ಕುಂಬಳೆ: ಲಾರಿಯಿಂದ ಬಿದ್ದು ಕಾರ್ಮಿಕ ಮೃತ್ಯು

ಸಾಂದರ್ಭಿಕ ಚಿತ್ರ
ಕಾಸರಗೋಡು: ಕುಂಬಳೆ ಅನಂತಪುರ ಕೈಗಾರಿಕಾ ಪ್ರದೇಶದಲ್ಲಿ ಲಾರಿಯ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಅಸ್ಸಾಂನ ಪಂಚಿಮ್ ಸಲ್ಪಾರಾ ನಿವಾಸಿ ಹಬೀಬುರ್ರಹ್ಮಾನ್ (51) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುಮಾರು 7:30ರ ವೇಳೆ ಈ ಘಟನೆ ನಡೆದಿದೆ.
ಲಾರಿಗೆ ಪ್ಲೈವುಡ್ ಲೋಡ್ ಮಾಡಿದ ನಂತರ, ಅದರ ಮೇಲೆ ಟರ್ಪಾಲ್ ಹಾಕಿ ಹಗ್ಗದಿಂದ ಬಿಗಿಯುತ್ತಿದ್ದ ವೇಳೆ ಹಬೀಬುರ್ರಹ್ಮಾನ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಜಿಲ್ಲಾ ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ..
ಈ ಘಟನೆಗೆ ಸಂಬಂಧಿಸಿದಂತೆ ಫ್ಯಾಕ್ಟರಿ ಮಾಲಕ ನಿಶಾದ್ ಎಂಬವರ ವಿರುದ್ಧ ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story




