Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು ಕನ್ನಡ ಗ್ರಾಮದಲ್ಲಿ...

ಕಾಸರಗೋಡು ಕನ್ನಡ ಗ್ರಾಮದಲ್ಲಿ ಜಿಲ್ಲಾಮಟ್ಟದ 'ಕಾಸರಗೋಡು ದಸರಾ -2024 ' ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Oct 2024 1:50 PM IST
share
ಕಾಸರಗೋಡು ಕನ್ನಡ ಗ್ರಾಮದಲ್ಲಿ ಜಿಲ್ಲಾಮಟ್ಟದ ಕಾಸರಗೋಡು ದಸರಾ -2024  ಗೆ ಚಾಲನೆ

ಕಾಸರಗೋಡು: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಉತ್ಸವವನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ಆಚರಿಸಿಕೊಂಡು ಬರುತ್ತಿರುವ ಕಾಸರಗೋಡು ದಸರಾ ಉತ್ಸವವನ್ನು ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ರಾಮನಗರ, ಕಾಸರಗೋಡು ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ, ಕಾಸರಗೋಡು ,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ,ಕಾಸರಗೋಡು ಇದರ ಸಹಯೋಗ, ಪ್ರಾಯೋಜಕತ್ವದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ನವರಾತ್ರಿ ಶುಭಾರಂಭದಲ್ಲಿ ಚಾಲನೆ ನೀಡಲಾಯಿತು.

ಕಾಸರಗೋಡು ದಸರಾ ಉತ್ಸವವನ್ನು ಕಾಸರಗೋಡು ಪೇಟೆ ಮಲ್ಲಿಕಾರ್ಜುನ ದೇವಸ್ಥಾನದ ಟ್ರಸ್ಟಿ ಡಾ. ಕೆ.ಎನ್ ವೆಂಕಟರಮಣ ಹೊಳ್ಳ ದೀಪ ಬೆಳಗಿಸಿ ಉದ್ಘಾಟಿಸಿದರು.

ದಸರಾ ಉತ್ಸವವನ್ನು ಕನ್ನಡ ನಾಡಿನಾದ್ಯಂತ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ನಾಡಿನಿಂದ ಹೊರಗುಳಿದಿರುವ ಅಚ್ಚಕನ್ನಡ ಪ್ರದೇಶ ಕಾಸರಗೋಡಿನಲ್ಲೂ ಆಚರಿಸುತ್ತೇವೆ. ನಿರಂತರ ಮಲಯಾಳೀಕರಣದ ಮಧ್ಯೆ ಕಾಸರಗೋಡಿನಲ್ಲಿ ಕನ್ನಡ ಸಂಸ್ಕೃತಿಯ ಸಂವರ್ಧನೆಗಾಗಿ ಇಂತಹ ಆಚರಣೆ ಅನಿವಾರ್ಯವಾಗಿದೆ ಎಂದು ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಧಾರ್ಮಿಕ ಸಾಂಸ್ಕೃತಿಕ ಸಂಘಟಕ ಕೆ .ಗುರುಪ್ರಸಾದ್ ಕೋಟೆಕಣಿ ಅವರು ಭಾಷಣದಲ್ಲಿ ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು, ಕನ್ನಡ ಗ್ರಾಮದಲ್ಲಿ ಇದೇ ನವೆಂಬರ್ 10 ರಂದು ನಡೆಯುವ ಕೇರಳ ರಾಜ್ಯ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಕಾಸರಗೋಡು ಜಿಲ್ಲೆ ಸಹಿತ ಕರ್ನಾಟಕದಿಂದ ಸುಮಾರು 1000 ಮಕ್ಕಳು ಹಾಗೂ ಹೆತ್ತವರು ,ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಕಾಸರಗೋಡಿನ ಎಲ್ಲಾ ಸಂಘ-ಸಂಸ್ಥೆಗಳು ಶಾಲಾ-ಕಾಲೇಜಿನ ಆಡಳಿತ ವರ್ಗದವರು ಸಂಪೂರ್ಣ ಸಹಕರಿಸಬೇಕೆಂದು ಕೋರಿದರು.

ಮುಖ್ಯ ಅತಿಥಿಯಾಗಿ ಕಾಸರಗೋಡು ನಗರಸಭೆಯ ಕೌನ್ಸಿಲರ್ ಶಾರದ, ನಿವೃತ್ತ ಅಧ್ಯಾಪಕ ನಾರಾಯಣ ಮಾಸ್ಟರ್ ಅಣಂಗೂರು, ಕಾಸರಗೋಡು ಅಡ್ಕತ್ತಬೈಲ್ ನ ಮಹಾವಿದ್ಯಾದಾಯಿನಿ ಫೌಂಡೇಶನ್ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀ ವಲ್ಲಿ ಎನ್ .ಆರ್ ಭಾಗವಹಿಸಿದ್ದರು.

ವಿ‌ಹಿಂಪ ಕಾಸರಗೋಡು ನಗರ ಸಮಿತಿ ಆಶ್ರಯದಲ್ಲಿ ನವರಾತ್ರಿಯ ಪ್ರಯುಕ್ತ ವಿವಿಧ ಧಾರ್ಮಿಕ ಕ್ಷೇತ್ರ ಮಠ ಮಂದಿರಗಳಲ್ಲಿ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮದ ಅಂಗವಾಗಿ 'ದಸರಾ ಸತ್ಸಂಗವನ್ನು 'ಹರಿದಾಸ ಜಯಾನಂದ ಕುಮಾರ್ ಅನಂತಪುರ ನೀಡಿದರು.

ಮಾಜಿ ಕೌನ್ಸಿಲರ್ ಶಂಕರ್ ಕೆ.ಜೆ ಪಿ ನಗರ ಸ್ವಾಗತಿಸಿದರು. ಶ್ರೀಮತಿ ಕಾವ್ಯ ಕುಶಲ ಧನ್ಯವಾದವಿತ್ತರು. ಕೆ .ಜಗದೀಶ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು.

ಅಮ್ಮ ಇವೆಂಟ್ಸ್ ಕನ್ನಡ ಗ್ರಾಮದ ಮಾಲಕ ಕುಶಲಕುಮಾರ್ ,ಕೆ .ಅನಿಲ್ ರಾಜ್ ನಾಗರಕಟ್ಟೆ ,ಅಶ್ವಿನಿ ಗುರುಪ್ರಸಾದ್, ರಾಧಾ ಶಿವರಾಮ ಶ್ರೀಕಾಂತ್ ಕಾಸರಗೋಡು ,ಸವಿತಾ ಕಿಶೋರ್ ,ನಿಶ್ಮಿತಾ ಮಿಥುನ್ , ಸೌಮ್ಯ ನಾಗರಕಟ್ಟೆ ಸಹಕರಿಸಿದರು.

ಸಾಂಸ್ಕೃತಿಕ ಕಲಾ ವೈಭವದಲ್ಲಿ ಅಡ್ಕತ್ತಬೈಲ್ ನ ಮಹಾವಿದ್ಯಾದಾಯಿನಿ ಫೌಂಡೇಶನ್ ಶಾಲೆಯ ವಿದ್ಯಾರ್ಥಿಗಳಿಂದ ಜಾನಪದ ಸಮೂಹ ನೃತ್ಯ, ಸಮೂಹ ಗಾಯನ ಹಾಗೂ 'ಫಿಂಗರ್ ಡ್ರಮ್ಮರ್' ಮಣಿಕಂಠ ಆಚಾರ್ಯ ಕೋಟೂರು ಇವರಿಂದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ನಡೆಯಿತು.

ಕಾಸರಗೋಡು ದಸರಾ ಪ್ರಯುಕ್ತ ಜಿಲ್ಲೆಯ ವಿವಿಧ ದೇವಸ್ಥಾನಗಳು ಶಾಲೆಗಳು ಹಾಗೂ ಸಾಂಸ್ಕೃತಿಕ ಕೇಂದ್ರಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.



Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X