಮಾಡಿ ವಿಷ ಸೇವಿಸಿದ್ದಳು ಎನ್ನಲಾಗಿದೆ. ಇದರಿಂದ ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ.

ಅದೂರು ಠಾಣಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

Kasargodsuicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X