Kasargod | ನಿರ್ಮಾಣ ಹಂತದ ಕಟ್ಟಡದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಮೃತದೇಹ ಪತ್ತೆ: ಕೊಲೆ ಶಂಕೆ

ಸಾಂದರ್ಭಿಕ ಚಿತ್ರ
ಕಾಸರಗೋಡು: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಸಮೀಪದ ನಿರ್ಮಾಣ ಹಂತದ ಕಟ್ಟಡದಲ್ಲಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ರಾತ್ರಿ ಪತ್ತೆಯಾಗಿದೆ.
ಮೃತದೇಹದ ಅಂಗಿಯ ಜೇಬಿನಲ್ಲಿ ದೊರೆತ ದಾಖಲೆಯಿಂದ ಕರ್ನಾಟಕ ಮೂಲದ ಮಂಜುನಾಥ್ (46) ಎಂಬ ಮಾಹಿತಿ ಲಭಿಸಿದೆ. ಕಟ್ಟಡದ ಲಿಫ್ಟ್ ಗಾಗಿ ತೋಡಿರುವ ಹೊಂಡದಲ್ಲಿ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಕಟ್ಟಡದ ಮೇಲಂತಸ್ತಿ ನಲ್ಲಿ ರಕ್ತದ ಕಲೆಗಳು ಕಂಡುಬಂದಿದೆ. ಕೊಲೆಗೈದು ಬಳಿಕ ಎಳೆದೊಯ್ಡು ಹೊಂಡಕ್ಕೆ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.
ಮೃತದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





